ಜಾನುವಾರುಗಳ ಆರೋಗ್ಯ ತಪಾಸಣೆ ಶಿಬಿರ ನಾಳೆ
ಹೊಳೆನರಸೀಪುರ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಸೆ.27ರಂದು ತಾಲೂಕಿನ ಕಲ್ಲುಬ್ಯಾಡರಹಳ್ಳಿ ಗ್ರಾಮದಲ್ಲಿ ಜಾನುವಾರುಗಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಶು ವೈದ್ಯಕೀಯ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಡಾ.ಮುರಳಿ ತಿಳಿಸಿದ್ದಾರೆ. ಶಿಬಿರವನ್ನು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ-ನಿರ್ದೇಶಕ ಡಾ.ಪಿ.ಶ್ರೀನಿವಾಸ್ ಅವರು ಉದ್ಘಾಟಿಸುವರು.
ಅಧ್ಯಕ್ಷತೆ ಕೆರಗೋಡು ಗ್ರಾಪಂ ಅಧ್ಯಕ್ಷ ಮಲ್ಲೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲಯನ್ಸ್ ಅಧ್ಯಕ್ಷ ಎಚ್.ಆರ್.ಮುಕುಂದೇಗೌಡ, ಕಾರ್ಯದರ್ಶಿ ಹಾಗೂ ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞ ಡಾ.ಕೆ.ಶ್ರೀನಿವಾಸಮೂರ್ತಿ ಹಾಗೂ ಲಯನ್ಸ್ ಉಪಾಧ್ಯಕ್ಷ ಹಾಗೂ ವಕೀಲ ಆರ್.ಡಿ.ರವೀಶ್ ಉಪಸ್ಥಿತರಿರುವರು.
ಕಲ್ಲುಬ್ಯಾರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ತಮ್ಮ ಜಾನುವಾರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತಂದು ತಪಾಸಣೆ ಮಾಡಿಸಿ, ಶಿಭಿರದ ಲಾಭ ಪಡೆಯುವಂತೆ ಡಾ. ಮುರಳಿ ಕೋರಿದ್ದಾರೆ.
27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಹಾಸನ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಎವಿಕೆ ಮಹಿಳಾ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಸೆ.27 ರಂದು ಬೆಳಿಗ್ಗೆ 11ಕ್ಕೆ ಎವಿಕೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಾಗೂ ಕಾರ್ಯಾಗಾರ ಏರ್ಪಡಿಸಲಾಗಿದೆ.
ರಾಜ್ಯ ಲೋಕೋಪಯೋಗಿ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಪ್ರಧಾನಿ, ಸಂಸದ ಎಚ್.ಡಿ.ದೇವೇಗೌಡರು ಉಪಸ್ಥಿತರಿರುವರು. ಶಾಸಕ ಎಚ್.ಎಸ್.ಪ್ರಕಾಶ್ ಅಧ್ಯಕ್ಷತೆ ವಹಿಸುವರು.
ಶಾಸಕ ಎಚ್.ಡಿ.ರೇವಣ್ಣ, ಎಚ್.ಕೆ.ಕುಮಾರಸ್ವಾಮಿ, ಸಿ.ಎಸ್.ಬಾಲಕೃಷ್ಣ, ವೈ.ಎನ್.ರುದ್ರೇಶ್ಗೌಡ, ಎ.ಮಂಜು, ಕೆ.ಎಂ.ಶಿವಲಿಂಗೇಗೌಡ, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಮರಿತಿಬ್ಬೇಗೌಡ, ಜಿ.ಮಧುಸೂದನ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಡಿ.ಜಿ.ಅಂಬಿಕಾ ರಾಮಣ್ಣ, ನಗರಸಭೆ ಅಧ್ಯಕ್ಷೆ ಎಚ್.ಎಚ್. ಶ್ರೀವಿದ್ಯಾ, ಎವಿಕೆ ಪದವಿ ಕಾಲೇಜಿನ ಉಪಾಧ್ಯಕ್ಷ ಬಿ.ಆರ್.ಗುರುದೇವ್ ಭಾಗವಹಿಸುವರು.
ಮಲ ಹೊರುವ ಪದ್ಧತಿ: ಕ್ರಮಕ್ಕೆ ಡಿಸಿ ಸೂಚನೆ
ಹಾಸನ: ಮಾನವೀಯತೆಯಿಂದ ಮಲ ಹೊರುವ ಪದ್ಧತಿಯನ್ನು ಸರ್ಕಾರ ನಿಷೇಧಿಸಿದ್ದರೂ ಈ ಕಾರ್ಯದಲ್ಲಿ ತೊಡಗಿದ್ದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಅಸ್ತಿತ್ವದ ಕುರಿತು ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಇನ್ಸ್ಯಾನಿಟರಿ ಲೆಟ್ರೀನ್ಸ್ಗಳಿಗೆ ಶೌಚಗುಂಡಿ ನಿರ್ಮಾಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಿಂಗಳೊಳಗೆ ಈ ಕೆಲಸ ಪೂರ್ಣಗೊಳಿಸಬೇಕು. ಜತೆಗೆ ಪ್ರತಿಯೊಂದರ ಛಾಯಾಚಿತ್ರವನ್ನು ವರದಿಯೊಂದಿಗೆ ಲಗತ್ತಿಸುವಂತೆ ಆದೇಶಿಸಿದರು.
ಮುಖ್ಯ ಅಧಿಕಾರಿಗಳು ಕೊಳಚೆ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದರು. ಪುರಸಭೆಗಳಿಗೆ ಸಂಬಂಧಿಸಿದ ಟೆಂಡರ್ಗಳನ್ನು ಇ-ಟೆಂಡರ್ ಕರೆಯುವಂತೆ ಸೂಚಿಸಿ ಮರು ಟೆಂಡರ್ಗೆ ಅವಕಾಶವಿಲ್ಲ ಎಂದು ಹೇಳಿದರು.
29 ರಂದು ಕುರುಹಿನ ಶೆಟ್ಟಿ ಕೇಂದ್ರ ಸಂಘದ ಚುನಾವಣೆ
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ ಸೆ.25
ರಾಜ್ಯ ನೇಕಾರ ಕುರುಹಿನಶೆಟ್ಟಿ ಕೇಂದ್ರ ಸಂಘದ ಚುನಾವಣೆ ಸೆ.29 ರಂದು ಭಾನುವಾರ ಚುನಾವಣೆ ನಡೆಯಲಿದ್ದು ತಾಲೂಕು ಜನತೆ ತಮ್ಮನ್ನು ಬೆಂಬಲಿಸುವುದರ ಮೂಲಕ ಸಮಾಜದ ಸೇವೆಗೆ ಅನುಕೂಲ ಮಾಡಿಕೊಡಬೇಕೆಂದು ಎಂದು ಕೇಂದ್ರ ಸಂಘದ ಅಧ್ಯಕ್ಷ ಭೈರಪ್ಪ ಈಶ್ವರಪ್ಪ ತಿಳಿಸಿದರು.
ಪಟ್ಟಣದ ನೇಕಾರ ಕುರುಹಿನಶೆಟ್ಟಿ ಸಂಘದಲ್ಲಿ ಚುನಾವಣಾ ಪ್ರಚಾರದ ಸಭೆಯಲ್ಲಿ ಮಾತನಾಡಿ ತಾಲೂಕಿನ ಕುಲಬಾಂಧವರು ಹೆಚ್ಚು ಬುದ್ದಿವಂತರಾಗಿದ್ದು, ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ನಾವೆಲ್ಲರೂ ದುರ್ಬಲರಾಗಿದ್ದೇವೆ ಸಂಘಟಿತರಾಗಿ ವಿದ್ಯಾರ್ಜನೆ ಹೆಚ್ಚಿನ ಗಮನಹರಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಸಿಯ ಶ್ರೀನಿವಾಸ್, ಚಂದ್ರಶೇಖರ್, ಮೋಹನ್, ಆರ್. ಮಂಜುನಾಥ್, ತಾಲೂಕು ಅಧ್ಯಕ್ಷ ಪುಟ್ಟಣ್ಣ, ತಿಮ್ಮಶೆಟ್ಟಿ, ರಾಮಕೃಷ್ಣಶೆಟ್ಟಿ, ದಾಸಪ್ಪಶೆಟ್ಟಿ, ಕೃಷ್ಣಪ್ಪ, ಪ್ರಸಾದ್, ತೀರ್ಥ, ರವಿ, ವೇಣು, ಸುರೇಶ್, ಸುದೀಪ್, ನಾಗೇಶ್, ಲವಕುಶ, ಸಾವಿತ್ರಮ್ಮ, ನಾಗಮ್ಮ, ಹೇಮ, ಸರಸ್ವತಿ ಇದ್ದರು.ಬಾಗೂರು ಬಾಗೂರಿನ ನೇಕಾರ ಕುರುಹಿನಶೆಟ್ಟಿ ಭವನದಲ್ಲಿ ಸಂಘದ ಅಧ್ಯಕ್ಷ ಭುವನೇಂದ್ರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಕೇಂದ್ರ ಸಂಘದ ಚುನಾವಣೆ ಬಗ್ಗೆ ಅಭ್ಯರ್ಥಿಗಳಾದ ಬೈರಪ್ಪಈಶ್ವರಪ್ಪ ತಂಡದವರು ಮತಯಾಚಿಸಿದರು. ಕೃಷ್ಣಕುಮಾರ್, ಪ್ರಕಾಶ್, ಮಹೇಶ್, ವಸಂತಮ್ಮ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

