'ಸುಸೂತ್ರ ಆಡಳಿತಕ್ಕೆ ಪೌರಕಾರ್ಮಿಕರ ಸೇವೆ ಮುಖ್ಯ'
ಕ.ಪ್ರ. ವಾರ್ತೆ ಅರಸೀಕೆರೆ ಸೆ. 24
ಪಟ್ಟಣದ ಪರಿಸರ ನೈರ್ಮಲ್ಯ ಕಾಪಾಡುವ ಜೊತೆಗೆ ಪುರಸಭೆ ಆಡಳಿತವನ್ನು ಸುಸೂತ್ರವಾಗಿ ನಡೆಸಲು ಇಲ್ಲಿನ ಪೌರ ಕಾರ್ಮಿಕರ ಕರ್ತವ್ಯ ಅತ್ಯಂತ ಮುಖ್ಯವಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ಪುರಸಭೆ ಸಭಾಂಗಣದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುರಸಭೆ ಆಡಳಿತವು ಸಾರ್ವಜನಿಕರು ನಿರೀಕ್ಷಿತ ಮಟ್ಟದಲ್ಲಿ ಮೂಲಭೂತ ಸೌಲಭ್ಯಗಳನ್ನು ಸಕಾಲದಲ್ಲಿ ಪೂರೈಸಲು ಪೌರ ಕಾರ್ಮಿಕರ ಸಹಕಾರ ಅತ್ಯಂತ ಮುಖ್ಯವಾಗಿದೆ.
ಆದ್ದರಿಂದ ಪಟ್ಟಣದ ಎಲ್ಲಾ ವಾರ್ಡ್ಗಳ ಚುನಾಯಿತ ಪ್ರತಿನಿಧಿಗಳು ಪೌರ ಕಾರ್ಮಿಕರೊಂದಿಗೆ ಪರಸ್ಪರ ಸ್ನೇಹ ಸೌಹಾರ್ದದಿಂದ ಜೊತೆಗೂಡಿ ತಮ್ಮ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಇಲ್ಲದ ರೀತಿಯಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಬಗೆಹರಿಸಲು ಸುಲಭ ಸಾಧ್ಯವಾಗುತ್ತದೆ.
ಇದರಿಂದಾಗಿ ಪುರಸಭೆಯ ಆಡಳಿತವನ್ನು ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಸುಸೂತ್ರವಾಗಿ ನಡೆಸಲು ಪ್ರೇರಕ ಶಕ್ತಿಯು ದೊರತಂತಾಗುತ್ತದೆ ಎಂದು ಹೇಳಿದರು.
ಈಗಾಗಲೇ ಪಟ್ಟಣದ ಜನಸಂಖ್ಯೆ 57 ಸಾವಿರ ಮೀರಿರುವ ಕಾರಣ ಈ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರುವ ಸಾಧ್ಯತೆಗಳಿವೆ. ಅದರೆ ಅವಶ್ಯಕ ಪ್ರಮಾಣದಲ್ಲಿ ಸಿಬ್ಬಂದಿಗಳು ಇಲ್ಲದೆ ಹೊರ ಗುತ್ತಿಗೆ ಆಧಾರದ ಮೇಲೆ 53 ಸಿಬ್ಬಂದಿ ಹಂಗಾಮಿ ನೌಕರರಾಗಿ ಕೆಲಸ ಮಾಡುತ್ತಿದ್ದು, ಅಗತ್ಯ ಸಿಬ್ಬಂದಿ ಕೊರತೆ ಕಾರಣ ಕೆಲವು ಭಾಗದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉಂಟಾಗುತ್ತಿದ್ದು, ಸಕಾಲದಲ್ಲಿ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಕೇಂದ್ರ ಜಾರಿಗೆ ತರಲು ಉದ್ದೇಶಿಸಿದ್ದ ವಸತಿ ನಿರ್ಮಾಣ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲದ ಕಾರಣ ರಾಜ್ಯ ಸರ್ಕಾರ ಈ ಯೋಜನೆ ಬಗ್ಗೆ ಹೆಚ್ಚಿನ ಆಸಕ್ತಿ ನೌಕರರ ಸಂಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದರು.
ಪುರಸಭೆ ಅಧ್ಯಕ್ಷ ಮೋಹನ್ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಪೌರ ಕಾರ್ಮಿಕರು ಪ್ರತಿನಿತ್ಯ ಕಲುಷಿತ ವಾತವರಣದಲ್ಲಿ ಕೆಲಸ ಮಾಡುವ ಕಾರಣ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಬೇಕಾಗಿದೆ. ತಾವು ಕರ್ತವ್ಯ ನಿರ್ವಹಿಸುವ ವೇಳೆಯಲ್ಲಿ ನೀಡಿರುವ ರಕ್ಷಣಾತ್ಮಕ ಪರಿಕರಗಳನ್ನು ಧರಿಸಿಕೊಂಡು ಕೆಲಸ ಮಾಡಿದ್ದಲ್ಲಿ ಅನೇಕ ರೋಗಗಳಿಂದ ತಾವುಗಳು ದೂರವಿರಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಮುಖ್ಯಾಧಿಕಾರಿ ಸತ್ಯನಾರಾಯಣ ಮಾತನಾಡಿ ಪೌರ ಕಾರ್ಮಿಕರು ತಮ್ಮಲ್ಲಿನ ದುಶ್ಚಟಗಳಿಂದ ದೂರವಾಗಿ ತಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸಲು ಇಂದಿನ ಶುಭ ಸಂದರ್ಭದಲ್ಲಿ ಕಂಕಣ ಬದ್ದರಾಗಬೇಕೆಂದರು.
ಹಿರಿಯ ಪೌರ ಕಾರ್ಮಿಕ ರಂಗಸ್ವಾಮಿ ಕಾರ್ಮಿಕರ ಹತ್ತು ಹಲವು ಸಮಸ್ಯೆಗಳನ್ನು ಪರಿಹರಿಸಲು ಮನವಿ ಮಾಡಿದರು. ಉಪಾಧ್ಯಕ್ಷ ಭಾಗ್ಯಲತಾ, ಸದಸ್ಯೆ ನಸೀಮಾಭಾನು, ಅನ್ನಪೂರ್ಣ ಮಾತನಾಡಿದರು.
ಪೌರ ಕಾರ್ಮಿಕ ಕರಿಯಪ್ಪ ಮತ್ತು ಗೌರಮ್ಮರನ್ನು ಸನ್ಮಾನಿಸಲಾಯಿತು. ಪುರಸಭಾ ಆರೋಗ್ಯ ನಿರೀಕ್ಷಕ ರಮೇಶ್, ಕೃಷ್ಣಮೂರ್ತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

