ದೇವೇಗೌಡರನ್ನು ಟೀಕಿಸುವುದೇ ಶಿವರಾಂ ಸಾಧನೆ: ಹನುಮೇಗೌಡ
ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಟೀಕಿಸುವುದೇ ಸಾಧನೆ ಎಂದು ತಿಳಿದುಕೊಂಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಶಿವರಾಂ ಈಗಲಾದರೂ ಉತ್ತಮ ಕೆಲಸಗಳನ್ನು ಮಾಡಿ ಜನರ ಪ್ರೀತಿ, ವಿಶ್ವಾಸ ಗಳಿಸಲಿ ಎಂದು ಹಾಸನ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮೇಗೌಡ ತಿಳಿಸಿದ್ದಾರೆ. ಪ್ರತಿ ಸಂದರ್ಭದಲ್ಲೂ ಮಾಧ್ಯಮ ಮುಂದೆ ದೇವೇಗೌಡ ಮತ್ತು ರೇವಣ್ಣನವರ ಬಗ್ಗೆ ಸಲ್ಲದ ಆರೋಪ ಮಾಡುತ್ತಿರುವ ಬಿ.ಶಿವರಾಂ ನಿಜವಾದ ಕೆಲಸಗಾರರೇ ಆಗಿದ್ದರೆ, ಕಳೆದ ಚುನಾವಣೆಗಳಲ್ಲಿ ಸೋಲು ಅನುಭವಿಸುತ್ತಿರಲಿಲ್ಲ. ಅವರ ಅದಕ್ಷತೆಯಿಂದಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ನೆಲಕಚ್ಚಿರುವುದು ವರಿಷ್ಠರಿಗೆ ತಿಳಿದಿದೆ. ನಾಯಕತ್ವ ಇಲ್ಲದ ಕಾರಣ ಬಿ.ಶಿವರಾಂ ಅವರನ್ನೇ ಅಧ್ಯಕ್ಷರನ್ನಾಗಿ ಮುಂದುವರೆಸುವ ಮೂಲಕ ಹಾಳೂರಿಗೆ ಉಳಿದವನೇ ಗೌಡ ಎಂಬಂತಾಗಿದೆ ಎಂದರು. ದುರುದ್ದೇಶದಿಂದ ಟೀಕೆ ಮಾಡುವುದು ಸಜ್ಜನ ರಾಜಕಾರಣಿ ಲಕ್ಷಣವಲ್ಲ ಎಂಬುದನ್ನೂ ಅರ್ಥ ಮಾಡಿಕೊಳ್ಳಬೇಕೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

