ಏಕರೂಪದ ಶಿಕ್ಷಣ ನೀತಿ ಜಾಗೃತಿ ಆಂದೋಲನ
ಹಾಸನ: ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಏಕ ರೂಪದ ಸಮಾನ ಶಿಕ್ಷಣ ನೀತಿ ಜಾಗೃತಿ ಆಂದೋಲನ ಕಾರ್ಯಕ್ರಮ ಸೋಮವಾರ ನಗರದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ನಡೆಯಿತು.
ನಗರದ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮಗಾಂಧಿಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ರಥಯಾತ್ರೆ ಸಹ್ಯಾದ್ರಿ ವೃತ್ತದ ಮೂಲಕ ಹೇಮಾವತಿ ಪ್ರತಿಮೆ, ಎನ್.ಆರ್.ವೃತ್ತ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯದಲ್ಲಿ ಸಮಾನ ಶಿಕ್ಷಣ ನೀತಿ ಜಾರಿಗೊಳಿಸಲು ಸರ್ಕಾರಕ್ಕೆ ಮನವಿ ನೀಡಲಾಯಿತು.
ರಥಯಾತ್ರೆಯ ಜೊತೆಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾ ತಂಡ, ಸಾಹಿತಿಗಳು, ಸಂಘದ ರಾಜ್ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಭಾಗವಹಿಸಿದ್ದರು. ಏಕರೂಪ ಸಮಾನ ಶಿಕ್ಷಣ ನೀತಿ, ಸಮಾನ ಶಿಕ್ಷಣ ನೀತಿ, ಸಮಾನ ಶಾಲೆಗಳಿಗಾಗಿ ಜಾಗೃತಿ ಜನಾಂದೋಲನದ ಮೂಲ ಉದ್ದೇಶದ ರಥಯಾತ್ರೆಯಾಗಿದೆ. ಕನ್ನಡ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ಪುಂಡಲೀಕ ಹಾಲಂಬಿ, ಡಾ.ಎಂ.ಚಿದಾನಂದ ಮೂರ್ತಿ, ಡಾ.ಕಮಲಾ ಹಂಪನಾ, ಬರಗೂರು ರಾಮಚಂದ್ರಪ್ಪ, ಪ್ರೊ.ಚಂದ್ರಶೇಖರ್ ಪಾಟೀಲ್, ಡಾ.ಜಿ.ರಾಮಕೃಷ್ಣ, ಡಾ.ಎಂ.ಎಂ.ಕಲಬುರ್ಗಿ, ಡಾ.ಬಂಜೆಗೆರೆ ಜಯಪ್ರಕಾಶ, ಬಿ.ಟಿ.ಲಲಿತಾ ನಾಯಕ್ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯಾಧ್ಯಕ್ಷ ಬಿ.ಎನ್.ಜಗದೀಶ್, ರಾಜ್ಯ ಕಾರ್ಯದರ್ಶಿ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎಚ್.ಎನ್.ದೀಪಕ್, ರಾಜ್ಯ ಯುವ ಘಟಕ ಅಧ್ಯಕ್ಷ ಕೆ.ಎನ್.ಜಗದೀಶ್, ಜಿಲ್ಲಾಧ್ಯಕ್ಷ ಉಮೇಶ್, ಉಪಾಧ್ಯಕ್ಷ ಸಂಗಮ್, ಸತೀಶ್, ಸಾಹಿತಿ ಜ.ಹೋ.ನಾರಾಯಣಸ್ವಾಮಿ, ಕಸಾಪ ಅಧ್ಯಕ್ಷ ಡಾ.ಜರ್ನಾಧನ್, ಮಾಜಿ ಅಧ್ಯಕ್ಷ ಎಚ್.ಬಿ.ಮದನ್ಗೌಡ ಇತರರು ಈ ಸಂದರ್ಭದಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

