ಇಂದು ನಾಫೆಡ್ನಿಂದ ಕೊಬ್ಬರಿ ಖರೀದಿ ಮುಕ್ತಾಯ
ಅರಸೀಕೆರೆ: ಪಟ್ಟಣದ ಎಪಿಎಂಸಿ ಆವರಣದಲ್ಲಿ ನ್ಯಾಫೆಡ್ ಮೂಲಕ ಕೊಬ್ಬರಿ ಖರೀದಿ ಪ್ರಕ್ರಿಯೆ ಸೆ.16ಕ್ಕೆ ಮುಕ್ತಾಯಗೊಳ್ಳಲಿದೆ. ಇದರಿಂದ ಆತಂಕಕ್ಕೆ ಒಳಗಾಗಿರುವ ರೈತರು ದಿನವೂ ನೂರಾರು ವಾಹನಗಳಲ್ಲಿ ಕೊಬ್ಬರಿಯನ್ನು ಮಾರುಕಟ್ಟೆಗೆ ತರುತ್ತಿರುವುದರಿಂದ ಗೊಂದಲಮಯ ವಾತಾವರಣ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ರೈತರಿಗೆ ಎದುರಾಗಿದ್ದ ಆತಂಕ ನಿವಾರಿಸಲು ಶಾಸಕ ಕೆ.ಎಂ.ಶಿವಲಿಂಗೇಗೌಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮಾರುಕಟ್ಟೆಯಲ್ಲಿ ಕೊಬ್ಬರಿ ಧಾರಣೆ ಇಳಿಮುಖವಾದ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರ ಪರವಾಗಿ ತೆಂಗು ಬೆಳೆಗಾರರ ಪ್ರದೇಶದ ಶಾಸಕರೊಂದಿಗೆ ತಾವು ಸದನದಲ್ಲಿ ಧ್ವನಿ ಎತ್ತಿದ ಕಾರಣ ಕೊಬ್ಬರಿಗೆ ಒಂದು ಸಾವಿರ ರು. ಬೆಂಬಲ ಬೆಲೆ ನೀಡಿ ರೈತರಿಂದ ಕೊಬ್ಬರಿ ಖರೀದಿಸಲು ನ್ಯಾಫೆಡ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಈವರೆಗೆ ಕೊಬ್ಬರಿ ಕೊಳ್ಳಲು 5800 ರೈತರಿಗೆ ಕಾರ್ಡ್ ನೀಡಲಾಗಿದ್ದು ಡಿಸೆಂಬರ್ ವರೆಗೆ ಅವಕಾಶ ನೀಡಲಾಗಿದೆ. ಆದರೆ ಸರ್ಕಾರ ಸೆ.16ಕ್ಕೆ ಈ ಕೇಂದ್ರವನ್ನು ಮುಚ್ಚುತ್ತದೆ ಎಂಬ ವಿಷಯ ತಿಳಿದು ತಾಲೂಕಿನ ಅನೇಕ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಈವರೆಗೆ 5 ಸಾವಿರ ರೈತರಿಂದ ಕೊಬ್ಬರಿ ಖರೀದಿಸಲಾಗಿದ್ದು ಉಳಿದ 800 ರೈತರಿಂದ ಕೊಬ್ಬರಿ ಖರೀದಿಸಲು ನ್ಯಾಫೆಡ್ ಅಧಿಕಾರಿಗಳು ರಜಾದಿನವನ್ನೂ ಲೆಕ್ಕಿಸದೆ ಖರೀದಿಯಲ್ಲಿ ತೊಡಗಲು ಸೂಚಿಸಲಾಗಿದೆ. ಕೇಂದ್ರದ ಮೂಲಕ ನೀಡಿರುವ ನಿಗದಿತ ದಿನದ ಕಾರ್ಡ್ ಹೊಂದಿರುವ ಎಲ್ಲಾ ರೈತರಿಂದ ಕೊಬ್ಬರಿ ಖರೀದಿಸಲು ಆಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದ್ದರಿಂದ ಯಾರೂ ಆತಂಕ ಪಡಬೇಕಾಗಿಲ್ಲ. ಕೆಲವರು ಈ ರೀತಿ ಇಲ್ಲಸಲ್ಲದ ಗಾಳಿಸುದ್ದಿ ಹಬ್ಬಿಸುತ್ತಿದ್ದು ರೈತರು ಇದಕ್ಕೆ ಕಿವಿಗೊಡಬಾರದೆಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

