ಚನ್ನರಾಯಪಟ್ಟಣ: ಎಪಿಎಂಸಿಗೆ ಲೋಕಾಯುಕ್ತರ ದಿಢೀರ್ ಭೇಟಿ
ಚನ್ನರಾಯಪಟ್ಟಣ: ಜಿಲ್ಲಾ ಲೋಕಾಯುಕ್ತ ಎಸ್ಪಿ ವೇದಮೂರ್ತಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭೇಟಿ ನೀಡಿ, ಕೆಲವು ಕಡತಗಳನ್ನು ಪರಿಶೀಲಿಸಿ, ಸಮರ್ಪಕ ನಿರ್ವಹಿಸದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಇದೇ ರೀತಿ ಮುಂದುವರಿದರೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಶಿಫಾರಸು ಮಾಡುವುದಾಗಿ ಎಚ್ಚರಿಸಿದರು.
ಎಪಿಎಂಸಿ ವತಿಯಿಂದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ನಿವೇಶನದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ವರ್ಷಗಳು ಕಳೆದರೂ ಅವುಗಳನ್ನು ಬಾಡಿಗೆಗೆ ವಿಲೇವಾರಿ ಮಾಡದಿರುವ ಬಗ್ಗೆ ತೀವ್ರ ಅಸಮಧಾನ ಸೂಚಿಸಿ ಕೂಡಲೇ ವಿಲೇವಾರಿ ಮಾಡುವಂತೆ ಸೂಚಿಸಿದರಲ್ಲದೆ ಅದರಿಂದ ಸರ್ಕಾರಕ್ಕೆ ಬರುವ ಬಾಡಿಗೆ ನಷ್ಟವಾಗಿದೆ ಎಂದು ತಿಳಿಸಿದರು.
ನ್ಯಾಪೆಡ್ ಮೂಲಕ ಖರೀದಿಸುತ್ತಿರುವ ಉಂಡೆ ಕೊಬ್ಬರಿಯಲ್ಲಿ ಯಾವುದೇ ತೊಂದರೆಯಾಗದಂತೆ ಖರೀದಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ತೊಂದರೆ ನೀಡಿದರೆ, ಅದನ್ನು ದೂರಿನ ಮುಖೇನ ತಮ್ಮ ಗಮನಕ್ಕೆ ತಂದರೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಬೇಲೂರು ಆಟೋ ಚಾಲಕರ ಸಂಘಕ್ಕೆ ಆಯ್ಕೆ
ಬೇಲೂರು: ಆಟೋ ಚಾಲಕರ ಮತ್ತು ಮಾಲೀಕರ ಸಂಘಕ್ಕೆ ನಡೆದ ಅಧ್ಯಕ್ಷರು ಮತ್ತು ಸಂಘದ ಪದಾದಿಕಾರಿಗಳನ್ನು ಹೊಸದಾಗಿ ಚುನಾಯಿಸಲಾಯಿತು. ಅಧ್ಯಕ್ಷರಾಗಿ ಲೋಕೇಶ್, ಗೌರವಾಧ್ಯಕ್ಷರಾಗಿ ಶಿವಕುಮಾರ್, ಉಪಾಧ್ಯಕ್ಷರಾಗಿ ಚಂದ್ರುಶೇಖರ್ ಮತ್ತು ಖಜಾಂಚಿಯಾಗಿ ಜಮೀವುಲ್ಲಾ, ಪುನೀತ್, ಪ್ರಧಾನ ಕಾರ್ಯದರ್ಶಿಯಾಗಿ ದೀಪು, ಮತ್ತು ಕುಮಾರ್ ಅವರನ್ನು ಅವಿರೋಧವಾಗಿ ಒಮ್ಮತದಿಂದ ಅಯ್ಕೆಮಾಡಲಾಯಿತು.ಆಯ್ಕೆಯಾದ ಎಲ್ಲಾ ಸಮಿತಿಯ ಸದಸ್ಯರು ಆಟೋ ನಿಲ್ದಾಣದಿಂದ ಚನ್ನಕೇಶವಸ್ವಾಮಿ ದೇವಸ್ಥಾನದ ರಸ್ತೆಯವರೆಗೆ ಮೆರವಣಿಗೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

