ಪ್ರಧಾನಿ ಅಭ್ಯರ್ಥಿ ಮೋದಿ: ಕಾರ್ಯಕರ್ತರ ಸಂಭ್ರಮ
ಹಾಸನ: ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿರುವುದುನ್ನು ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು ನಗರದ ಹೇಮಾವತಿ ಪ್ರತಿಮೆ ಬಳಿ ಶುಕ್ರವಾರ ಸಂಜೆ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಹರ್ಷ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬೆಣ್ಣೂರು ರೇಣುಕುಮಾರ್, ನಗರಾಧ್ಯಕ್ಷ ಎನ್. ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ನಗರಸಭೆ ಮಾಜಿ ಸದಸ್ಯ ಡಿ. ಪ್ರಸನ್ನಕುಮಾರ್, ಬಿಜೆಪಿ ಮಾಜಿ ಅಧ್ಯಕ್ಷ ಎಂ.ಎಸ್. ಕೃಷ್ಣೇಗೌಡ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗೇಶ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚನ್ನಕೇಶವ, ವಿಜಿಕುಮಾರ್ ಐನೆಟ್, ಪ್ರಶಾಂತ್, ರವಿ, ಪುನೀತ್ ಇತರರು ಪಾಲ್ಗೊಂಡಿದ್ದರು.
ಹೊಳೆನರಸೀಪುರ ವರದಿ: ಭಾರತೀಯ ಜನತಾ ಪಕ್ಷ ಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಗುಜರಾತ್ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಘೋಷಣೆ ಮಾಡಿರುವುದನ್ನು ಸ್ವಾಗತಿಸಿ ಶುಕ್ರವಾರ ಸಂಜೆ ಪಟ್ಟಣದಲ್ಲಿ ತಾಲೂಕು ಬಿಜೆಪಿ ಘಟಕ ವಿಜಯೋತ್ಸವ ಆಚರಿಸಿತು.
ದೆಹಲಿಯಲ್ಲಿ ಸಭೆ ಸೇರಿದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಮುಖಂಡರು ನರೇಂದ್ರ ಮೋದಿ ಅವರನ್ನು ತನ್ನ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಿದ್ದಂತೆ ಪಟ್ಟಣದ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ತಾಲೂಕು ಘಟಕದ ಅಧ್ಯಕ್ಷ ಮಾರಗೌಡನಹಳ್ಳಿ ಎಂ.ಎನ್.ರಾಜು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೈಲಾರಯ್ಯ, ತಾಲೂಕು ಘಟಕ ಕಾರ್ಯದರ್ಶಿ ದಿವಾಕರ್, ಯುವ ಮೋರ್ಚಾ ಅಧ್ಯಕ್ಷ ರೋಹಿತ್, ದೀಪಕ್, ಎಚ್.ಆರ್.ಕೃಷ್ಣಪ್ಪ ಮತ್ತಿತರರು ಇದ್ದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ಕಾರ್ಯಕರ್ತ ಎಚ್.ಆರ್.ಕೃಷ್ಣಪ್ಪ ಅವರನ್ನು ಬಿಜೆಪಿ ಕಡೆಗೆಣಿಸಿದೆ ಎಂದು ಪಕ್ಷದಿಂದ ದೂರವಾಗಿ ಯಡಿಯೂರಪ್ಪನವರ ಕೆಜೆಪಿಗೆ ತೆರಳಿದ್ದ ಅವರು ಬಿಜೆಪಿ ಸೇರ್ಪಡೆಯಾದರು.
ಸಕಲೇಶಪುರ ವರದಿ: ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಆಯ್ಕೆಯಾಗಿರುವುದನ್ನು ಬೆಂಬಲಿಸಿ, ಪಟ್ಟಣದಲ್ಲಿ ನಮೋ ಬಿಗ್ರೇಡ್ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಹಿ ಹಂಚಿ ಸಂಭ್ರಮಿಸಿದರು. ಹಳೇ ಬಸ್ನಿಲ್ದಾಣ ಸಮೀಪದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು, ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿ ಭವಿಷ್ಯದ ಪ್ರಧಾನಿ ಎಂಬ ಘೋಷಣೆ ಕೂಗಿ ಸಂಭ್ರಮಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಕ್ಯಾಮನಹಳ್ಳಿ ರಾಜ್ಕುಮಾರ್, ಕಾರ್ಯದರ್ಶಿ ಹೆಬ್ಬನಹಳ್ಳಿ ಸಂದೇಶ್, ನಮೋ ಬಿಗ್ರೇಡ್ ಮುಖಂಡ ದೀಪಕ್, ಗಿರೀಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

