ತಜ್ಞ ವೈದ್ಯರ ನೇಮಕಕ್ಕೆ ಶಿಫಾರಸು
ಕನ್ನಡಪ್ರಭ ವಾರ್ತೆ ಹಾಸನ ಸೆ.17
ನಗರದ ಹಾಸನ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆ ಸ್ವಚ್ಛತೆ ಹಾಗೂ ಸೌಲಭ್ಯದ ದೃಷ್ಟಿಯಿಂದ ಉತ್ತಮವಾಗಿದೆ. ಆದರೆ ದೊರೆಯುತ್ತಿರುವ ಸೇವೆಯನ್ನು ಇನ್ನಷ್ಟು ಉತ್ತಮಗೊಳಿಸಬಹುದಾಗಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸಿ.ಜಿ.ಹುನುಗುಂದ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪ್ರತಿ ವಿಭಾಗವನ್ನು ಸೂಕ್ಷ್ಮವಾಗಿ ಪರಿಶಿಲಿಸಿದ ಅವರು ಇತರೆ ಸರ್ಕಾರಿ ಆಸ್ಪತ್ರೆಗಳಿಗೆ ಹೋಲಿಸಿದರೆ ಇಲ್ಲಿ ಉತ್ತಮ ವ್ಯವಸ್ಥೆಗಳಿವೆ ಎಂದು ಪ್ರಶಂಸಿಸಿದರು.
ಕೊರತೆ ಇರುವ ತಜ್ಞ ವೈದ್ಯರು ಹಾಗೂ ಅಗತ್ಯ ಹೆಚ್ಚುವರಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದ ಅವರು ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸೇವೆ ಒದಗಿಸಬೇಕು ಎಂದು ಸಲಹೆ ಮಾಡಿದರು.
ಐಸಿಯು, ಶಸ್ತ್ರಚಿಕಿತ್ಸಕರ ಕೊಠಡಿ, ಅಪೌಷ್ಠಿಕ ಮಕ್ಕಳ ಚಿಕಿತ್ಸಾ ಕೇಂದ್ರ,ಆಪ್ತ ಸಮಾಲೋಚನಾ ಕೊಠಡಿ, ಅಪಘಾತ ವಿಭಾಗ, ಸಾಮಾನ್ಯ ಒಳರೋಗಿಗಳ ವಿಭಾಗ ವೆಂಟಿಲೇಟರ್ ಕೇಂದ್ರ ಸೇರಿದಂತೆ ಹಲವು ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಮಾನವ ಆಯೋಗದ ಸದಸ್ಯರು ಆಸ್ಪತ್ರೆಯಲ್ಲಿ ಲಭ್ಯವಿರುವ ವೈದ್ಯಕೀಯ ಸೇವೆಗಳು ಸ್ವಚ್ಛತೆ ಒಳರೋಗಿಗಳಿಗೆ ನೀಡಲಾಗುತ್ತಿರುವ ಊಟೋಪಚಾರ, ಔಷಧ ವಿತರಣೆ ವ್ಯವಸ್ಥೆಯನ್ನು ಗಮನಿಸಿದರು. ಕೆಲವೊಂದು ಸೌಕರ್ಯಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅವರು ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ವೈದ್ಯರಿಗೆ ಸಲಹೆ ನೀಡಿದರು.
ನಿರ್ದೇಶಕ ಡಾ.ರಾಚೇಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಂಕರ್, ತಹಶೀಲ್ದಾರ್ ಮಂಜುನಾಥ್, ಮಾನವ ಹಕ್ಕುಗಳ ಆಯೋಗದ ರಿಜಿಸ್ಟ್ರಾರ್ ಎಚ್.ಮಲ್ಲೇಶ್ ಇದ್ದರು.
ಇದಕ್ಕೆ ಮುನ್ನ ಮಾನವ ಹಕ್ಕುಗಳ ಆಯೋಗದ ಸದಸ್ಯರು ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆಗಳನ್ನು ಆಲಿಸಿದರು.
ಜಿಲ್ಲಾಧಿಕಾರಿ ವಿ ಅನ್ಬುಕುಮಾರ್, ಜಿಲ್ಲಾ ಎಸ್ಪಿ ರವಿ ಡಿ. ಚನ್ನಣ್ಣನವರ್, ನಗರ ಸಭೆ ಆಯುಕ್ತ ನಾಗಭೂಷಣ್, ಉಪ ವಿಭಾಗಾಧಿಕಾರಿ ಶರತ್, ರಾಮಚಂದ್ರನ್, ಹುನುಗುಂದ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

