ಹಾಸನ

ರಾಜ್ಯದಲ್ಲಿ 26,522 ಪ್ರಕರಣ ವಿಲೇವಾರಿ

Published On :

ಹಾಸನ: ರಾಜ್ಯಾದ್ಯಂತ 2007 ರಿಂದ ಈವರೆಗೆ 41,683 ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, 26,522 ಪ್ರಕರಣಗಳು ವಿಲೇವಾರಿ ಮಾಡಲಾಗಿದೆ. 15,161 ಪ್ರಕರಣಗಳು ವಿವಿಧ ಹಂತದಲ್ಲಿ ವರದಿ ಬರಲು ಬಾಕಿ ಇದ್ದು, ಶೀಘ್ರದಲ್ಲೇ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ.
  ಜಿಲ್ಲೆಯಲ್ಲಿ 2007 ರಿಂದ ಈವರೆಗೆ 907 ಪ್ರಕರಣಗಳು ದಾಖಲಾಗಿದ್ದು, 602 ಪ್ರಕರಣಗಳು ವಿಲೇವಾರಿ ಮಾಡಲಾಗಿದೆ 305 ಪ್ರಕರಣಗಳು ತನಿಖಾ ಹಂತದಲ್ಲಿವೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಹುನುಗುಂದ ತಿಳಿಸಿದರು.  
 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಾನವ ಹಕ್ಕುಗಳ ಉಲ್ಲಂಘನೆ ತಡೆ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಸಮಾಜದಲ್ಲಿ ಗೌರವಯುತವಾಗಿ ಬದುಕುವ ಹಕ್ಕಿದ್ದು ಅದಕ್ಕೆ ಯಾವುದೇ ಧಕ್ಕೆ ಉಂಟಾಗದಂತೆ ಎಚ್ಚರ ವಹಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.
 ರಾಜ್ಯಾದ್ಯಂತ ದಾಖಲಾಗುವ ಪ್ರಕರಣಗಳಲ್ಲಿ ಶೇಕಡ 60 ರಷ್ಟು ಪ್ರಕರಣಗಳು ಪೊಲೀಸ್ ಇಲಾಖೆಗೆ ಸಂಬಂಧಿಸಿದ್ದಾಗಿದ್ದು, ಉಳಿದಂತೆ ನಾಗರಿಕ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಕೇಳಿ ಬರುತ್ತಿದೆ ಸರ್ಕಾರಿ ಶಾಲೆ, ವಿದ್ಯಾರ್ಥಿ ನಿಲಯ, ಅಂಗನವಾಡಿಗಳಲ್ಲಿ ಶೌಚಾಲಯ ಕುಡಿಯುವ ನೀರು, ಸ್ವಚ್ಚತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಸಮಸ್ಯೆ ಸಾಮಾನ್ಯವಾಗಿದ್ದು ಇದು ಬಗೆಹರಿಯಬೇಕಾಗಿದೆ ಎಂದು ಹೇಳಿದರು.
ಮಕ್ಕಳ ಕಡ್ಡಾಯ  ಶಿಕ್ಷಣ ಹಕ್ಕು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು  ಮಹಿಳಾ ಸಬಲೀಕರಣ ಯೋಜನೆಗಳು ಗ್ರಾಮೀಣ ಭಾಗಕ್ಕೂ ತಲುಪಬೇಕು ಎಂದ ಅವರು ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ ಪ್ರಸೂತಿ ಪೂರ್ವ ಲಿಂಗ ಪತ್ತೆ ಕಾರ್ಯ ಕಡ್ಡಾಯವಾಗಿ ನಿರ್ಮೂಲನೆಗೊಳ್ಳಬೇಕು.
ಈ ನಿಟ್ಟಿನಲ್ಲಿ ಮೇಲ್ವಿಚಾರಣೆ ಮಾಡುವಂತೆ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಹುನುಗುಂದ ಸೂಚಿಸಿದರು.

ಬಿಮ್ಸ್ ನಿರ್ದೇಶಕ ಸ್ಥಾನಕ್ಕೆ ನೀಡಿದ್ದ ತಡೆ ತೆರವು
ಮೈಸೂರು: ಬಿ.ಎನ್. ಬಹದ್ಧೂರ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸೈನ್ಸ್‌ನ ನೂತನ ಅಧ್ಯಕ್ಷರ ನೇಮಕಾತಿ ಸಂಬಂಧ ಇದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಹಿಂದೆ ಬಿಮ್ಸ್‌ನ ಅಧ್ಯಕ್ಷರಾಗಿದ್ದ ಪ್ರೊ.ಬಿ. ಶಿವರಾಜ್ ಅವರು ಮೈಸೂರು ವಿವಿಯ ಅಧಿಕೃತವಲ್ಲದ ಲಾಂಛನ ಬಳಸಿ ವಿದೇಶಿ ಸಂಸ್ಥೆಯೊಡನೆ ಒಪ್ಪಂದ ಮಾಡಿಕೊಂಡಿದ್ದರು.
  ಈ ಬಗ್ಗೆ ಮೈಸೂರು ವಿವಿ ಸಿಂಡಿಕೇಟ್‌ನಲ್ಲಿ ಚರ್ಚಿಸಿ ಶಿವರಾಜ್ ಅವರನ್ನು ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ, ಆ ಸ್ಥಾನಕ್ಕೆ ಆಯಿಷಾ ಷರೀಫ್ ಅವರನ್ನು ನೇಮಿಸಿ ಆದೇಶಿಸಿತ್ತು. ಮೈಸೂರು ವಿವಿ ಈ ಕ್ರಮದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದ ಶಿವರಾಜ್ ಆಯಿಷಾ ಷರೀಫ್ ನೇಮಕಾತಿಗೆ ತಡೆಯಾಜ್ಞೆ ತಂದಿದ್ದರು. ನಂತರ ಹೈಕೋರ್ಟ್ ಈ ಪ್ರಕರಣ ವಿಚಾರಣೆ ನಡೆಸುವಾಗ ಶಿವರಾಜ್ ತಮ್ಮ ವಾದಕ್ಕೆ ಪೂರಕವಾಗಿ ಸಾಕ್ಷ್ಯಾಧಾರಗಳನ್ನು ಸಾಬೀತುಪಡಿಸುವಲ್ಲಿ ವಿಫಲರಾದರು. ಆದ ಕಾರಣ ಕೋರ್ಟ್ ತಡೆಯಾಜ್ಞೆಯನ್ನು ತೆರವುಗೊಳಿಸಿ ಶಿವರಾಜ್ ಅರ್ಜಿಯನ್ನು ತಿರಸ್ಕರಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.