ಹಾಸನ

ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ, ನಾಲ್ವರ ಬಂಧನ

Published On :

ಬೇಲೂರು: ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿದ ಅಬಕಾರಿ ಪೊಲೀಸರು ಈ ಸಂಬಂಧ 4 ಮಂದಿಯನ್ನು ಬಂಧಿಸಿದ್ದಾರೆ. ತಾಲೂಕಿನ ಹಲ್ಮಿಡಿ ಗ್ರಾಮದ ಜಯಮ್ಮ ಕೋಂ ಶಿವಣ್ಣ, ವೀರಭದ್ರಯ್ಯ, ಪರಮೇಶ್, ರುದ್ರೇಶ್ ಇವರು ಅಕ್ರಮವಾಗಿ ಗ್ರಾಮದಲ್ಲಿ ಕಳ್ಳಬಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಮಾಹಿತಿ ಕಲೆ ಹಾಕಿ ಅಬಕಾರಿ ಪೊಲೀಸರು ದಾಳಿ ನಡೆಸಿದರು. ಬಂಧಿತ ಆರೋಪಿಗಳಿಂದ 10 ಲೀಟರ್ ಕಳ್ಳಬಟ್ಟಿ, 440 ಬೆಲ್ಲದ ಕೊಳೆ, ಕಳ್ಳಬಟ್ಟಿ ತಯಾರಿಕೆಗೆ ಬಳಸುತ್ತಿದ್ದ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಉಪ ಅಧೀಕ್ಷಕ ಸುನಿಲ್, ನಿರೀಕ್ಷಕ ಸಂತೋಷ್, ನೂರಜಹಾನ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು: ಜಿಪಂ ಸದಸ್ಯೆ ಕುಸುಮ
ಚನ್ನರಾಯಪಟ್ಟಣ: ತಾಲೂಕಿನಲ್ಲಿ ಪ್ರಥಮ ಬಾರಿಗೆ ಮಹಿಳೆಯರಿಗೆ ಕ್ಯಾನ್ಸರ್ ಉಚಿತ ತಪಾಸಣೆ ಏರ್ಪಡಿಸಿದ್ದು,  ಇದರಿಂದ ಗ್ರಾಮೀಣ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಕುಸುಮ ಬಾಲಕೃಷ್ಣ ತಿಳಿಸಿದರು.
ಅವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಾಮಿ ವಿವೇಕಾನಂದ ಯೂತ್‌ಮೂವ್‌ಮೆಂಟ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಎಂಜಿಎಲ್ ಸೇವಾ ಸಂಸ್ಥೆಯಿಂದ ಉಚಿತ ಕ್ಯಾನ್ಸರ್ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮಕ್ಕಳ ಶಿಕ್ಷಣ, ಆರೋಗ್ಯ, ನೈರ್ಮಲ್ಯದ ಬಗ್ಗೆ ಆಸಕ್ತಿವಹಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಜನರಿಗೆ ಸ್ಪಂದಿಸುವ ಕಾರ್ಯವಾಗಬೇಕು. ಶಾಸಕರ ಸಹಕಾರದಿಂದ ಎಲ್ಲಾ ಸೌಲಭ್ಯವನ್ನು ಸರ್ಕಾರಿ ಆಸ್ಪತ್ರೆಗೆ ನೀಡಲಾಗುತ್ತಿದ್ದು, ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ತಜ್ಞ ವೈದ್ಯರಾದ ಡಾ.ಜಗದೀಶ್, ಡಾ. ಪ್ರೇಮಲತಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎನ್. ಲೋಕೇಶ್, ಎಪಿಎಂಸಿ ಉಪಾಧ್ಯಕ್ಷ ಗೋವಿಂದರಾಜು, ರೈತಮುಖಂಡ ಅರಳಾಪುರಮಂಜೇಗೌಡ, ಆರೋಗ್ಯ ಹಿರಿಯ ಸಹಾಯಕ ಪ್ರಕಾಶ್, ಮಹೇಶ್ ಶ್ರೀನಿಧಿವೆಂಕಟೇಶ್ ಇದ್ದರು. ಸುಮಾರು 50ಕ್ಕೂ ಹೆಚ್ಚು ಮಹಿಳೆಯರಿಗೆ ತಪಾಸಣೆ ನಡೆಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.