ಹಾಸನ

ಕೇರಳ ಮಾದರಿಯಲ್ಲಿ ತೆಂಗು ಬೆಳೆಗಾರರಿಗೆ ರಾಜ್ಯ ಪರಿಹಾರ ನೀಡಲಿ: ದೇವೇಗೌಡ

Published On :

ಹಾಸನ: ಮಳೆ ಪ್ರಮಾಣ ಕಡಿಮೆಯಾಗಿ ರೋಗದಿಂದ ತೆಂಗಿನ ಬೆಳೆಯನ್ನು ಕಳೆದುಕೊಂಡ ರೈತರಿಗೆ ಕೇರಳ ಮಾದರಿಯಲ್ಲಿ ರಾಜ್ಯ ಸರ್ಕಾರ ಪರಿಹಾರ ನೀಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದರು.
ದಾವಣಗೆರೆ ಜಿಲ್ಲೆ ಸೇರಿದಂತೆ ಮೈಸೂರು ಪ್ರಾಂತ್ಯದ ಎಲ್ಲ ಜಿಲ್ಲೆಗಳಲ್ಲಿ ತೆಂಗಿನ ಬೆಳೆ ನಾಶವಾಗಿದೆ. ಕೇರಳದಲ್ಲಿ ಪಂಚಾಯ್ತಿಗಳ ಮೂಲಕ ನಷ್ಟದ ಅಂದಾಜು ಪಟ್ಟಿ ತಯಾರಿಸಿ ರೈತರಿಗೆ ಪರಿಹಾರ ನೀಡಲಾಗುತ್ತಿದೆ. ಅದನ್ನು ರಾಜ್ಯ ಸರ್ಕಾರವೂ ಅನುಸರಿಸುವುದು ಸೂಕ್ತ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಸಲಹೆ ನೀಡಿದರು.
ತೆಂಗು ಬೆಳೆಗಾರರಿಗೆ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಮತ್ತು ತೋಟಗಾರಿಕೆ ಸಚಿವರಿಗೆ ಪತ್ರ ಬರೆಯಲಾಗಿದೆ.
 ಕೇಂದ್ರ ಅಧ್ಯಯನ ತಂಡ ಹಾನಿಗೀಡಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಆದರೆ, ರಾಜ್ಯ ಸರ್ಕಾರ ನಷ್ಟದ ಅಂದಾಜು ವರದಿ ಸಿದ್ದಪಡಿಸಿದರೆ ಕೇಂದ್ರದಿಂದ ಪರಿಹಾರ ಲಭ್ಯವಾಗುತ್ತದೆ. ಅಡಕೆ ಬೆಳೆಗಾರರಿಗಲ್ಲದೆ ಕಾಫಿ, ಏಲಕ್ಕಿ, ಮೆಣಸು ಬೆಳೆಗಾರರಿಗೂ ಪರಿಹಾರ ನೀಡಬೇಕಾಗಿದೆ. ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸಬಾರದು ಎಂದು ಆಗ್ರಹಿಸಿದರು.
ಕಾಡಾನೆ ದಾಳಿಗಿಲ್ಲ ತಡೆ: ಕಾಡಾನೆಗಳನ್ನು ಕೊಲ್ಲುವುದು ಸೂಕ್ತ ಎನಿಸುತ್ತಿದೆ. ಆದರೆ ಬೆಳೆ, ಪ್ರಾಣ ನಷ್ಟ ಮಾಡುತ್ತಿರುವ ಹಿಂಡಾನೆಗಳನ್ನು ಸ್ಥಳಾಂತರ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಮೇಲೆ ಒತ್ತಡ ಹೇರಲಾಗಿದೆ.  ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ, ಪುಷ್ಪೋದ್ಯಮ ದೃಷ್ಟಿಯಿಂದ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗಲೇಬೇಕಾಗಿದೆ. ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿ ಮತ್ತು ಹೋರಾಟದಿಂದ ಪಲಾಯನ ಮಾಡುವ ಜಯಾಮಾನ ನನ್ನದಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.