ಹಾಸನ

ಹುದ್ದೆ ತುಂಬಲು ಸರ್ಕಾರದ ಮೀನಮೇಷ: ಟೀಕೆ

Published On :

ಸಕಲೇಶಪುರ: ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಹುದ್ದೆಗಳು ಖಾಲಿ ಉಳಿದಿದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮೀನ ಮೇಷ ಏಣಿಸುತ್ತಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಗೂರು ಮಂಜೇಗೌಡ ಟೀಕಿಸಿದರು. ಪಟ್ಟಣದ ತಾಪಂ ಅವರಣದಲ್ಲಿ ತಾಲೂಕು ನೌಕರರ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ  ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಕೆಲಸಗಳು ವಿಳಂಬವಾದರೆ ಅಧಿಕಾರಿಗಳ ಮೇಲೆ ದೂರು ದಾಖಲಿಸಲಾಗುತ್ತಿದ್ದು, ಇದು ಅವೈಜ್ಞಾನಿಕ ಕ್ರಮವಾಗಿದೆ. ಆದ್ದರಿಂದ, ಖಾಲಿ ಉಳಿದಿರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸರ್ಕಾರದ  ಮೇಲೆ ಒತ್ತಡ ಹೇರಲಾಗುವುದು ಎಂದರು.ರಾಜ್ಯದಲ್ಲಿ 5 ಕೋಟಿ ಜನಸಂಖ್ಯೆಯಿದ್ದ ವೇಳೆ 6 ಲಕ್ಷ ಸರ್ಕಾರಿ ನೌಕರರಿದ್ದರು. ಆದರೆ, ರಾಜ್ಯದ ಜನಸಂಖ್ಯೆ 7 ಕೋಟಿ ತಲುಪಿರುವ ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಖ್ಯೆ 4.5 ಲಕ್ಷಕ್ಕೆ ಕುಸಿದಿದೆ ಎಂದು ನುಡಿದರು.
 ಇದೇ ವೇಳೆ ಜಿಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಅಣ್ಣೇಗೌಡ, ರಾಜ್ಯ ಪರಿಷತ್ ಸದಸ್ಯ ಮನು, ನಿರ್ದೇಶಕ ಪಾಪಣ್ಣ,ಸತೀಶ್, ಭಾರತೀಶ್, ತಮ್ಮಯ್ಯ ತಾಲೂಕು ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಲಕ್ಕಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.