ಹಾಸನ

ವಿದ್ಯುತ್ ವ್ಯತ್ಯಯ ಸರಿಪಡಿಸದ್ದರೆ ಅಧಿಕಾರಿಗಳ ವಿರುದ್ಧ ಕ್ರಮ: ಶಾಸಕ ಬಾಲಕೃಷ್ಣ

Published On :

ಚನ್ನರಾಯಪಟ್ಟಣ: ತಾಲೂಕಿನಲ್ಲಿ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಸರಿಪಡಿಸುವುದು ಹಾಗೂ ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದ ಅಧಿಕಾರಿಗಳು ವರ್ಗ ಮಾಡಿಸಕೊಂಡು ಹೋಗಬಹುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಎಚ್ಚರಿಸಿದರು.
ಪಟ್ಟಣದಲ್ಲಿ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಏರ್ಪಡಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಅಧಿಕ ಕೃಷಿ ಪಂಪ್‌ಸೆಟ್‌ಗಳಿದ್ದು, ವಿದ್ಯುತ್ ಸರಬರಾಜಿನಲ್ಲಿ ಬಹಳ ವ್ಯತ್ಯಯವಾಗುತ್ತಿರುವ ಜತೆಗೆ ಸುಟ್ಟುಹೋದ ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾಯಿಸುವಲ್ಲಿ ಅಧಿಕಾರಿಗಳು ಗ್ರಾಹಕರ ಜತೆ ಸ್ಪಂದಿಸದಿರುವ ಬಗ್ಗೆ ಹಲವು ದೂರುಗಳು ಕೇಳುತ್ತಿದ್ದು, ತಮಗೆ ಇಷ್ಟವಿಲ್ಲದಿದ್ದರೆ ಇಲ್ಲಿಂದ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು ಎಂದರು.
ತಾಲೂಕಿನಲ್ಲಿ ಕುಡಿಯುವ ನೀರಿಗೆ ಕೆಲವೆಡಗಳಲ್ಲಿ ವಿದ್ಯುತತ್ನೀಡಲು ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದ ಶಾಸಕರು, ಕುಡಿಯುವ ನೀರಿನ ಯೋಜನೆಗೆ ವಿದ್ಯುತ್ ಕಲ್ಪಿಸಲು ಗುತ್ತಿಗೆದಾರರು ವಿಳಂಬ ತೋರಬಾರದು ಎಂದು ತಿಳಿಸಿದರು. ಪುರಸಭಾಧ್ಯಕ್ಷ ಮಂಜಣ್ಣ, ಉಪಾಧ್ಯಕ್ಷೆ ಗೀತಾ, ಜಿಲ್ಲಾ  ವಿದ್ಯುತ್ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ದೇವರಾಜು, ತಾಲೂಕು ಅಧ್ಯಕ್ಷ ರಮೇಶ್, ಸಂಘದ ಪದಾಧಿಕಾರಿಗಳಾದ ಶಿವರಾಂ, ರವಿಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.