ಯಶಸ್ವಿನಿ ಯೋಜನೆಯಡಿ ನೋಂದಣಿಗೆ ಸೂಚನೆ
ಹಾಸನ: ಯಶಸ್ವಿನಿ ಸಹಕಾರಿ ರೈತರ ಆರೋಗ್ಯ ರಕ್ಷಣಾ ಯೋಜನೆ 2003 ನೇ ಜೂನ್ 1 ರಿಂದ ಪ್ರಾರಂಭವಾಗಿ 11 ನೇ ವರ್ಷಕ್ಕೆ ಕಾಲಿಟ್ಟಿದೆ. ಗ್ರಾಮೀಣ ಸಹಕಾರಿ ರೈತ ಸದಸ್ಯರ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿಕಾರಕ ಸಾಧನೆಯನ್ನು ಮಾಡಿ ಎಲ್ಲರ ಗಮನ ಸೆಳೆದಿದೆ. ಈ ಯೋಜನೆಯಡಿ 2013-14 ನೇ ಸಾಲಿನಲ್ಲಿ ಸದಸ್ಯರ ನೋಂದಣಿ ಕಳೆದ ಜುಲೈ 15 ರಿಂದ ಪ್ರಾರಂಭಗೊಂಡಿದ್ದು, ಅ.15ಕ್ಕೆ ಕೊನೆಗೊಳ್ಳಲಿದೆ.
ಸರ್ಕಾರ ಆದೇಶ ಹೊರಡಿಸಿ 2013-14 ನೇ ಸಾಲಿಗೆ ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರ ವಾರ್ಷಿಕ ವಂತಿಗೆ 200 ರು.ಗಳನ್ನು ಸರ್ಕಾರವೇ ಭರಿಸುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ವಿವಿಧ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರು ಕೂಡಲೇ ಯಶಸ್ವಿನಿ ಯೋಜನೆಯಡಿ ನೊಂದಣಿ ಮಾಡಿಸಲು ಸಂಬಂಧಿಸಿದ ಸಹಕಾರ ಸಂಘದ ಕಾರ್ಯದರ್ಶಿಯನ್ನು ಭೇಟಿ ಮಾಡಲು ಸೂಚಿಸಲಾಗಿದೆ. ಈ ಯೋಜನೆಯಡಿ ಸದಸ್ಯರಾಗಿ ನೊಂದಣಿಯಾಗಲು ಅ.15 ಕೊನೆಯ ದಿನಾಂಕವಾಗಿದ್ದು ಸಹಕಾರ ಸಂಘಗಳ ಎಲ್ಲಾ ಅರ್ಹ ಸದಸ್ಯರು ಈ ಯೋಜನೆಯಡಿ ನಿಗದಿತ ಅವಧಿಯೊಳಗೆ ನೊಂದಾಯಿಸಿಕೊಳ್ಳುವಂತೆ ಹಾಸನ ಸಹಕಾರ ಸಂಘಗಳ ಉಪ ನಿಬಂಧಕ ಇಲ್ಯಾಸ್ ಉಲ್ಲಾ ಷರೀಫ್ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

