'ಸಂಪೂರ್ಣ ಸಾಕ್ಷರತೆಗೆ ಜನತೆ ಸಹಕಾರ ಅಗತ್ಯ'
ಹಾಸನ: ಎರಡನೇ ಮಹಾ ಯುದ್ಧದ ನಂತರ ವಿಶ್ವಸಂಸ್ಥೆ ಕೈಗೊಂಡ 6 ಅಂಶಗಳ ಕಾರ್ಯಕ್ರಮಗಳಲ್ಲಿ ಸಾಕ್ಷರತಾ ಕಾರ್ಯಕ್ರಮ ಕೂಡಾ ಒಂದಾಗಿದೆ. ಸ್ವಾತಂತ್ರ್ಯ ಬಂದು 60 ವರ್ಷವಾದರೂ ಅನಕ್ಷಸ್ತರಿರುವುದು ವಿಷಾದದ ಸಂಗತಿ. ಈ ನಿಟ್ಟಿನಲ್ಲಿ ಸಂಪೂರ್ಣ ಸಾಕ್ಷರತೆಗೆ ಜನತೆ ಸಹಕರಿಸಬೇಕು ಎಂದು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಣ್ ಮನವಿ ಮಾಡಿದರು.
ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಸಾಕ್ಷರತಾ ಸಮಿತಿಯಿಂದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮ ಪಂಚಾಯತಿಗಳಲ್ಲಿ ಶಿಕ್ಷಣಕ್ಕಾಗಿ ಮೀಸಲಿಡುವ ಅನುದಾನದಲ್ಲಿ ಸಾಕ್ಷರತಾ ಕಾರ್ಯಕ್ರಮಗಳಲ್ಲಿ ಪ್ರೇರಕ ಮತ್ತು ಉಪ ಪ್ರೇರಕರಾಗಿ ಕರ್ತವ್ಯ ನಿರ್ವಹಿಸುವವರಿಗೆ ಗೌರವಧನ ನೀಡಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ಕೋರುವುದಾಗಿ ತಿಳಿಸಿದರು.
ತಾಪಂ ಅಧ್ಯಕ್ಷೆ ರತ್ನಮ್ಮ ಅಧ್ಯಕ್ಷತೆ ವಹಿಸಿದ್ದು, ಸಮಾಜದ ಅಗು ಹೋಗುಗಳನ್ನು ಅರಿಯಲು ಅಕ್ಷರಜ್ಞಾನ ಬಹು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಸಾಕ್ಷರರಾಗಬೇಕು. ವಿದ್ಯಾವಂತರು ಅವಿದ್ಯಾವಂತರಿಗೆ ಕಲಿಸುವ ಮೂಲಕ ಪ್ರೇರಣೆ ನೀಡಬೇಕು ಎಂದು ಹೇಳಿದರು.
ಎಸ್.ಎಸ್.ಪಾಷಾ ಪ್ರಮಾಣ ವಚನ ಬೋಧಿಸಿ, 1951ರಲ್ಲಿ ಶೇ. 18ರಷ್ಟಿದ್ದ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ವಿವಿಧ ಸಾಕ್ಷರತಾ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದ್ದು ಈಗ ಸಾಕ್ಷರತಾ ಪ್ರಮಾಣ ಶೇಕಡ 74ರಷ್ಟಿದೆ ಎಂದು ತಿಳಿಸಿದರು.
ಸಾಕ್ಷರತಾ ಕಾರ್ಯಕಾರಿ ಸಮಿತಿ ಸದಸ್ಯ ಮಂಜಪ್ಪಗೌಡ ಮಾತನಾಡಿದರು.
ಸಾಕ್ಷರತಾ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಶೇಷಾದ್ರಿ, ಪ್ರೇಮಮ್ಮ, ಶಫೀಉಲ್ಲಾ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆರ್.ನರಸಿಂಹಯ್ಯ ಮಾತನಾಡಿದರು. ಡಿ.ಡಿ.ತಮಣ್ಣಗೌಡ ಸ್ವಾಗತಿಸಿದರು. ಎಂ.ಎನ್. ಮಂಜೇಗೌಡ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

