ಹಾಸನ

ಕನ್ನಡ ಸಾಹಿತ್ಯ ಭವನದಲ್ಲಿ ಪಠ್ಯಾಧಾರಿತ ಕಾರ್ಯಕ್ರಮ ಉದ್ಘಾಟನೆ

Published On :

ಹಾಸನ: ಉಪನ್ಯಾಸಕರು ಮಕ್ಕಳನ್ನು ಗುಣವಂತರನ್ನಾಗಿ ಮಾಡಲು ಮುಂದಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ  ಎನ್. ರಾಜಮ್ಮ ಕರೆ ನೀಡಿದರು.
 ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ವೇದಿಕೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಏರ್ಪಡಿಸಿದ್ದ ಆರನೇ ವರ್ಷದ ಪಠ್ಯಾಧಾರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 ಎಲ್ಲರೂ ಉತ್ತಮ ಉಪನ್ಯಾಸಕರು ಆಗಲು ಸಾಧ್ಯವಿಲ್ಲ ಎಂದ ಅವರು, ಹೊಸ ಪಠ್ಯವನ್ನು ಅರ್ಥಮಾಡಿಕೊಂಡು ಮಾರ್ಗದರ್ಶನ ಪಡೆಯುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸುವಂತೆ ಕಿವಿಮಾತು ಹೇಳಿದರು.
 ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಲ್. ಜನಾರ್ದನ್ ಮಾತನಾಡಿ, ಪ್ರಸ್ತುತ ವಾತಾವರಣದಲ್ಲಿ ಉಪನ್ಯಾಸಕರು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಅವಶ್ಯಕತೆ ಕಂಡುಬರುತ್ತಿದ್ದು, ಆಯಾ ತಲೆಮಾರಿನ ತಕ್ಕಂತೆ ಅರ್ಥವಾಗುವ ರೀತಿಯಲ್ಲಿ ಶಿಕ್ಷಣ ನೀಡಲು ಮುಂದಾಗುವಂತೆ ಸಲಹೆ ನೀಡಿದರು.  ಇದೇ ಸಂದರ್ಭದಲ್ಲಿ ನಿವೃತ್ತ ಉಪನ್ಯಾಸಕ ಹಾಗೂ ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು. ವೇದಿಕೆ ಅಧ್ಯಕ್ಷ ಆರ್. ದೇವರಾಜೇಗೌಡ, ಸರ್ಕಾರಿ ಕಲಾ ಕಾಲೇಜ್ ಇತಿಹಾಸ ವಿಭಾಗದ ಮುಖ್ಯಸ್ಥ ಶಿವಣ್ಣಗೌಡ, ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಪ್ರಾಧ್ಯಪಕ ಪಿ.ಕೆ. ರಾಜಶೇಖರ್, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಚ್.ಎಸ್. ಸತ್ಯನಾರಾಯಣ್, ಉಪನ್ಯಾಸಕ ಮಹೇಶ್ ಹರವೇ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.