ಹಾಸನ

ಹಿರಿಯ ಪತ್ರಕರ್ತ ಶಿವಮೂರ್ತಪ್ಪ ನಿಧನ

Published On :

ಅರಸೀಕೆರೆ: ತಾಲೂಕಿನ ಹರಳಕಟ್ಟ ಗ್ರಾಮದ ಹಿರಿಯ ಪತ್ರಕರ್ತ ಎಚ್.ಜಿ.ಶಿವಮೂರ್ತಪ್ಪ(86)  ಶುಕ್ರವಾರ  ನಿಧನರಾದರು. ಪತ್ರಿಕಾ ರಂಗದಲ್ಲಿ ಬಹಳ ವರ್ಷಗಳಿಂದ ಸೇವೆ ಮಾಡುತ್ತಿದ್ದು ಕೆಲ ದಿನಗಳಿಂದ ಅವರು ಅನಾರೋಗ್ಯದಲ್ಲಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ವಿಧಿವಶರಾದರು. ಮೃತರಿಗೆ ನಾಲ್ವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಮಚಂದ್ರ, ಕಾರ್ಯದರ್ಶಿ ಶಾಂತಕುಮಾರ್, ಸಂಘದ ಮಾಜಿ ಅಧ್ಯಕ್ಷ  ಬಿ.ಎಸ್.ಸೇತುರಾಂ, ಎನ್.ಡಿ.ಪ್ರಸಾದ್, ಬಿ.ಪುರಂದರದಾಸ್, ಮಾಡಾಳು ಶಿವಲಿಂಗಪ್ಪ ಹಾಗೂ ಸದಸ್ಯರು, ಶಾಸಕ ಕೆ.ಎಂ.ಶಿವಲಿಂಗೇಗೌಡ, ಮಾಜಿ ಶಾಸಕರಾದ ಪ್ರಭುಕುಮಾರ್, ಎ.ಎಸ್.ಬಸವರಾಜ್, ಜಿ.ಎಸ್.ಪರಮೇಶ್ವರಪ್ಪ, ಪುರಸಭಾಧ್ಯಕ್ಷ ಮೋಹನ್‌ಕುಮಾರ್, ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.ಅಂತ್ಯಕ್ರಿಯೆ ಹರಳಕಟ್ಟದಲ್ಲಿ ಶನಿವಾರ ನಡೆಯಲಿದೆ ಎಂದು ಅವರ ಪುತ್ರ ಗಿರೀಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.