ಕಣಕಟ್ಟೆ ವಿದ್ಯಾರಣ್ಯ ಸಂಸ್ಥೆಯಲ್ಲಿ ಸರ್ಎಂವಿ ಜನ್ಮ ದಿನಾಚರಣೆ
ಅರಸೀಕೆರೆ: ಕಣಕಟ್ಟೆಯ ವಿದ್ಯಾರಣ್ಯ ಕೈಗಾರಿಕಾ ತರಬೇತಿ ಸಂಸ್ಥೆ ಮತ್ತು ವಿದ್ಯಾರಣ್ಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ 152ನೇ ಜನ್ಮ ದಿನಾಚರಣೆ (ಎಂಜಿನಿಯರ್ಸ್ ಡೇ) ಯನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.
ವಿದ್ಯಾರಣ್ಯ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎ.ನಾಗೇಶ್ರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವೇಶ್ವರಯ್ಯ ಅವರ ದೂರದೃಷ್ಟಿ, ತಾಂತ್ರಿಕ ಕೌಶಲ್ಯ, ನಾನಾ ಕೈಗಾರಿಕೆಗಳ ಸ್ಥಾಪನೆ ಇಡೀ ದೇಶದ ಆರ್ಥಿಕ ಪ್ರಗತಿಗೆ ಸಹಾಯಕವಾಗಿದ್ದು, ಅವರ ಆದರ್ಶಗಳಲ್ಲಿ ಕೆಲವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಸಲಹೆ ನೀಡಿದರು.
ಕೋಡಿಮಠ ಕಾಲೇಜಿನ ಇತಿಹಾಸ ಉಪನ್ಯಾಸಕ ಎ.ಬಿ. ಸೋಮಶೇಖರ್, ವಿದ್ಯಾರಣ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಶಿಕುಮಾರ್ ಮತ್ತಿತರರು ಮಾತನಾಡಿದರು.
ವಿದ್ಯಾರಣ್ಯ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ಎಸ್.ಎಂ. ಚೇತನ್ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಹನುಮೇಶ್ ನಿರೂಪಿಸಿದರು. ಈಳಗೇರ ಪ್ರಕಾಶ್ ಸ್ವಾಗತಿಸಿ, ಬಸವರಾಜು ವಂದಿಸಿದರು.
ರಾಸು ಬಂಜೆತನ ನಿವಾರಣಾ ಶಿಬಿರ
ಹಾಸನ: ತಾಲೂಕಿನ ದೊಡ್ಡಬೀಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಪಶುಪಾಲನಾ ಇಲಾಖೆ, ಲಯನ್ಸ್ ಕ್ಲಬ್ ಹಾಸನ ಹಾಗೂ ಪಶು ವೈದ್ಯಕೀಯಕಾಲೇಜಿನ ಆಶ್ರಯದಲ್ಲಿ ಇತ್ತೀಚೆಗೆ ರಾಸುಗಳಿಗೆ ತೈಲೇರಿಯ ಚುಚ್ಚುಮದ್ದು ಹಾಗೂ ಬಂಜೆತನ ಶಿಬಿರ ಏರ್ಪಡಿಸಲಾಗಿತ್ತು.ಡಾ.ಮಹೇಶ್, ಡಾ.ರಮೇಶ್, ಡಾ.ಚೇತನ್, ಡಾ.ಮಾದೇವ್ ಹಾಗೂ ಲಯನ್ಸ್ ಸೇವಾ ಸಂಸ್ಥೆ ಅಧ್ಯಕ್ಷ ಗಿರೀಶ್ಕುಮಾರ್, ಕಾರ್ಯದರ್ಶಿ ಬಿ.ಸೋಮೇಶ್, ಸಹ ಕಾರ್ಯದರ್ಶಿ ಕೇಶವಪ್ರಸಾದ್, ಪಿಆರ್ಒ ಚಂದ್ರೇಗೌಡ, ಖಜಾಂಚಿ ಆನಂದ್ ಮತ್ತು ಸದಸ್ಯರು ಭಾಗವಹಿಸಿದ್ದರು.
ಬಂಜೆತನ ನಿವಾರಣಾ ಶಿಬಿರದಲ್ಲಿ 82 ರಾಸುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿತ್ತು,. 18 ರಾಸುಗಳ ಆರೋಗ್ಯ ತಪಾಸಣೆ ಮಾಡಲಾಯಿತು. 8 ರಾಸುಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. 124 ರಾಸುಗಳಿಗೆ ಥೈಲೇರಿಯ ಚುಚ್ಚುಮದ್ದು ನೀಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

