ಹಾಸನ

ಮೋದಿ ಹುಟ್ಟುಹಬ್ಬದ ಅಂಗವಾಗಿ ಬೈಕ್ ರ್ಯಾಲಿ

Published On :

ಸಕಲೇಶಪುರ: ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಹುಟ್ಟುಹಬ್ಬದ ಅಂಗವಾಗಿ ನಮೋ ಬಿಗ್ರೇಡ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿಯನ್ನು ಸೆ. 17 ರಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಮೋ ಬ್ರಿಗೇಡ್ ತಾಲೂಕು ಘಟಕದ ಪ್ರಮುಖ್ ದೀಪಕ್ ಹೇಳಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶವನ್ನು ಅಭಿವೃದ್ಧಿ ನಿಟ್ಟಿನಲ್ಲಿ ಕರೆದೊಯ್ಯುವ ಏಕೈಕ ಆಶಾಕಿರಣವಾಗಿರುವ, ನರೇಂದ್ರಮೋದಿ ಅವರಿಗೆ ಬೆಂಬಲ ನೀಡಲು ನಮೋ ಬ್ರಿಗೇಡ್ ಸಂಘಟನೆಯನ್ನು ಹುಟ್ಟುಹಾಕಲಾಗಿದೆ. ಈಗಾಗಲೇ ಈ ಸಂಘಟನೆ ವತಿಯಿಂದ ತಾಲೂಕಿನ 60 ಹಳ್ಳಿಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.  ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಸಂಘಟನೆ, ಈ ತಿಂಗಳ 17 ರಂದು ಮೋದಿಯವರ ಹುಟ್ಟುಹಬ್ಬದ ಅಂಗವಾಗಿ, ಪಟ್ಟಣದ ಬಾಳೆಗದ್ದೆಯ ಗುಹೆಕಲ್ಲಮ್ಮ ದೇವಸ್ಥಾನದಿಂದ ಬೈಕ್ರ್ಯಾಲಿ ಪ್ರಾರಂಭಿಸಿ, ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಸಲಾಗುವುದು ಹಾಗೂ ಕೌಡಳ್ಳಿ ಎನ್.ಕೆ.ಗಣಪಯ್ಯ ರೋಟರಿ ಶ್ರವಣದೋಷವುಳ್ಳ ಮಕ್ಕಳ ಶಾಲೆಯ ಮಕ್ಕಳೊಂದಿಗೆ ಊಟ ಮಾಡುವ ಮೂಲಕ, ಮೋದಿಯವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಗುವುದು ಎಂದರು. ಗೀರಿಶ್, ಕಾರ್ಯದರ್ಶಿ ಸಂದೇಶ ಶೆಟ್ಟಿ, ಸಂಚಾಲಕ ರಮೇಶ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.