ಕುಮಾರ್ ಮಾನವ ಹಕ್ಕುಗಳ ಸಮಿತಿ ತಾ. ಘಟಕದ ನೂತನ ಅಧ್ಯಕ್ಷ
ಹೊಳೆನರಸೀಪುರ: ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಯನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗಿರೀಶ್ಗೌಡ ಮತ್ತು ಜಿಲ್ಲಾಧ್ಯಕ್ಷ ಮಧುಕರ್ ಅವರು ನೇಮಕ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ತಾಲೂಕು ನೂತನ ಅಧ್ಯಕ್ಷರಾಗಿ ಜಿ.ಬಿ.ಕುಮಾರ್, ಅಂಕನಹಳ್ಳಿ ಎ.ಎಸ್.ರವಿಕುಮಾರ್-ಉಪಾಧ್ಯಕ್ಷ, ಆರ್.ವಸಂತಕುಮಾರ್ ಕಾರ್ಯಾಧ್ಯಕ್ಷ, ಅಡಿಕೆಕೆರೆ ಹೊಸೂರು ರವಿನಂದಸ್ವಾಮಿ-ಪ್ರಧಾನ ಕಾರ್ಯದರ್ಶಿ, ಅಂಕವಳ್ಳಿ ಶಿವೇಗೌಡ-ಕಾರ್ಯದರ್ಶಿ, ಮುತ್ತುರಾಜ್ ಸಹ ಕಾರ್ಯದರ್ಶಿ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ನಾಜೀರ್, ಮಹಿಳಾ ಘಟಕದ ಅಧ್ಯಕ್ಷರಾಗಿ ಪಿರಾಂಬಿ ಅವರನ್ನು ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ.
ಶಿಥಿಲಾವಸ್ಥೆಯಲ್ಲಿ ಸರ್ಕಾರಿ ಪಪೂ ಕಾಲೇಜು
ನುಗ್ಗೇಹಳ್ಳಿ (ಚನ್ನರಾಯಪಟ್ಟಣ ತಾ.): ಇಲ್ಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೆಯ ಕಟ್ಟಡ ಕುಸಿದು ಬಿದ್ದು ತುಂಬಾ ಶಿಥಿಲಾವಸ್ಥೆಯಲ್ಲಿದೆ.
ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕೆಂಬುದು ಸಾರ್ವಜನಿಕರ ಬೇಡಿಕೆ. ಇಲ್ಲಿಯ ಪ್ರೌಢಶಾಲೆಯಲ್ಲಿ 245 ಹಾಗೂ ಸರ್ಕಾರಿ ಕಾಲೇಜಿನಲ್ಲಿ 224 ವಿದ್ಯಾರ್ಥಿಗಳಿದ್ದು ಕೊಠಡಿಗಳು ಸಾಕಾಗುತ್ತಿಲ್ಲವೆಂದು ಸಹ ಶಿಕ್ಷಕ ಬಸವರಾಜ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

