ಹಾಸನ

ಸಾಮಾಜಿಕ ಪಿಡುಗು: ಗ್ರಾಮೀಣರಿಗೆ ಅರ್ಥವಾಗುವಂತೆ ತಿಳಿ ಹೇಳಬೇಕು

Published On :

ಕ.ಪ್ರ.ವಾರ್ತೆ ಹಾಸನ ಸೆ. 25
ವಾರ್ತಾ ಇಲಾಖೆ ಮೈಸೂರು ವಿಭಾಗ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಸಂಗೀತ ಮತ್ತು ಬೀದಿ ನಾಟಕ ಕಲಾವಿದರ ತರಬೇತಿ ಕಾರ್ಯಾಗಾರ ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಿತು.
ತರಬೇತಿ ಕಾರ್ಯಾಗಾರವನ್ನು ವಾರ್ತಾ ಇಲಾಖೆ ಮೈಸೂರು ವಿಭಾಗದ ಉಪ ನಿರ್ದೇಶಕ ಎ.ಆರ್. ಪ್ರಕಾಶ್  ಉದ್ಘಾಟಿಸಿ, ಸರ್ಕಾರದ ನಾನಾ ಯೋಜನೆಗಳು, ಸಾಮಾಜಿಕ ಪಿಡುಗು ಮತ್ತಿತರ ವಿಷಯಗಳ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಅವರಿಗೆ ಅರ್ಥವಾಗುವ ರೀತಿಯಲ್ಲಿ ಗಮನ ಸೆಳೆದು ಹೇಳಬೇಕಾಗುತ್ತದೆ. ಅದಕ್ಕಾಗಿ ಆಯಾಯ ಜಿಲ್ಲೆಯ ಬೀದಿ ನಾಟಕ ಹಾಗೂ ಸಂಗೀತ ತಂಡಗಳನ್ನು ಆಯ್ಕೆಮಾಡಿಕೊಂಡು ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಲಾತಂಡಗಳು ಗ್ರಾಮೀಣ ಪ್ರದೇಶದಲ್ಲಿ ಆಯಾಯ ಭಾಗದ ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕು. ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿ ಕೊಳ್ಳುವಂತೆ ಪ್ರೇರೇಪಿಸಬೇಕು ಎಂದರು.
ಮೂರು ದಿನಗಳ ಕಾಲ ನಡೆದ ತರಬೇತಿ ಕಾರ್ಯಾಗಾರದಲ್ಲಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 60ಕ್ಕೂ ಅಧಿಕ ಮಂದಿ ಕಲಾವಿದರು ಪಾಲ್ಗೊಂಡಿದ್ದರು.
ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ, ಮೈತ್ರಿ ಸೇರಿದಂತೆ ಪ್ರಮುಖ ಯೋಜನೆಗಳ ಬಗ್ಗೆ ಮಾಹಿತಿ ಒಳಗೊಂಡ ಸಮೃದ್ಧಿ ಎಂಬ ಬೀದಿ ನಾಟಕದ ತಾಲೀಮು ಹಾಗೂ ಹತ್ತಾರು ಜಾಗೃತಿ ಗೀತೆಗಳನ್ನು ಕಲಿಸಲಾಯಿತು.
ಜಿಲ್ಲೆಯ ಹಿರಿಯ ಕಲಾವಿದ ಗ್ಯಾರಂಟಿ ರಾಮಣ್ಣ, ಗುಂಡೂರಾಜು, ಬಿ.ಟಿ.ಮಾನವ, ಕನ್ನಡ ಸಂಸ್ಕೃತಿ ಇಲಾಖೆಯ ಕುಮಾರ್ ಇತರರು ಬೀದಿ ನಾಟಕ ತರಬೇತಿಯಲ್ಲಿ ಮಾರ್ಗದರ್ಶನ ನೀಡಿದರು. ಜಿಲ್ಲಾ ವಾರ್ತಾಧಿಕಾರಿ ವಿನೋದಚಂದ್ರ ಶಿಬಿರದ ಮೇಲ್ವಿಚಾರಣೆ ವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಕಾರ್ಮಿಕ ಕಲ್ಯಾಣಾಧಿಕಾರಿ ಪ್ರಹ್ಲಾದ್ ಅವರು, ಬಾಲ ಕಾರ್ಮಿಕ ಪದ್ಧತಿ, ಅಸಂಘಟಿತ ಕಾರ್ಮಿಕರಿಗಿರುವ ಸೌಲಭ್ಯಗಳನ್ನು ಬೀದಿ ನಾಟಕದ ಮೂಲಕ ಪ್ರಚಾರ ಮಾಡುವಂತೆ ಕೋರಿದರು. ಅರಸೀಕೆರೆ ತಾಲೂಕು ಕಾರ್ಮಿಕ ಪರಿವೀಕ್ಷಕರು ಶಿಬಿರದ ನಿರ್ದೇಶಕ ಗ್ಯಾರಂಟಿ ರಾಮಣ್ಣ, ಗುಂಡೂರಾಜ್, ಕುಮಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.