'ಹಸಿವು ನೀಗಿಸಲು ಆಹಾರ ಕಾಯ್ದೆ ಸಹಕಾರಿ'
ಹಾಸನ: ಪ್ರತಿಯೊಬ್ಬ ವ್ಯಕ್ತಿಯು ಜೀವಿಸಲು ಆಹಾರ ಅತ್ಯವಶ್ಯಕವಾಗಿದ್ದು, ಇದಕ್ಕಾಗಿ ಸರ್ಕಾರವು ಆಹಾರ ಮಸೂದೆ ಜಾರಿಗೆ ತಂದಿದ್ದು, ಬಡವರ ಹಸಿವು ನೀಗಿಸಲು ಇದು ಸಹಕಾರಿಯಾಗಿದೆ ಎಂದು ತಾಲೂಕಿನ ಅಟ್ಟಾವರ ಗ್ರಾಪಂ ಅಧ್ಯಕ್ಷ ಕೀರ್ತಿಕುಮಾರ್ ಅಭಿಪ್ರಾಯಪಟ್ಟರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಶಿಶು ಅಭಿವೃದ್ಧಿ ಯೋಜನೆ, ಆಹಾರ ಇಲಾಖೆ, ವಾರ್ತಾ ಇಲಾಖೆ, ಸಿಎಂಎಸ್ಎಸ್ ಸೇವಾ ಸಂಸ್ಥೆ ಆಶ್ರಯದಲ್ಲಿ ಇತ್ತೀಚೆಗೆ ತಾಲೂಕಿನ ಅಟ್ಟಾವರ ಗ್ರಾಮ ಪಂಚಾಯ್ತಿಯ ರಾಜೀವ್ಗಾಂಧಿ ಸೇವಾ ಕೇಂದ್ರದ ಆವರಣದಲ್ಲಿ ಏರ್ಪಡಿಸಿದ್ದ ಭಾರತ ನಿರ್ಮಾಣ- ವಿವಿಧ ಯೋಜನೆಗಳ ಕುರಿತ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆರ್ಥಿಕ ಸಾಕ್ಷರತೆ ಸಲಹೆಗಾರ ಕೆ.ಎಸ್.ಬಸವರಾಜು, ನೇರ ನಗದು ವರ್ಗಾವಣೆ ಕುರಿತು ಮಾಹಿತಿ ನೀಡಿ, ಹಾಗೂ ಪ್ರತಿಯೊಬ್ಬರು ಬ್ಯಾಂಕ್ ಖಾತೆ ತೆರೆದು ಆಧಾರ್ ಕಾರ್ಡ್ ಸಂಖ್ಯೆಯನ್ನು ಸಂಬಂಧಿಸಿದ ಬ್ಯಾಂಕುಗಳಿಗೆ ನೀಡುವುದರ ಮೂಲಕ ಸರ್ಕಾರದಿಂದ ದೊರೆಯುವ ಸೌಲಭ್ಯ ಪಡೆಯಬಹುದು ಎಂದರು.
ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್ ಕಾರ್ಯಕ್ರಮ ಉದ್ದೇಶ ಕುರಿತು ಮಾತನಾಡಿದರು. ಪಿಡಿಒ ಚಂದ್ರೇಗೌಡ, ಗ್ರಾಪಂ ಸದಸ್ಯೆ ಗೌರಮ್ಮನಾಗರಾಜು ಮತ್ತಿತರರು ಉಪಸ್ಥಿತರಿದ್ದರು. ಶೃತಿ ಸ್ವಾಗತಿಸಿದರು. ರಂಗಲಕ್ಷ್ಮಿ ನಿರೂಪಿಸಿದರು. ಮಂಜುಳಾ ವಂದಿಸಿದರು. ಇದೇ ವೇಳೆ ಮಹಿಳೆಯರಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು.
'ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕುಂಠಿತ'
ಸಕಲೇಶಪುರ: ತಾಲೂಕಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸಕಲೇಶಪುರ ವಿಧಾನಸಭಾ ಕ್ಷೇತ್ರ ಸಮಸ್ಯೆಗಳ ಅಗರವಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಿ.ಸಿ ಸಣ್ಣಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ರಸ್ತೆ, ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆಗಳು ತಲೆದೋರಿದ್ದು, ಈ ಬಗ್ಗೆ ಪ್ರತಿಭಟನೆ ನಡೆದರೂ, ಸ್ಥಳೀಯ ಜನಪ್ರತಿನಿಧಿಗಳು ನಿರ್ಲಿಪ್ತ ಭಾವನೆ ಹೊಂದಿವುದರಿಂದ ಸಮಸ್ಯೆಯಾಗಿದೆ ಎಂದರು. 10 ವರ್ಷಗಳಿಂದ ಸ್ಥಳೀಯ ಪೌರ ಕಾರ್ಮಿಕರು ಮನೆಗಳನ್ನು ನಿರ್ಮಿಸಿಕೊಡುವಂತೆ ಒತ್ತಾಯ ಮಾಡುತ್ತಿದ್ದರೂ ಯಾವುದೇ ಪರಿಹಾರ ಕಾಣದಾಗಿದೆ. ಪೌರಕಾರ್ಮಿಕರು ಹಮ್ಮಿಕೊಳ್ಳಲಿರುವ ಪ್ರತಿಭಟನೆಗೆ ಕಾಂಗ್ರೆಸ ಬೆಂಬಲ ನೀಡಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

