ಗ್ರಾಮೀಣ ಅಭ್ಯುದಯ ಆರ್ಥಿಕ ಸಾಕ್ಷರತಾ ಕೇಂದ್ರಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ಹಾಸನ ಸೆ.15
ದೇಶದಲ್ಲಿ ಶೇ.40 ರಷ್ಟು ಮಂದಿ ಮಾತ್ರ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದು ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರು ಖಾತೆ ಹೊಂದುವುದು ಅವಶ್ಯಕ ಎಂದು ಗ್ರಾಮೀಣ ಅಭ್ಯುದಯ ಆರ್ಥಿಕ ಸಾಕ್ಷರತಾ ಕೇಂದ್ರದ ಆಡಳಿತ ಟ್ರಸ್ಟಿ ಟಿ.ವಿ.ಭಟ್ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯ್ತಿ ಸಾಮರ್ಥ್ಯ ಸೌಧದಲ್ಲಿ ನೂತನ ಗ್ರಾಮೀಣ ಅಭ್ಯುದಯ ಆರ್ಥಿಕ ಸಾಕ್ಷರತಾ ಕೇಂದ್ರ ಕಚೇರಿಗೆ ಚಾಲನೆ ನೀಡಿ ಮಾತನಾಡಿದರು. ದೇಶದ ಶೇ.60ರಷ್ಟು ಮಂದಿಗೆ ಬ್ಯಾಂಕ್ ವ್ಯವಹಾರದ ಬಗ್ಗೆ ಜ್ಞಾನವಿಲ್ಲ. ಸರ್ಕಾರ ಹಲವು ಯೋಜನೆಗಳಲ್ಲಿ ಫಲಾನುಭವಿಗಳಿಗೆ ಸಹಾಯಧನವನ್ನು ಖಾತೆಗಳಿಗೆ ಜಮಾ ಮಾಡುತ್ತಿರುವುದರಿಂದ ಎಲ್ಲರಿಗೂ ಬ್ಯಾಂಕ್ ವ್ಯವಹಾರದ ಬಗ್ಗೆ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದರು.
ದೇಶದಲ್ಲಿ ಪ್ರತಿ 2 ಸಾವಿರ ಜನಸಂಖ್ಯೆ ಆಧಾರಿಸಿ ಬ್ಯಾಂಕ್ ತೆರೆಯಬೇಕು ಎಂದಿದ್ದರು 20 ಸಾವಿರ ಜನಸಂಖ್ಯೆ ಇರುವ ಕಡೆಗಳಲ್ಲಿಯೂ ಬ್ಯಾಂಕ್ ಇಲ್ಲ. ಗ್ರಾಮೀಣ ಮತ್ತು ಗುಡ್ಡಗಾಡು ಪ್ರದೇಶದ ಜನರಿಗೆ ಬ್ಯಾಂಕ್ ಅರಿವು ಇಲ್ಲದಿರುವುದರಿಂದ ಸರ್ಕಾರದಿಂದ ಗ್ರಾಮೀಣ ಅಭ್ಯುದಯ ಆರ್ಥಿಕ ಸಾಕ್ಷರತಾ ಕೇಂದ್ರಗಳನ್ನು ಪ್ರತಿ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡಲಾಗುತ್ತಿದೆ. ಈ ಕೇಂದ್ರದಲ್ಲಿ ಬ್ಯಾಂಕ್‌ಗಳಲ್ಲಿ ಸಿಗುವ ಸೌಲಭ್ಯ, ಸಾಲ ಪಡೆಯುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸರಳ ಮಾತನಾಡಿ ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವುದರಿಂದ ದುಡಿದ ಹಣವನ್ನು ಖಾತೆಗಳಲ್ಲಿ ಜಮಾ ಮಾಡುವುದರಿಂದ ಉಳಿತಾಯ ಮಾಡಲು ಸಾಧ್ಯ ಎಂದು ತಿಳಿಸಿದರು.
ಕಾರ್ಪೋರೇಷನ್ ಬ್ಯಾಂಕ್ ಪ್ರಬಂಧಕ ವಿಭಾಗದ ವ್ಯವಸ್ಥಾಪಕ ಪ್ರಕಾಶ್‌ಕುಮಾರ್ ಮಾತನಾಡಿ, ಉಳಿತಾಯ ಮತ್ತು ಸಾಲದ ಮಹತ್ವಗಳ ಬಗ್ಗೆ ಕೆಲವರಿಗೆ ಮೂಲ ಶಿಕ್ಷಣ ವಿಲ್ಲದಂತಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಸಂಸ್ಥೆಗಳು ಅರಿವು ಮೂಡಿಸಿ ಅರ್ಥಿಕ ಮಟ್ಟ ಸುಧಾರಣೆ ಮಾಡಬೇಕು ಎಂದರು.
ತಾಲೂಕು ಪಂಚಾಯ್ತಿ ವಿಸ್ತರಣಾಧಿಕಾರಿ ಬೋರಣ್ಣಗೌಡ, ಆರ್ಥಿಕ ಸಾಕ್ಷರತಾ ಅಧಿಕಾರಿ ಗೋಪಾಲಗೌಡ, ಹೆಬ್ಬಾಳು ಕಾರ್ಪೋರೇಷನ್ ಬ್ಯಾಂಕ್ ವ್ಯವಸ್ಥಾಪಕಿ ಕಮಲಮ್ಮ, ಅನಂದಚಾರ್ಯ, ಮೋಹನ್‌ಕುಮಾರ್ ಇನ್ನೂ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

