ಸುದ್ದಿ ಸಂಕ್ಷೇಪ
19 ರಂದು ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಸಭೆ
ಹಾಸನ: ಸಂಸದ ಹಾಗೂ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಅಧ್ಯಕ್ಷ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಸೆ 19ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯತಿ ಹೊಯ್ಸಳ ಸಭಾಂಗಣದಲ್ಲಿ 2013-14ನೇ ಸಾಲಿನ ಕೇಂದ್ರ ನಾನಾ ಪುರಸ್ಕಾರ ಯೋಜನೆಯ ಎರಡನೆ ತ್ರೈಮಾಸಿಕ ಪ್ರಗತಿಯನ್ನು ಉಸ್ತುವಾರಿ ಸಮಿತಿ ಸಭೆಯಲ್ಲಿ ಪರಿಶೀಲನೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
217 ಉದ್ಯೋಗ ಆಕಾಂಕ್ಷಿಗಳ ನೋಂದಣಿ
ಹಾಸನ: ಜಿಲ್ಲೆಯ 217 ಅಭ್ಯರ್ಥಿಗಳು ಉದ್ಯೋಗ ಬಯಸಿ ಉದ್ಯೋಗ ವಿನಿಮಯ ಕಚೇರಿಯಲ್ಲಿ ತಮ್ಮ ಹೆಸರು ನೋಂದಾಯಿಸಿದ್ದಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗ ಅಧಿಕಾರಿ ಜೆ.ಬಿ.ವಿಜಯಲಕ್ಷ್ಮಿ ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ 17 ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಹತೆ ಪಡೆದಿರುವ 125 ಅಭ್ಯರ್ಥಿಗಳು, ಪದವೀಧರರು 45 ಹಾಗೂ ತಾಂತ್ರಿಕ ವಿದ್ಯಾರ್ಹತೆ ಪಡೆದಿರುವ 30 ಅಭ್ಯರ್ಥಿ ಸೇರಿದಂತೆ ಒಟ್ಟು 217 ಮಂದಿ ತಮ್ಮ ಹೆಸರು ನೋಂದಾಯಿಸಿದ್ದಾರೆ. ಪರಿಶಿಷ್ಟ ಜಾತಿ 944 ಮಂದಿ, ಪರಿಶಿಷ್ಟ ಪಂಗಡದ 138 ಮಂದಿ, ಅಂಗವಿಕಲರು 460 ಮಂದಿ ಸೇರಿದಂತೆ ಮಾಸಾಂತ್ಯಕ್ಕೆ ಜೀವದಾಖಲೆಯಲ್ಲಿ 13,071 ಅಭ್ಯರ್ಥಿಗಳಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

