ಹಾಸನ

ಇಂಧನ ಕಳವು ಪ್ರಕರಣ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

Published On :

ಹಾಸನ: ಡಿಸೇಲ್ ಮತ್ತು ಪೆಟ್ರೋಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಲೂರು ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಯಲಕ್ಷ್ಮೀ ಸದಾಶಿವ ಮತ್ತು ಸಬ್ ಇನ್ಸ್‌ಪೆಕ್ಟರ್ ಸೋಮೇಗೌಡ ಎಂಬುವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
 ಆಲೂರು ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗಿರುವ ಮಂಗಳೂರು- ಹಾಸನ  ಮಾರ್ಗದಲ್ಲಿ ಪೆಟ್ರೋಲ್, ಡಿಸೇಲ್ ಪೈಪ್  ಕೊರೆದು ಕಳವು ಮಾಡುತ್ತಿದ್ದನ್ನು ತಡೆಯುವಲ್ಲಿ ಕರ್ತವ್ಯ ಲೋಪ ಎಸಗಿದ್ದ ಆರೋಪ ಮೇರೆಗೆ ಅಮಾನತು ಮಾಡಿ, ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ರವಿ ಡಿ. ಚನ್ನಣ್ಣನವರ್  'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
ಜಯಲಕ್ಷ್ಮೀ ಅವರ ಸ್ಥಾನಕ್ಕೆ ಇನ್ಸ್‌ಪೆಕ್ಟರ್ ಸತೀಶ್ ಅವರನ್ನು ಪ್ರಭಾರೆಗೆ ಆಗಿ ನೇಮಕ ಮಾಡಲಾಗಿದೆ.
ಚನ್ನರಾಯಪಟ್ಟಣದಲ್ಲಿ ಇದೇ ಪ್ರಕರಣಕ್ಕೆ ಸಂಬಂ ಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಜಿಲ್ಲೆಯಲ್ಲಿ ನಡೆಯುತ್ತಿದ್ದ ಪೆಟ್ರೋಲ್, ಡಿಸೇಲ್ ದಂಧೆಯಲ್ಲದೆ, ಕ್ರಿಕೆಟ್ ಬೆಟ್ಟಿಂಗ್, ರಿಯಲ್ ಎಸ್ಟೇಟ್‌ನಲ್ಲಿ ನಡೆಯುತ್ತಿರುವ ವಂಚನೆ ಮತ್ತು ಅತಿ ಹೆಚ್ಚಿನ ಬಡ್ಡಿಗೆ ಸಾಲ ನೀಡಿ ಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಕೆಲ ಲೇವಾದೇವಿಗಾರರ ಪರ ಕೆಲ ಪೊಲೀಸರು ನಿಂತಿರುವ ಬಗ್ಗೆ ಮತ್ತು ಕೊಲೆ ಮತ್ತಿತರ ಪ್ರಕರಣಗಳನ್ನು ರಾಜಿ ಮಾಡಿಸುವ ಮೂಲಕ ಹಣ ಮಾಡುವ ದಂಧೆಯಲ್ಲಿ ಮುಳುಗಿರುವ ದಳ್ಳಾಳಿಗಳ ಬಗ್ಗೆಯೂ ಸದ್ಯದಲ್ಲೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು. ನೀಡಿದ್ದಾರೆ.
ಮೂಗರ್ಜಿ ಮೂಲಕ ಗಮನಕ್ಕೆ: ವಿನಾಕಾರಣ ಸುಳ್ಳು ಪ್ರಕರಣಗಳನ್ನು ದಾಖಲು ಮಾಡುವುದು ಮತ್ತು ಅಂತಹ  ಪ್ರಕರಣಗಳನ್ನು ದಾಖಲು ಮಾಡಿಕೊಳ್ಳುವ ಮತ್ತು ಮೂಗರ್ಜಿಯ ಆಧಾರದ ಮೇಲೆ ಸಂಬಂಧಪಟ್ಟವರಿಂದ ಹಣ ವಸೂಲಿ ಮಾಡುವುದು ತಮ್ಮ ಗಮನಕ್ಕೆ ಬಂದಿದ್ದು, ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

'ಪತ್ರಿಕಾ ಮಾಧ್ಯಮ ಜವಾಬ್ದಾರಿ ದೊಡ್ಡದು'
ಹಾಸನ: ದಲಿತ ಸಾಹಿತ್ಯ ಪರಿಷತ್ ಮತ್ತು ಸಮತಾ ಸೈನಿಕ ದಳದ ಸಂಯುಕ್ತಾಶ್ರದಲ್ಲಿ ಭಾನುವಾರ ನವಿಲು ಕನ್ನಡ ಮಾಸ ಪತ್ರಿಕೆ ನಗರದ ಸ್ವಾಭಿಮಾನ ಭವನದಲ್ಲಿ ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್ ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು, ಇತ್ತೀಚೆಗೆ ಪತ್ರಿಕೆಗಳು ತಮ್ಮ ಮಹತ್ವ ಕಳೆದುಕೊಳ್ಳುತ್ತಿದ್ದು,  ಕೇವಲ ಬೆರಳೆಣಿಕೆಯಷ್ಟು ಪತ್ರಿಕೆಗಳು ಮಾತ್ರ ಮಹತ್ವ ಉಳಿಸಿಕೊಂಡಿವೆ. ದೇಶದಲ್ಲಿನ ಅಂಕು-ಡೊಂಕುಗಳನ್ನು ತಿದ್ದುವ ಕಾರ್ಯ ಆಗಬೇಕಿದೆ ಎಂದು ಹೇಳಿದರು.ಅನೇಕ ಪತ್ರಿಕೆಗಳು ಹೆಚ್ಚು ಹೆಚ್ಚಾಗಿ ಹುಟ್ಟಿಕೊಳ್ಳುತ್ತವೆ. ಆದರೆ ಕೆಲವೇ ಪತ್ರಿಕೆಗಳು ಮಾತ್ರ ತನ್ನ ಮಹತ್ವವನ್ನು ಕಾಯ್ದುಕೊಂಡು ಮುನ್ನಡೆಯುತ್ತವೆ. ಎಂದರು.       ಸಾಹಿತಿಗಳಾದ ಭಾನು ಮುಷ್ತಾಕ್, ಜ.ಹೋ.ನಾರಾಯಣಸ್ವಾಮಿ, ನವಿಲು ಕನ್ನಡ ಮಾಸ ಪತ್ರಿಕೆ ಸಂಪಾದಕ ವಿ.ಆರ್. ಕಾರ್ಪೆಂಟರ್, ಜಿಲ್ಲಾ ದಲಿತ ಸಾಹಿತ್ಯ ಅಧ್ಯಕ್ಷ ನಾಗರಾಜ್ ಹೆತ್ತೂರ್, ಜಿಲ್ಲಾ ಸಮತಾ ಸೈನಿಕ ದಳ ಅಧ್ಯಕ್ಷ ಆರ್.ಪಿ. ಸತೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.