ಹಾಸನ

ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ ಹಾಸನ ಸೆ.18
ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ಬುಧವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು  ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಸಮಯ ಧರಣಿ ನಡೆಸಿ ನಂತರ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಹಾಸನದ ಮುಶೀರ್ ಅಹಮದ್ ಎಂಬುವರ ಮಗಳ ಪುತ್ರ ಶೋಯಬ್ ಎಂಬಾತ ಯಾರೊಂದಿಗೊ ಗಲಾಟೆ ಮಾಡಿಕೊಂಡಿರುವ ಬಗ್ಗೆ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತಂದಿರುವ ವಿಷಯ ತಿಳಿದ ಮುಷಿರ್ ಅಹಮ್ಮದ್‌ರ 2ನೇ ಪುತ್ರ, ಕೆಎಸ್‌ಆರ್‌ಟಿಸಿ ನೌಕರ ಜೋಹರ್ ಅಹಮದ್ ನಗರ ಠಾಣೆಗೆ ವಿಚಾರಿಸಲು ಹೋದಾಗ ಪೊಲೀಸರು ಆತನಿಗೆ ಚೆನ್ನಾಗಿ ಥಳಿಸಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಇದನ್ನು ತಿಳಿದ ಮತ್ತೊಬ್ಬ ಪುತ್ರ ಸಮಾಜ ಕಲ್ಯಾಣ ಇಲಾಖೆ ನೌಕರ ಕೌಸರ್ ಅಹಮದ್ ಸೆ. 3ರಂದು ರಾತ್ರಿ ಪೊಲೀಸ್ ಠಾಣೆಗೆ ಹೋಗಿ ಅಲ್ಲಿದ್ದ ಸರ್ಕಲ್ ಇನ್ಸ್‌ಪೆಕ್ಟರ್ ಅನುಮತಿ ಪಡೆದು ಒಳಗೆ ಹೋದ ಸಂದರ್ಭದಲ್ಲಿ ಬಾಗಿಲ ಬಳಿ ನಿಂತಿದ್ದ ಆರಕ್ಷಕ ಡಿ.ಆರ್.ಕುಮಾರ್ ಯಾರೋ ನೀನು ಎಂದು ಕೇಳಿದ್ದಾರೆ.
 ಆದಕ್ಕೆ ನನ್ನ ತಂಗಿಯ ಮಗನನ್ನು ಬಂಧಿಸಿದ್ದು, ಆತನನ್ನು ನೋಡಲು ಬಂದಿದ್ದೇನೆ ಎಂದು ಹೇಳಿದಾಗ ಡಿ.ಆರ್.ಕುಮಾರ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದರು.ಹಾಗೂ ಇವರ ಮೊಬೈಲ್ ಕಿತ್ತುಕೊಂಡು ಠಾಣೆ ಒಳಗೆ ಕರೆದುಕೊಂಡು ಹೋಗಿ ಪೇದೆಗಳಾದ ಡಿ.ಆರ್.ಕುಮಾರ್, ಮೋಹನ್‌ಕುಮಾರ್, ಎಸ್‌ಐ ಮೇಹಸ್ ಅವರುಗಳು ಜೋಹರ್, ಶೋಯಬ್ ಹಾಗೂ ಕೌಸರ್ ಅಹಮದ್ ಅವರ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ ಎಂದು ದೂರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.