ಹಾಸನ

ಜಿಲ್ಲಾ ಪ್ರಬಂಧ, ಚರ್ಚಾ ಸ್ಪರ್ಧೆ ಉದ್ಘಾಟನೆ

Published On :

ಹಾಸನ: ಜನ ಸಾಮಾನ್ಯರಿಗೆ ಅನುಕೂಲವಾಗಲೆಂದೇ ಸಹಕಾರ ಕ್ಷೇತ್ರದಲ್ಲಿ ವೃದ್ಧಾಶ್ರಮ ಮತ್ತು ಸಹಕಾರಿ ಆಸ್ಪತ್ರೆ ನಿರ್ಮಿಸಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕಾರ್ಲೆ ಇಂದ್ರೇಶ್ ಹೇಳಿದರು.
ಜಿಲ್ಲಾ ಸಹಕಾರ ಯೂನಿಯನ್ ಸಹಕಾರ ಭವನದಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಹಕಾರ ಕ್ಷೇತ್ರದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಹಾಸನ ಹಾಲು ಒಕ್ಕೂಟ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಬಿಈಜಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚರ್ಚಾ ಮತ್ತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಈಜಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಬಿ.ಈ. ಜಗದೀಶ್ ಮಾತನಾಡಿ, ಆರ್ಥಿಕವಾಗಿ ದುರ್ಬಲವಾಗಿರುವವರನ್ನು ಪರಸ್ಪರ ಸಹಕಾರದಿಂದ ಅವರನ್ನು ಮೇಲೆ ತರುವ ಅಥವಾ ರಕ್ಷಿಸುವ ಸಾಮಾಜಿಕ ಕಾರ್ಯದ ಕೆಲಸ ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ. ಕನಿಷ್ಟ 10 ಜನ ಸದಸ್ಯರಿಂದ ಆರಂಭವಾದ ಸಹಕಾರ ಸಂಘ ಪ್ರಸ್ತುತ ಸಾವಿರಾರು ಜನರ ಸ್ವಾವಲಂಬನೆಗೆ ಆರ್ಥಿಕ ಸಹಾಯ ನೀಡುವ ಮೂಲಕ ಆಶಾಕಿರಣವಾಗಿದೆ. ಸಹಕಾರ ಯೂನಿಯನ್ ನಿರಂತರವಾಗಿ ಈ ರೀತಿಯ ಕಾರ್ಯವನ್ನು ನಿರ್ವಹಿಸುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.