ಮಾತೃ ಭಾಷಾ ಶಿಕ್ಷಣಕ್ಕೆ ಒತ್ತಾಯ; ವಿಪರ್ಯಾಸ - ಜಗದೀಶ್
ಬೇಲೂರು: ರಾಜ್ಯದ ಬಡ ಮಕ್ಕಳು ಮಾತ್ರ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ಆದರೆ ಶ್ರೀಮಂತರ ಮಕ್ಕಳು ಆಂಗ್ಲ ಮಾಧ್ಯಮದ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಎಲ್ಲಾ ಮಕ್ಕಳಿಗೂ ಗುಣ ಮಟ್ಟದ ಶಿಕ್ಷಣ ದೊರೆಯುವಂತಾದಾಗ ಮಾತ್ರ ಸಮಾನತೆ ಮತ್ತು ಸಾಮಾಜಿಕ ನ್ಯಾಯ ಸಾಕಾರಗೊಳ್ಳಲು ಸಾಧ್ಯ ಎಂದು ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಬಿ.ಎನ್. ಜಗದೀಶ್ ತಿಳಿಸಿದರು.
ಏಕರೂಪ ಸಮಾನ ಶಾಲಾ ಶಿಕ್ಷಣ ನೀತಿ ಜಾರಿಗೆ ಒತ್ತಾಯಿಸಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಜಾಗೃತಿ ಜನಾಂದೋಲನ ಕನ್ನಡ ತೇರು ಪಟ್ಟಣದ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಶಿಕ್ಷಣ ಮೂಲಭೂತ ಹಕ್ಕಾಗಿದ್ದರೂ ನಮ್ಮ ಶಿಕ್ಷಣ ಪದ್ಧತಿ ಅಸಮಾನತೆ ಹಾಗೂ ತಾರತಮ್ಯದ ಮಹಾ ಕೂಪವಾಗಿದ್ದು ಶಿಕ್ಷಣ ಇಂದು ಮಾರಾಟದ ವಸ್ತುವಾಗಿದೆ ಎಂದು ಹೇಳಿದರು.
ಸಮಾನತೆಯ ಸಮಾನ ಶಿಕ್ಷಣ ಪ್ರಮುಖ ಅಸ್ತ್ರವೆಂದು ನಂಬಿರುವ ನಾವು ಮಾತೃ ಭಾಷಾ ಶಿಕ್ಷಣದ ಜಾರಿಗೆ ಸರ್ಕಾರಗಳನ್ನು ಒತ್ತಾಯಿಸಬೇಕಿರುವುದು ವಿಪರ್ಯಾಸ ಎಂದು ಹೇಳಿದರು. ಜಯ ಕರ್ನಾಟಕ ಸಂಘಟನೆಯ ಕಾರ್ಯಾಧ್ಯಕ್ಷ ಪ್ರಕಾಶ್ ರೈ, ರಾಜ್ಯ ಯುವ ಅಧ್ಯಕ್ಷ ಕೆ.ಎನ್.ಜಗದೀಶ, ರಾಜ್ಯ ಉಪಾಧ್ಯಕ್ಷ ರಾಮಚಂದ್ರಯ್ಯ, ಜಿಲ್ಲಾಧ್ಯಕ್ಷ ಉಮೇಶ್, ಜಿಲ್ಲಾ ಉಪಾಧ್ಯಕ್ಷ ಸಂಗಮ್, ಚ.ರಾ.ಪಟ್ಟಣ ತಾ.ಅಧ್ಯಕ್ಷ ಜಗದೀಶ್, ತಾ. ಅಧ್ಯಕ್ಷ ಅರುಣ್‌ಕುಮಾರ್, ಗೌ.ಅಧ್ಯಕ್ಷ ಸುದರ್ಶನ್, ಪ್ರ.ಕಾರ್ಯದರ್ಶಿ ಬಿ.ಎಲ್. ಲಕ್ಷ್ಮಣ್, ಜಿಲ್ಲಾ ಉಪಾಧ್ಯಕ್ಷ ಡಿ.ಪಿ.ಸೋಮೇಶ್, ನಗರಾಧ್ಯಕ್ಷ ವಿ.ಎಸ್.ಭೋಜೇಗೌಡ, ಜಯಂತಿ, ಜಯಪ್ರಕಾಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

