ಹಾಸನ

ವಿವೇಕಾನಂದ ಸ್ಕೌಟ್ಸ್ ಟ್ರೂಫ್ ಉದ್ಘಾಟನೆ

Published On :

ಅರಸೀಕೆರೆ: ಮಕ್ಕಳ ಸರ್ವಾಂಗೀಣ ವಿಕಾಸ, ಬೆಳವಣಿಗೆಗೆ ಹಾಗೂ ಸೇವಾ ಮನೋಭಾವನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸ್ಕೌಟ್ಸ್ - ಗೈಡ್ಸ್  ಪೂರಕವಾಗಿದೆ ಎಂದು ಭಾರತ್ ಸ್ಕೌಟ್ಸ್ ಗೈಡ್ಸ್‌ನ ಸ್ಥಳೀಯ ಸಂಸ್ಥೆ ಅಧ್ಯಕ್ಷರೂ ಆದ ಬಿಇಓ ಎಸ್.ಪಿ.ನಟರಾಜ್ ಹೇಳಿದರು.
ಪಟ್ಟಣದ ರೋಟರಿ ಭವನದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ಬಾಲಕರ ವಿವೇಕಾನಂದ ಸ್ಕೌಟ್ ಟ್ರೂಫ್ ಉದ್ಘಾಟಿಸಿ ಮಾತನಾಡಿದ ಅವರು, ದೇಶ ಆತಂಕ, ವಿಪತ್ತು ಎದುರಿಸುವ ಸಂದರ್ಭಗಳಲ್ಲಿ ಇಂತಹ ಸಂಸ್ಥೆಗಳಿಂದ ತರಬೇತಿ ಪಡೆದ ಯುವಕ ಯುವತಿಯರಿಂದ ಹೆಚ್ಚಿನ ಸಹಕಾರ ನಿರೀಕ್ಷಿಸಬಹುದು. ಅದರೊಟ್ಟಿಗೆ ತಾವು ಕೂಡಾ ಎಲ್ಲ ರೀತಿಯ ಬೆಳವಣಿಗೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿ ತರಬೇತಿದಾರನೂ ಇದರ ಸದ್ಭಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು. ಸಂಸ್ಥೆ ಕಾರ್ಯದರ್ಶಿ ಲೀಲಾಮಹೇಶ್ವರ್  ಸ್ಕೌಟ್ಸ್ - ಗೈಡ್ಸ್ ಬೆಳೆದು ಬಂದ ಬಗೆ ತಿಳಿಸಿದರು. ಗೋವಿಂದರಾಜ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಮಾಜಿ ಅಧ್ಯಕ್ಷ ಯೋಗೀಶಚಾರ್, ರೋಟರಿ ಶಾಲೆಯ ಆಡಳಿತಾಧಿಕಾರಿ ನಾರಾಯಣಶರ್ಮಾ, ಅರುಣಕುಮಾರ್  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.