ಹಾಸನ

ಅರ್ಬನ್ ಬ್ಯಾಂಕ್‌ನಲ್ಲಿ ಗುಂಪುಗಾರಿಕೆ: ಆರೋಪ

Published On :

ಬೇಲೂರು: ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಉತ್ತಮ ಸ್ಥಿತಿಯಲ್ಲಿ ನಡೆಯುತ್ತಿದ್ದರೂ ಕೆಲ ವಿಷಯದಲ್ಲಿ ಅಧ್ಯಕ್ಷರು ಗುಂಪುಗಾರಿಕೆ ಮೂಲಕ ತಪ್ಪೆಸಗುತ್ತಿದ್ದಾರೆ ಎಂದು ಬ್ಯಾಂಕ್ ನಿರ್ದೇಶಕರು ದೂರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಅಣ್ಣೇಗೌಡ, ನಮ್ಮ ಒತ್ತಾಯದ ಮೇಲೆ ಸುಸ್ತಿ ಸಾಲಗಳ ವಸೂಲಾತಿ ಚುರುಕುಗೊಳಿಸಿರುವುದು ಸಂತಸವಾಗಿದೆ. ಆದರೆ ಸರ್ವ ಸದಸ್ಯರ ಸಭೆ ನಡೆಸಲು ನಾನೂ ಹಾಗೂ ಸದಸ್ಯ ಉಮಾಶಂಕರ್ ಬ್ಯಾಂಕ್‌ಗೆ ಹೊರೆಯಾಗದಂತೆ ಬಾಡಿಗೆ ಹಣ ಕೊಟ್ಟು ಶಿವಕುಮಾರ ಸ್ವಾಮೀಜಿ ಸಮುದಾಯ ಭವನವನ್ನು ಕೊಡಿಸುವುದಾಗಿ ತಿಳಿಸಿದರೂ ಒಪ್ಪದೆ ಚನ್ನಕೇಶವೇಗೌಡರ ಕಲ್ಯಾಣ ಮಂಟಪದಲ್ಲೆ ಸಭೆ ನಡೆಸುವುದಾಗಿ ತಿಳಿಸಿ ನಷ್ಟ ಉಂಟು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲಾಭಾಂಶವನ್ನು ಷೇರುದಾರರ ಷೇರುಹಣಕ್ಕೆ ಜಮಾ ಮಾಡಬೇಕಿದೆ. ಆದರೆ ಇದಾವುದನ್ನೂ ಅಧ್ಯಕ್ಷರು, ವ್ಯವಸ್ಥಾಪಕರು ಮಾಡುತ್ತಿಲ್ಲ ಕೆಲವು ನಿರ್ದೇಶಕರು ಇವರಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಆರೋಪಿಸಿದರು. ಸರ್ವ ಸದಸ್ಯರ ಸಭೆಗೆ ಹಾಜರಾಗುವ ಸದಸ್ಯರಿಗೆ ರು.90 ಕೊಟ್ಟು ಊಟ ಹಾಕಿಸುವ ಬದಲು ಹಣವನ್ನ ನೀಡುವುದು ಒಳ್ಳೆಯದು. ಸರ್ವ ಸದಸ್ಯರ ಸಭೆಯ ನಡಾವಳಿಯನ್ನು ವಿಡಿಯೋ ಚಿತ್ರೀಕರಣ ಮಾಡಿಸಬೇಕೆಂದು ಆಗ್ರಹಿಸಿದರು.  

ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಹಾಸನ:  ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡ ನಗರದ ಮಲೆನಾಡು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶನಿವಾರ ನಡೆದಿದೆ. ಇಲ್ಲಿನ ಶಾಂತಿನಗರ ವಾಸಿಯಾಗಿದ್ದ ಮುಖೇಶ್ ಎಂಬ ವಿದ್ಯಾರ್ಥಿಯೇ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ದುರ್ದೈವಿ.ಮುಖೇ ಶ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಹಣ ಸೋತಿದ್ದ. ಈ ವಿಚಾರ ಮನೆಯವರಿಗೆ ತಿಳಿದಿದ್ದು, ಇದರಿಂದ ಬೇಸತ್ತ ಪೋಷಕರು ಮುಖೇಶ್‌ಗೆ ಬೈದ ಪರಿಣಾಮ, ಮನನೊಂದ ಮುಖೇಶ್ ಆತ್ಮಹತ್ಯೆ ಮಾಡಿಕೊಂಡು ಶಿವಮೊಗ್ಗದಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಬೆಟ್ಟಿಂಗ್ ತಡೆಗೆ ಶಾಸಕ ಪ್ರಕಾಶ್ ಆಗ್ರಹ
ಹಾಸನ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ. ಈ ಜಾಲವನ್ನು ಕಂಡು ಹಿಡಿದು ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಂಡು ದಂಧೆಗೆ ಕಡಿವಾಣ ಹಾಕಬೇಕಾಗಿದೆ ಎಂದು ಶಾಸಕ ಎಚ್.ಎಸ್. ಪ್ರಕಾಶ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.