ಇಸ್ರೋದಿಂದ ಯುವ ಪೀಳಿಗೆಗೆ ವೇದಿಕೆ ಸೃಷ್ಟಿ
ಕ.ಪ್ರ. ವಾರ್ತೆ ಹಾಸನ ಸೆ. 15
ವಿಜ್ಞಾನ ಮತ್ತು ತಂತ್ರಜ್ಞಾನದ ಮಹತ್ವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇಂದ್ರ ಸರ್ಕಾರ 12ನೇ ಪಂಚವಾರ್ಷಿಕ ಯೋಜನೆಯಲ್ಲಿ ಸಿದ್ದಪಡಿಸಿದೆ ಎಂದು ಯೋಜನಾ ಆಯೋಗದ ಸದಸ್ಯ ಡಾ.ಕೆ.ಕಸ್ತೂರಿರಂಗನ್ ತಿಳಿಸಿದರು.
ಮಲೆನಾಡು ತಾಂತ್ರಿಕ ಎಂಜನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ಜಾಗತಿಕ ಜಗತ್ತಿನಲ್ಲಿ ಸ್ಪರ್ಧೆ ಹೆಚ್ಚಾಗುತ್ತಿದ್ದು ದೇಶದ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಮಹತ್ವದ ಪಾತ್ರವಹಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಕಾಳಜಿ ವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ದೇಶವು ಸ್ವಯಂ ಶಕ್ತಿಯಿಂದ ಉಪಗ್ರಹಗಳನ್ನು ಸಿದ್ದಪಡಿಸುವ ಮೂಲಕ ಬಾಹ್ಯಾಕಾಶ ಸಂಶೋಧನೆಯಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡುತ್ತಿದೆ. ದೇಶವು ಈ ಕ್ಷೇತ್ರದಲ್ಲಿ ಸ್ವಯಂ ಶಕ್ತಿಯನ್ನು ತೋರುತ್ತಿದ್ದು ಎಂದ ಅವರು, ಇಸ್ರೋ ಯುವ ಪೀಳಿಗೆಗೆ ಹೊಸ ಹೊಸ ವೇದಿಕೆಗಳನ್ನು ಕಲ್ಪಿಸಿಕೊಡುತ್ತಿದ್ದು ಇದರ ಸದುಪಯೋಗ ಪಡೆದುಕೊಂಡು ಸಾಧನೆಯ ಹಾಗೂ ಯಶಸ್ ಕಾಣಬೇಕು ಎಂದು ಅವರು ಹೇಳಿದರು.
ವಾಸ್ತುಶಿಲ್ಪಗಳ ತವರೂರಾಗಿರುವ ಜಿಲ್ಲೆಯಲ್ಲಿ ಉಪಗ್ರಹವನ್ನು ನಿಯಂತ್ರಿಸುವ ಎಂಸಿಎಫ್ ಹೊಂದಿರುವುದು ಮತ್ತೊಂದು ವಿಶೇಷ. ಎಂಜಿಯರಿಂಗ್ ಕಾಲೇಜುಗಳು ಇಂತಹ ಸಂಸ್ಥೆಗಳೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿ ವಿಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಕುವೆಂಪು ವಿದ್ಯಾಲಯದ ವಿಶ್ರಾಂತ ಕುಲಪತಿ ಕೆ.ಚಿದಾನಂದಗೌಡ ಎಂಜಿನಿಯರಿಂಗ್ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಹೈಕೋರ್ಟ್ ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ, ಕಾಲೇಜಿನ ಪ್ರಾಂಶುಪಾಲ ಎಂ.ವಿ.ಸತ್ಯನಾರಾಯಣ್, ಆಡಳಿತ ಮಂಡಳಿಯ ಆರ್.ಟಿ.ದ್ಯಾವೇಗೌಡ, ತಿಮ್ಮೇಗೌಡ, ರವೀಂದ್ರ, ರವಿ ಪ್ರಕಾಶ್, ಎಂ.ಆರ್.ರಂಗರಾಜ್, ರಾಜಪ್ಪ ಇತರರು ಈ ಸಂದರ್ಭದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

