ಹಾಸನ

ತಾಂತ್ರಿಕ ಕಾಲೇಜಲ್ಲಿ ಶಿಕ್ಷಕರ ದಿನಾಚರಣೆ

Published On :

ಚನ್ನರಾಯಪಟ್ಟಣ: ವಿದ್ಯಾರ್ಥಿಗಳು ಕ್ರಿಯಾಶೀಲತೆ ಬೆಳಸಿಕೊಂಡಾಗ ಮಾತ್ರ ತಮ್ಮ ಗುರಿ ಸಾಧಿಸಲು ಸಾಧ್ಯ  ಎಂದು ಬೆಂಗಳೂರಿನ ವಿಪ್ರೋ ಟೆಕ್ನಾಲಜಿ ಶೈಕ್ಷಣಿಕ ಸಂಪರ್ಕ ವ್ಯವಸ್ಥಾಪಕ ವೀರಪ್ಪಾಜಿ ತಿಳಿಸಿದರು.
ಶ್ರವಣಬೆಳಗೊಳ ಬಾಹುಬಲಿ ತಾಂತ್ರಿಕ ಕಾಲೇಜಿನಲ್ಲಿ ಏರ್ಪಡಿಸಿದ್ದ ಇಂಜನಿಯರ್ ಹಾಗೂ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
 ಪ್ರಪಂಚದಲ್ಲಿ ಪ್ರತಿ ವರ್ಷ 10 ಮಿಲಿಯನ್‌ಗೂ ಹೆಚ್ಚು ಇಂಜನಿಯರ್‌ಗಳು ಕೋರ್ಸ್ ಮುಗಿಸಿ ಹೊರ ಬರುತ್ತಿದ್ದು, ಕ್ರಿಯಾಶೀಲತೆಯಿರುವವರಿಗೆ ಉತ್ತಮ ಅವಕಾಶ ದೊರೆಯುತ್ತಿದೆ ಎಂದು ತಿಳಿಸಿದರು. ಇಂಜನಿಯರ್ ಆಗುವುದು ಸುಲಭದ ಮಾತಲ್ಲ. ನಂತರದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.
 ಪ್ರಾಂಶುಪಾಲ ಡಾ.ರಾಮೇಗೌಡ ಮಾತನಾಡಿ ವಿದ್ಯಾರ್ಥಿಗಳು ಶ್ರಮಪಟ್ಟು ತಾಂತ್ರಿಕ ಕೋರ್ಸ್‌ಗಳನ್ನು ಪೂರ್ಣಗೊಳಿಸಿದರೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವನ್ನು ನಿರೀಕ್ಷೆ ಮಾಡಬಹುದು ಎಂದು ತಿಳಿಸಿದರು.

ದೂರು ನಿರ್ವಹಣಾ ಕೇಂದ್ರ ಸ್ಥಾಪನೆ
ಹಾಸನ: ಆಹಾರ ಇಲಾಖೆಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು ಸಾರ್ವಜನಿಕರ ದೂರು ನಿರ್ವಹಣಾ ಕೇಂದ್ರವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊಠಡಿ ಸಂಖ್ಯೆ 19 ರಲ್ಲಿ ತೆರೆಯಲಾಗಿದೆ. ಸಾರ್ವಜನಿಕರು ಆಹಾರ ಇಲಾಖೆಗೆ ಸಂಬಂಧಿಸಿದ  ಸಮಸ್ಯೆಗಳನ್ನು ದೂರವಾಣಿ ಮೂಲಕವಾಗಲಿ ಅಥವಾ ಮುಕ್ತ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದಾಗಿದೆ. ದೂರವಾಣಿ ಸಂಖ್ಯೆ 08172-268229 ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ದೂರು ಸ್ವೀಕರಿಸುವ ಪ್ರಾಧಿಕಾರಿ ನೌಕರರ ವರ್ಗ ಪಿ. ಶರವಣ, ದೂರು ಸ್ವೀಕರಿಸುವ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ. ದೂ 08172-268229.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.