ಹಾಸನ

20 ರಂದು ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ಸೆ.17
ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ 10 ಸಾವಿರ ರು. ನಿಗದಿ ಪಡಿಸಬೇಕು, ವೇತನ ಕಾಯ್ದೆ 1948 ಕ್ಕೆ ತಿದ್ದುಪಡಿ ಜಾರಿಗೆ ಸೇರಿದಂತೆ ನಾನಾ ಬೇಡಿಕೆಗಳಿಗೆ ಆಗ್ರಹಿಸಿ  ಸಿಐಟಿಯು ನೇತೃತ್ವದಲ್ಲಿ  ಜಿಲ್ಲಾಧಿಕಾರಿ ಕಚೇರಿ ಮುಂದೆ ಸೆ.20 ರಂದು ಕಾರ್ಮಿಕರ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10.30ಕ್ಕೆ ಹಾಸನದ ಹೇಮಾವತಿ ಪ್ರತಿಮೆ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಧರ್ಮೇಶ್ ತಿಳಿಸಿದ್ದಾರೆ.
ಗುತ್ತಿಗೆ ಕಾರ್ಮಿಕರಿಗೂ ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಗುತ್ತಿಗೆ ಕಾರ್ಮಿಕರ(ನಿಯಂತ್ರಣ ಮತ್ತು ನಿಷೇಧ) ಕಾಯ್ದೆ 1970ಕ್ಕೆ ತಿದ್ದುಪಡಿಗಾಗಿ  ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಲ್ಲಿ ಅಂಗೀಕರಿಸಿರುವ ರೀತಿಯಲ್ಲಿ ಗುತ್ತಿಗೆ ಕಾರ್ಮಿಕರು, ಟ್ರೈನಿಗಳನ್ನು ಖಾಯಂಗೊಳಿಸಲು ರಾಜ್ಯ ಶಾಸನ ಸಭೆಯು ಕೈಗಾರಿಕೆ ಸಂಸ್ಥೆಗಳ (ಕಾರ್ಮಿಕರಿಗೆ ಖಾಯಂ ಸ್ಥಾನ ನೀಡುವ) ಕಾಯ್ದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.
ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಖಾತ್ರಿ ಪಿಂಚಣಿಗಾಗಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಫಲಾನುಭವಿಗಳಾದ ಆಟೋ-ಟ್ಯಾಕ್ಸಿ ಚಾಲಕರು, ದೋಬಿ, ಹಮಾಲಿಗಳು, ಮನೆ ಕೆಲಸಗಾರರು ಮತ್ತಿತರರ ನೊಂದಾವಣೆ ಯೋಜನೆಗಳ ಜಾರಿಗಾಗಿ ಅಗತ್ಯ ಸಾಮಾಜಿಕ ಭದ್ರತಾ ನಿಧಿ ಸ್ಥಾಪನೆಗಾಗಿ, ಇಎಸ್‌ಎಮ್‌ಎ(ಎಸ್ಮ) ಕಾಯ್ದೆ ಮರು ಜಾರಿಗೊಳಿಸದಿರಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಹಾಸನ ಜಿಲ್ಲೆಯ ಗ್ರಾಮ ಪಂಚಾಯತಿ, ಅಂಗನವಾಡಿ, ಮುನಿಸಿಪಾಲಿಟಿ, ಕಾಫಿ, ಟೀ ತೋಟ, ಕಾಫಿ ಕ್ಯೂರಿಂಗ್, ಅಕ್ಷರ ದಾಸೋಹ, ಆಸ್ಪತ್ರೆ, ಹಾಸ್ಟೆಲ್, ವಸತಿ ಶಾಲೆ, ಕೈಗಾರಿಕೆ ಹಾಗೂ ಇನ್ನಿತರೆ ವಿಭಾಗಗಳ ಕಾರ್ಮಿಕರ ಹಾಗೂ ನೌಕರರ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಲಾಗುವುದು ಎಂದು ಹೇಳಿದ್ದಾರೆ. ಅಂಗನವಾಡಿ ಕೇಂದ್ರಗಳ ಖಾಸಗೀಕರಣ, ಶಾಲೆಗಳ ಮಧ್ಯಾಹ್ನ ಬಿಸಿಯೂಟ ಯೋಜನೆಯ ಹೊರಗುತ್ತಿಗೆಕರಣಕ್ಕೆ ಮುಂದಾಗಿರುವ ಸರ್ಕಾರ, ಆಶಾ ಕಾರ್ಯಕರ್ತರಿಗೆ ಕನಿಷ್ಠ ವೇತನ ನೀಡದೆ ಮುಂದುವರಿದಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ, ಬಿಬಿಎಮ್‌ಪಿ ಕಂಪ್ಯೂಟರ್ ಆಪರೇಟರ್‌ಗಳ ರೀತಿಯ ನೌಕರರಿಗೆ ನಿಗದಿ ಸಮಯಕ್ಕೆ ದುಡಿದ ವೇತನ ನೀಡದೆ, ಪ್ರತಿಬಾರಿ ದುಡಿದ ವೇತನಕ್ಕಾಗಿ ಧರಣಿ-ಹೋರಾಟ ನಡೆಸಬೇಕಾದಂತಹ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದ್ದಾರೆ.
ಸರ್ಕಾರ ಬೆಲೆ ಏರಿಕೆ ನಿಯಂತ್ರಿಸದೆ, ಬಸ್, ಹಾಲು, ವಿದ್ಯುತ್, ಕುಡಿವ ನೀರಿನ ದರ ಹೆಚ್ಚಿಸಲು ಹೊಂಚುಹಾಕಿ ಕುಳಿತಿದೆ. ಒಂದು ರು.ಗೆ ಅಕ್ಕಿ ನೀಡುವ ಯೋಜನೆ ಸ್ವಾಗತಾರ್ಹ. ಆದರೆ ಎ.ಪಿ.ಎಲ್ ಕುಟುಂಬಗಳಿಗೆ ಆಹಾರ ಧಾನ್ಯ ನೀಡದೆ, ಸಾರ್ವತ್ರಿಕ ಪಡಿತರ ವ್ಯವಸ್ಥೆ ನೀಡುವುದಿಲ್ಲ ಎಂಬುದನ್ನು ತೋರಿದೆ. ವಸತಿ ರಹಿತರಿಗೆ ವಸತಿ ನೀಡದೆ ಮನೆ ಬಾಡಿಗೆ ನಿಯಂತ್ರಣಕ್ಕೆ ಕ್ರಮವಹಿಸದೆ, ದುಡಿಯುವ ಜನತೆಯ ಹೊರೆ ಹೆಚ್ಚಿಸುತ್ತಿದೆ.  ಕಳೆದ ಫೆಬ್ರವರಿ 20, 21 ರ ಮುಷ್ಕರದ ನಂತರ, ಅವುಗಳ ಪರಿಶೀಲನೆಗೆ ರಚಿಸಿದ್ದ ಕೇಂದ್ರ ಸಚಿವರ ಸಮಿತಿ ಇವುಗಳ ಬಗ್ಗೆ ಕ್ರಮ ವಹಿಸದೆ ಕುಳಿತಿದೆ.  
ಹಾಸನ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ತೋಟ, ಕಾಫಿ ಕ್ಯೂರಿಂಗ್ ಕಾರ್ಮಿಕರು, ಅಂಗನವಾಡಿ, ಗ್ರಾಮ ಪಂಚಾಯತಿ, ಅಕ್ಷರ ದಾಸೋಹ, ವಸತಿಶಾಲೆ, ಆಸ್ಪತ್ರೆ ಮತ್ತು ಕಾರ್ಖಾನೆ ಇತ್ಯಾದಿ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು, ನೌಕರರುಗಳಿಗೆ ಕನಿಷ್ಠ ವೇತನ ಹಾಗೂ ಕನಿಷ್ಟ ಸೇವಾ ಸೌಲಭ್ಯಗಳಿಲ್ಲದೆ ದುಡಿಯುತ್ತಿದ್ದಾರಎಂದು ದೂರಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಐಟಿಯು ರಾಜ್ಯ ಸಮಿತಿ ಸೆಪ್ಟೆಂಬರ್ 20ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ ನೀಡಿದೆ. ಅಂದು ಬೆಳಗ್ಗೆ 10.30ಕ್ಕೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನಡೆಯುವ ಪ್ರತಿಭಟನಾ ರ್ಯಾಲಿಯಲ್ಲಿ ಎಲ್ಲಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕೋರಿದ್ದಾರೆ.
ಗುತ್ತಿಗೆ ಕಾರ್ಮಿಕರಿಗೂ ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಗುತ್ತಿಗೆ ಕಾರ್ಮಿಕರ ಕಾಯ್ದೆ 1970ಕ್ಕೆ ತಿದ್ದುಪಡಿಗಾಗಿ  ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಲ್ಲಿ ಅಂಗೀಕರಿಸಿರುವ ರೀತಿಯಲ್ಲಿ ಗುತ್ತಿಗೆ ಕಾರ್ಮಿಕರು, ಟ್ರೈನಿಗಳನ್ನು ಖಾಯಂಗೊಳಿಸಲು ರಾಜ್ಯ ಶಾಸನ ಸಭೆಯು ಕೈಗಾರಿಕೆ ಸಂಸ್ಥೆಗಳ (ಕಾರ್ಮಿಕರಿಗೆ ಖಾಯಂ ಸ್ಥಾನ ನೀಡುವ) ಕಾಯ್ದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗುವುದು
ಟಿ  ಧರ್ಮೇಶ್,
ಪ್ರಧಾನ ಕಾರ್ಯದರ್ಶಿ, ಸಿಐಟಿಯು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.