ಹಾಸನ

ವಿದ್ಯಾವಂತರಲ್ಲೂ ಹಕ್ಕುಗಳ ಬಗ್ಗೆ ತಿಳಿವಳಿಕೆ ಇಲ್ಲ: ಮಧು

Published On :

ಹೊಳೆನರಸೀಪುರ: ಇಂದಿನ ದಿನಗಳಲ್ಲಿ ಸಾಮಾನ್ಯ ಜನರು ಮಾತ್ರವಲ್ಲದೆ ವಿದ್ಯಾವಂತರಿಗೂ ತಮ್ಮ ಹಕ್ಕುಗಳ ಬಗ್ಗೆ ತಿಳಿವಳಿಕೆ ಇಲ್ಲದೆ, ಮಾನವ ಹಕ್ಕುಗಳ ಅರಿವಿನ ಕೊರತೆಯಿಂದ ಜನತೆ ಇಂದು ಹೋರಾಟ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷ ಮಧುಕರ್ ವಿಷಾದಿಸಿದರು.
 ಪಟ್ಟಣದ ಕೋಟೆ ಕಾಳಿಕಾಂಬ ದೇವಸ್ಥಾನದ ರಸ್ತೆಯಲ್ಲಿ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಯ ತಾಲೂಕು ಘಟಕದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಇದಕ್ಕಾಗಿ ನಾಗರಿಕರಲ್ಲಿ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವಲ್ಲಿ ಸಮಿತಿ ಕಾರ್ಯಪ್ರವೃತ್ತವಾಗಲಿದೆ ಎಂದು ತಿಳಿಸಿದರು.
 ಸಮಿತಿಯು ನಾಗರಿಕರಲ್ಲಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಹಾಗೂ ಹಕ್ಕುಗಳ ಉಲ್ಲಂಘನೆಯಾದಲ್ಲಿ ಉಲ್ಲಂಘಿಸಿದವರ ವಿರುದ್ಧ ಕಾನೂನು ಹೋರಾಟ ನಡೆಸುವುದು ಸಮಿತಿಯ ಉದ್ದೇಶವಾಗಿದೆ.
ಇದಕ್ಕೆ ಪಟ್ಟಣದ ಜನತೆಯ ಸಹಕಾರ ಅಗತ್ಯ ಬಹಳಷ್ಟು ಕಡೆ ಮಾನವನ ಹಕ್ಕಿನ ಉಲ್ಲಂಘನೆಯಾದಾಗ, ನೊಂದವರು ತಮ್ಮ ಹಕ್ಕಿನ ಬಗ್ಗೆ ಧ್ವನಿ ಎತ್ತದೇ ಸುಮ್ಮನಾಗುವುದರಿಂದ, ಇಂದು ಉಲ್ಲಂಘನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಸಂಘಟನೆಯು ನೊಂದವರ, ಅಸಹಾಯಕರ ಧ್ವನಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
 ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳಿಗೆ ಸಂಬಂಧಿಸಿದ ನಾಗರಿಕರ ಕೈಪಿಡಿ ಎಂಬ ಪುಸ್ತಕ ವಿತರಿಸಲಾಯಿತು.  ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಬೊಮ್ಮೇಗೌಡ, ತಾಲೂಕು ಅಧ್ಯಕ್ಷ ಜಿ.ವಿ. ಕುಮಾರ್, ಉಪಾಧ್ಯಕ್ಷ ಎ.ಎಸ್. ರವಿಕುಮಾರ್, ಕಾರ್ಯಾಧ್ಯಕ್ಷ ವಸಂತ್‌ಕುಮಾರ್ ಆರ್, ಪ್ರಧಾನ ಕಾರ್ಯದರ್ಶಿ ರವಿನಂದಸ್ವಾಮಿ, ಕಾರ್ಯದರ್ಶಿ ಶಿವೇಗೌಡ, ಸಹಾಯಕ ಕಾರ್ಯದರ್ಶಿ ಮುತ್ತುರಾಜ್, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ನಾಜಿರ್, ಮಹಿಳಾ ಘಟಕ ಅಧ್ಯಕ್ಷೆ ಪಿರಂಬಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.