ಹಾಸನ

ಬಾಲಪ್ರತಿಭೆ ಮಿಥುನ್ ಅಭಿನಯದ ಆಶಾಕಿರಣ ಚಿತ್ರ ಪ್ರದರ್ಶನ

Published On :

ಅರಸೀಕೆರೆ: ಪಟ್ಟಣದ ಸಂತ ಮೇರಿ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಬಾಲ ಪ್ರತಿಭೆ ಮಾಸ್ಟರ್ ಮಿಥುನ್ ಅಭಿನಯದ ಚಿತ್ರ ಆಶಾಕಿರಣ ಇಲ್ಲಿನ ಸಾಧನ ಚಿತ್ರಮಂದಿರದಲ್ಲಿ ಶುಕ್ರವಾರ ತೆರೆ ಕಂಡಿತು. ಲಕ್ಷ್ಮಣ್ ನಾಯಕ್ ನಿರ್ಮಿಸಿರುವ ಈ ಚಿತ್ರದಲ್ಲಿ ನಮ್ಮೂರಿನ ಬಾಲ ಪ್ರತಿಭೆ ತನ್ನ ನಟನ ಕೌಶಲ್ಯದಿಂದ ನಾಯಕನಾಗಿ ಅಭಿನಯಿಸಿ ಜನ ಮೆಚ್ಚುಗೆ ಪಡೆದಿರುವುದು ಹೆಮ್ಮೆಯ ಸಂಗತಿ.
 ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಕ್ಷೇತ್ರದಲ್ಲಷ್ಟೇ ಅಲ್ಲದೆ ವಿವಿಧ ರಂಗಗಳಲ್ಲಿಯೂ ಸಾಧನೆ ಮಾಡಬಹುದು ಎಂಬುದಕ್ಕೆ ಮಿಥುನ್ ಸಾಕ್ಷಿಯಾಗಿದ್ದಾನೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ನಟರಾಜ್ ಅಭಿಪ್ರಾಯಪಟ್ಟರು. ನಿರ್ಮಾಪಕ ಲಕ್ಷ್ಮಣ್ ನಾಯಕ್ ಮಾತನಾಡಿ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು, ಅವರಿಗೆ ದೊರೆಯಬಹುದಾದ ಸೌಲಭ್ಯ ಇತ್ಯಾದಿ ಅಂಶಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಭವಿಷ್ಯದ ಭವ್ಯ ಪ್ರಜೆಗಳನ್ನು ರೂಪಿಸುವ ಸದುದ್ದೇಶದಿಂದ ಈ ಚಿತ್ರ ನಿರ್ಮಿಸಲಾಗಿದೆ ಎಂದರು.
 ಸಮಾರಂಭದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.