ಕಾರ್ಮಿಕರಿಗೆ ತರಬೇತಿ
ಹಾಸನ: ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಇತ್ತೀಚೆಗೆ ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ನಿಂದ ಸಿಮೆಂಟ್ ನಿರ್ಮಾಣ ಮಾಡುವ ಕಾರ್ಮಿಕರಿಗೆ ತರಬೇತಿ ಕಾರ್ಯಕ್ರಮ ನಡೆಸಿದರು. ತರಬೇತಿ ಕಾರ್ಯಕ್ರಮ ಉದ್ಘಾಟಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಸಿವಿಲ್ ಎಂಜಿನಿಯರ್ ಡಾ.ಪ್ರಶಾಂತ್ ಮಾತನಾಡಿ, ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಭಾರತದಲ್ಲಿ ಸಿಮೆಂಟ್ ಮತ್ತು ಆದಿತ್ಯ ಬಿರ್ಲಾ ಗ್ರೂಪ್ ಹಾಸನ ಭಾಗದಲ್ಲಿ ಉತ್ಪಾದಿಸುತ್ತಿದೆ. ಈ ಕೆಲಸದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಕೆಲಸ ಮಾಡುವ ಸ್ಥಳದಲ್ಲಿನ ಸುರಕ್ಷತೆ ಬಗ್ಗೆ ತಿಳಿಸಿದರು. ರಾಜ್ಯ ಕಟ್ಟಡ ಕೆಲಸಗಾರರ ಸಂಘದ ಅಧ್ಯಕ್ಷ ಹೆಚ್.ವಿ. ಸ್ವಾಮಿ, ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಶಿವಮೊಗ್ಗ ಸಹಾಯಕ ಮ್ಯಾನೇಜರ್ ಶಶಿರಾಜ್, ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಅಧಿಕಾರಿ ಸುಧೀರ್ ಆರ್. ರಾವ್ ಇತರರು ಇದ್ದರು.
ಜಗದೀಶ್ಗೆ ವಿಶ್ವೇಶ್ವರಯ್ಯ ಪ್ರಶಸ್ತಿ
ಹಾಸನ: ಜಿಲ್ಲೆಯ ರಾಮಘಟ್ಟ ಗ್ರಾಮದ ರಂಗಭೂಮಿ ಕಲಾವಿದ ಹಾಗೂ ಕಾರ್ಲೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಜಗದೀಶ್ ರಾಮಘಟ್ಟ ಅವರ ಪೌರಾಣಿಕ ರಂಗ ಕಲಾ ಸೇವೆಯನ್ನು ಗುರುತಿಸಿ ಅವರಿಗೆ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಟೌನ್ಹಾಲ್ನಲ್ಲಿ ನಡೆದ ಅಖಿಲ ಭಾರತ ಕರ್ನಾಟಕ ರಂಗಭೂಮಿ ಕಲಾವಿದರ ಸಾಂಸ್ಕೃತಿಕ ಸಮಾವೇಶ ಮತ್ತು ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಜಗದೀಶ್ ರಾಮಘಟ್ಟ ಅವರಿಗೆ ವಿಶ್ವೇಶ್ವರಯ್ಯ ಪ್ರಶಸ್ತಿ ಪ್ರದಾನ ಮಾಡಿದರು.
ಈಜು ಸ್ಪರ್ಧೆಗೆ ಆಯ್ಕೆ
ಹಾಸನ: ನಗರದ ಕೇಂದ್ರೀಯ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿ ರಕ್ಷಿತ್ ಪ್ರಸಾದ್ ಅಕ್ಟೋಬರ್ನಲ್ಲಿ ನಡೆಯುವ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಅಲ್ಲದೆ ಈತ ಇತ್ತೀಚೆಗೆ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ 100 ಮೀ ಪ್ರಿಸ್ಟೈಲ್ನಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ, 200 ಮೀಟರ್ನಲ್ಲಿ ತೃತೀಯ ಸ್ಥಾನ ಗಳಿಸಿ ಕಂಚಿನ ಪದಕ, 400 ಮೀಟರ್ನಲ್ಲಿ ದ್ವಿತೀಯ ಸ್ಥಾನ ಪಡೆದು ಕಂಚಿನ ಪದಕ ಹಾಗೂ 400 ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಪಡೆದಿದ್ದಾನೆ. ಸೆ. 29 ಮತ್ತು 30 ರಂದು ನಡೆಯುವ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶೀಘ್ರ ಲಿಪಿಗಾರರ ಹುದ್ದೆಗೆ ಅರ್ಜಿ
ಹಾಸನ: ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 23 ಶೀಘ್ರಲಿಪಿಗಾರರ ಹುದ್ದೆಗೆ ಅರ್ಹ ಅಭ್ಯರ್ಥ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರ ಹುದ್ದೆಗೆ ವಿದ್ಯಾರ್ಹತೆ - ಎಸ್ಸೆಸ್ಸೆಲ್ಸಿ ಪಾಸು, ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಹಿರಿಯ ದರ್ಜೆ ಶೀಘ್ರಲಿಪಿಯಲ್ಲಿ ಉತ್ತೀರ್ಣತೆ ಹಾಗೂ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಹಿರಿಯ ದರ್ಜೆ ಶೀಘ್ರಲಿಪಿಯಲ್ಲಿ ಉತ್ತೀರ್ಣತೆ ಹಾಗೂ ಕನ್ನಡ ಮತ್ತು ಇಂಗಿಷ್ನಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು. ವಯೋವುತಿ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋವುತಿ ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ವರ್ಗಕ್ಕೆ-38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಕ್ಕೆ -40 ವಯೋವುತಿ. ಅರ್ಜಿ ಸಲ್ಲಿಕೆಗೆ ನ.11 ಕಡೇ ದಿನ. ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ನ್ಯಾಯಾಲಯ ಕಚೇರಿ ಅಥವಾ ಜಿಲ್ಲೆಯ ಎಲ್ಲಾ ಅಧೀನ ನ್ಯಾಯಾಲಯ ಕಚೇರಿ ಮತ್ತು ಇತರೆ ಜಿಲ್ಲೆಗಳ ಜಿಲ್ಲಾ ನ್ಯಾಯಾಧೀಶರ ಕಾರ್ಯಾಲಯದಲ್ಲಿ ಮಾಹಿತಿ ಪಡೆಯಬಹುದು.
ಬೆರಳಚ್ಚುಗಾರರ ಹುದ್ದೆಗೆ ಅರ್ಜಿ
ಹಾಸನ: ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 2 ಬೆರಳಚ್ಚುಗಾರರು ಮತ್ತು 1 ಬೆರಳಚ್ಚು-ನಕಲುಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆರಳಚ್ಚುಗಾರರ ಹುದ್ದೆಗೆ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಉತ್ತೀರ್ಣತೆ. ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.ಈ ಹುದ್ದೆಗೆ ಎಸ್ಸೆಸ್ಸೆಲ್ಸಿ ಉತ್ತೀರ್ಣತೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.ವಯೋವುತಿ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋವುತಿ ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ-22, 2ಬಿ, 3ಎ ಮತ್ತು 3ಬಿ ವರ್ಗಕ್ಕೆ-38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ಕ್ಕೆ -40 ವಯೋವುತಿ. ಅರ್ಜಿ ಸಲ್ಲಿಸಲು ಕಡೆಯ ದಿ 30-10-2013 ರ ಸಂಜೆ 5 ಗಂಟೆವರೆಗೆ.ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ನ್ಯಾಯಾಲಯ ಕಚೇರಿ ಅಥವಾ ಜಿಲ್ಲೆಯ ಅಧೀನ ನ್ಯಾಯಾಲಯ ಕಚೇರಿಗಳಲ್ಲಿ ಮತ್ತು ಇತರೆ ಜಿಲ್ಲಾ ನ್ಯಾಯಾಧೀಶರ ಕಾರ್ಯಾಲಯದಲ್ಲಿ ಪಡೆಯಬಹುದು.
ಕೋಡಿ ದುರಸ್ತಿಗೆ ಸಿಇಒ ಸೂಚನೆ
ಹಾಸನ: ಬೇಲೂರು ತಾಲೂಕು ಬಿಕ್ಕೋಡು ಹೋಬಳಿ ಅಡಿಕೆ ಕಟ್ಟೆ ತೂಬು ಮತ್ತು ಕೋಡಿಯನ್ನು ಕೂಡಲೇ ದುರಸ್ತಿಗೊಳಿಸುವಂತೆ ತಾಪಂ ನಿರ್ವಹಣಾಧಿಕಾರಿಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ಸೂಚಿಸಿದ್ದಾರೆ.ತಾಲೂಕಿನ ಬದನೆ ಕೆರೆಯ ತೂಬು ಮತ್ತು ಕೋಡಿ ದುರಸ್ತಿ, ಹೊಳಲು ಊರೊಳಗಿನ ಕಾಲೋನಿಯ ಹಳೇ ಪುರದ ಕೆರೆ ಏರಿ ಕಾಮಗಾರಿಗಳನ್ನು ಕೂಡಲೇ ದುರಸ್ತಿಗೊಳಿಸಬೇಕು ಎಂದು ತಿಳಿಸಿದ್ದಾರೆ.ಕಾಮಗಾರಿಯನ್ನು ಪರಿಶೀಲಿಸಿ 2013-14ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಈ ಕಾಮಗಾರಿಯನ್ನು ದುರಸ್ತಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕೆ.ಎಸ್. ತೀರ್ಥಪ್ಪ ಅವರು ದೂರು ನೀಡಿದ್ದರ ಮೇರೆಗೆ ಈ ಕ್ರಮಕ್ಕೆ ಸೂಚಿಸಲಾಗಿದೆ.
ಡಯಾಬಿಟಿಸ್ ತಪಾಸಣಾ ಶಿಬಿರ
ಹಾಸನ: ನಗರದ ಹಾಸನಾಂಬ ಲಯನ್ಸ್ ಕ್ಲಬ್ನಿಂದ ಯೂನಿಫಾರ್ ಶಾಲಾ ಆವರಣದಲ್ಲಿ ಡಯಾಬಿಟಿಸ್ 2ನೇ ಉಚಿತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು. ಶಿಬಿರದಲ್ಲಿ ರಕ್ತ ಪರೀಕ್ಷೆ ನಡೆಸಿ ಡಯಾಬಿಟಿಸ್ ಇರುವವರಿಗೆ ಹಾಸನ ಒಬೇಸಿಟಿ ಅಂಡ್ ಡಯಾಬಿಟಿಸ್ ಸೆಂಟರ್ನ ನುರಿತ ತಜ್ಞರಿಂದ ಚಿಕಿತ್ಸೆ ನೀಡಲಾಯಿತು. ಮೈಕ್ರೋ ಲ್ಯಾಬಬ್ಸಿ ಲಿಮಿಟೆಡ್ ಔಷಧಿ ತಯಾರಿಕಾ ಕಂಪನಿಯ ಸಹಕಾರದೊಂದಿಗೆ ಶಿಬಿರ ಯಶಸ್ವಿಯಾಗಿ ನಡೆಯಿತು ಎಂದುಲಯನ್ಸ್ ಅಧ್ಯಕ್ಷ ಕೆ.ವಿ.ರವಿಂದ್ರಕುಮಾರ್ ತಿಳಿಸಿದ್ದಾರೆ. ಅಕ್ಟೋಬರ್ನಲ್ಲಿ ವಿಜಯನಗರ ಬಡಾವಣೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗುವುದು ಎಂದರು.
ಸ್ಥಳೀಯರ ನೇಮಕಕ್ಕೆ ಭಕ್ತರ ಆಗ್ರಹ
ಸಕಲೇಶಪುರ: ಬೆಟ್ಟದ ಬೈರವೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ಸ್ಥಳೀಯರನ್ನು ನೇಮಿಸುವ ಮೂಲಕ ದೇವಸ್ಥಾನದಲ್ಲಿ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಬೆಟ್ಟದ ಬೈರವೇಶ್ವರ ದೇವಸ್ಥಾನದ ಭಕ್ತರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಕೆರೆ ಗ್ರಾಪಂ ಮಾಜಿ ಅಧ್ಯಕ್ಷ ಎಂ.ಪಿ. ಕೃಷ್ಣೇಗೌಡ, ಪುರಾತನ ಕಾಲದ ಬೆಟ್ಟದ ಬೈರವೇಶ್ವರ ದೇವಸ್ಥಾನಕ್ಕೆ ಕೋಟ್ಯಂತರ ಆದಾಯ ಬರುತ್ತಿದ್ದು, ಅದನ್ನು ದೇವಸ್ಥಾನದ ಅರ್ಚಕ ಗಣಪತಿ ಭಟ್ಟ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಇಲ್ಲದಾಗಿದ್ದು ಭಕ್ತರು ನೀಡುವ ಭಾರಿ ಕಾಣಿಕೆಗಳು ಅರ್ಚಕರ ಪಾಲಾಗುತ್ತಿದೆ ಎಂದು ದೂರಿದರು. ಈ ನಿಟ್ಟಿನಲ್ಲಿ ದೇವಸ್ಥಾನದ ಭಕ್ತರು, ಪ್ರಸ್ತುತ ಆಡಳಿತ ಮಂಡಳಿ ಬದಲಾಯಿಸಿ ಸ್ಥಳೀಯ ಜನರನ್ನು ಒಳಗೊಂಡ ಆಡಳಿತ ಮಂಡಳಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು.
ಕೃಷ್ಣಗೆ ಪಿಎಚ್ಡಿ
ಹಾಸನ: ಸಿಂಡಿಕೇಟಿನಿಂದ ಕುಲಪತಿಗಳಿಗೆ ದತ್ತವಾದ ಅಧಿಕಾರಕ್ಕೆ ಅನುಗುಣವಾಗಿ ಮತ್ತು ಪರೀಕ್ಷಾ ಮಂಡಳಿ ಶಿಫಾರಸ್ಸಿನ ಮೇರೆಗೆ ಪ್ರೊ. ಪದ್ಮಶೇಖರ್ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ಹಾಸನದ ಪಿ.ಜೆ.ಕೃಷ್ಣ ಸಾದರಪಡಿಸಿದ 'ಕನ್ನಡ ಜನಪದ ಮಹಾಕಾವ್ಯಗಳಲ್ಲಿ ಪ್ರತಿಭಟನೆಯ ನೆಲೆಗಳು' ಪ್ರಬಂಧವನ್ನು ಪಿಎಚ್ ಡಿ ಪದವಿಗೆ ಅಂಗೀಕರಿಸಲಾಗಿದೆ. ಕೃಷ್ಣ ಈ ಪಿಎಚ್ಡಿ ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಡೆಯಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

