ಹಾಸನ

ಸೀಮೆಎಣ್ಣೆ ಟ್ಯಾಂಕರ್ ಲಾರಿ ಪಲ್ಟಿ

Published On :

ಆಲೂರು: ಮಂಗಳೂರಿನಿಂದ ಅರಸೀಕೆರೆಗೆ ಸೀಮೆಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ ಎದುರಿನಿಂದ ಬಂದ ವಾಹನ ತಪ್ಪಿಸಲು ಹೋದ ಪರಿಣಾಮ ಪಲ್ಟಿಯಾದ ಘಟನೆ ತಾಲೂಕಿನ ಪಾಳ್ಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಸಂಜೆ 7ರಲ್ಲಿ ನಡೆದಿದೆ.
ಟ್ಯಾಂಕರ್ ಎದುರಿನಿಂದ ಬಂದ ವಾಹನ ತಪ್ಪಿಸಲು ಹೋಗಿ ಪಲ್ಟಿಯಾದ ಟ್ಯಾಂಕರ್‌ನಿಂದ ಸೀಮೆಎಣ್ಣೆ ಸೋರಿಕೆಯಾಗಿದ್ದು, ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಸಂಭವಿಸುತ್ತಿದ್ದ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಈ ಸ್ಥಳದ ಸಮೀಪದಲ್ಲಿ ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದು, ಅನಿಲ ಸೋರಿಕೆಯಾದ ಪರಿಣಾಮ 2 ದಿನ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಪದೇ ಪದೇ ಈ ಸ್ಥಳಗಳಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.