'ಆಧುನಿಕ ಶೈಲಿಯಿಂದ ನೈತಿಕತೆ ಕುಸಿತ'
ಹೊಳೆನರಸೀಪುರ: ಇಂದಿನ ಆಧುನಿಕ ಜೀವನ ಶೈಲಿಯಿಂದಾಗಿ ಸಾಮಾಜಿಕ, ನೈತಿಕ ಜೀವನ ಮೌಲ್ಯಗಳು ಅರ್ಥ ಕಳೆದುಕೊಳ್ಳುತ್ತಿದ್ದು, ಇಂದು ಮಹಿಳೆಯು ನಿರ್ಭೀತಿಯಿಂದ ಕಾರ್ಯ ನಿರ್ವಹಿಸುವ ಮತ್ತು ಓಡಾಡುವುದೂ ಕಷ್ಟವಾಗಿದೆ ಎಂದು ತಾಪಂ ಅಧ್ಯಕ್ಷೆ ಪುಷ್ಪಾವತಿ ಗೌಡೇಗೌಡ ಕಳವಳ ವ್ಯಕ್ತಪಡಿಸಿದರು.
ಇಲ್ಲಿನ ಶಿಕ್ಷಣ ಇಲಾಖೆಯು ಶಿಕ್ಷಕರ ಭವನದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯ ವತಿಯಿಂದ ಪೌಢಶಾಲಾ ದೈಹಿಕ ಶಿಕ್ಷಕರಿಗಾಗಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಕರಾಟೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಕಚೇರಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸ್ವತಂತ್ರವಾಗಿ ಕೆಲಸ ಮಾಡುವುದು ಕಷ್ಟವಾಗಿದೆ ಎಂದರು.
ಇದರಿಂದಾಗಿ ಮಹಿಳೆಯರು, ಹೆಣ್ಣು ಮಕ್ಕಳು ಪ್ರತಿನಿತ್ಯವೂ ಒಂದಲ್ಲಾ ಒಂದು ಕಡೆ, ಒಂದಲ್ಲಾ ಒಂದು ಸನ್ನಿವೇಶದಲ್ಲಿ ಲೈಂಗಿಕ ದೌರ್ಜನ್ಯಕ್ಕೆ, ಶೋಷಣೆಗೆ ಒಳಗಾಗುತ್ತಲೇ ಇರುವ ಕಾರಣದಿಂದಾಗಿ ಮಹಿಳೆಯರ ಬದುಕಿನ ಮೇಲೆ ಕರಾಳ ದಿನಗಳು ಆರಂಭಗೊಂಡು ಮಹಿಳೆಯರ ಜೀವನ ಆತಂಕದಲ್ಲಿದೆ ಎಂದು ವಿಷಾದಿಸಿದರು.
ಈ ಕುರಿತಂತೆ ಮಾದ್ಯಮಗಳಲ್ಲಿ ಪ್ರತಿನಿತ್ಯವೂ ವರದಿಗಳು ಬರುತ್ತಲೇ ಇದ್ದರೂ ಇಂದಿನ ದಿನಗಳಲ್ಲಿ ಮಹಿಳೆಯರ ಬದುಕು ಸುರಕ್ಷಿತವಾಗಿಲ್ಲ ಎಂದು ನುಡಿದರು.ಮಾತ್ರವಲ್ಲ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸ್ವತಂತ್ರವಾಗಿ ಕೆಲಸ ಮಾಡುವುದು ಕಷ್ಟವಾಗಿದೆ ಎಂದರು.
ಹೆಣ್ಣು ಮಕ್ಕಳ ಸಂರಕ್ಷಣೆ ದೃಷ್ಟಿಯಿಂದ ಈ ತರಬೇತಿ ಉಪಯುಕ್ತವಾಗಿದ್ದು, ಈ ಯೋಜನೆಯನ್ನು ಎಲ್ಲಾ ಶಾಲೆಗಳಲ್ಲಿಯೂ ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಶಿಕ್ಷಕರಿಗೆ ಕರೆನೀಡಿದರು.
ಕ್ಷೇತ್ರ ಶಿಕ್ಷಣ ಸಂಪನ್ಮೂಲ ಅಧಿಕಾರಿಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎನ್.ನಾಗರಾಜು, ನೋಡಲ್ ಅಧಿಕಾರಿ ಸಿದ್ದೇಶ್‌ಕುಮಾರ್, ಇಸಿಒ ಶಂಸುಲ್ಲಾ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ನಾಗರಾಜ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

