ಪ್ರೀತಿ ಎಂಬ ಅಸ್ತ್ರದಿಂದ ಮಹಿಳೆಯರ ಮಾರಾಟ
ಹಾಸನ: ಪ್ರೀತಿ ಎಂಬ ಅಸ್ತ್ರ ಬಳಸಿಕೊಂಡು ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಸಾಗಾಣಿಕೆ ಮತ್ತು ಮಾರಾಟ ಮಾಡುವ ಪ್ರಸಂಗಗಳು ಹೆಚ್ಚುತ್ತಿವೆ ಎಂದು ಸುವರ್ಣ ಲೇಡಿಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷೆ ಹಾಗೂ ವಕೀಲರಾದ ಎಂ.ಸುಮಾ ವಿಷಾದಿಸಿದರು.
ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನಲ್ಲಿ ಸಮಾಜಶಾಸ್ತ್ರ ವೇದಿಕೆಯಿಂದ ಏರ್ಪಡಿಸಿದ್ದ ಭಾರತದಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಸಾಗಾಣಿಕೆ ಕರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಸಮಾಜದಲ್ಲಿ ನೆಪ ಮಾತ್ರಕ್ಕೆ ಗೌರವ ಸ್ಥಾನ ನೀಡಿದ್ದರೂ ವಾಸ್ತವದಲ್ಲಿ ನಿಕೃಷ್ಟವಾಗಿ ಕಾಣಲಾಗುತ್ತಿದೆ. ಪ್ರೀತಿ ಎಂಬ ಅಸ್ತ್ರ ಬಳಸಿಕೊಂಡು ಹೆಣ್ಣು ಮಕ್ಕಳು ಮತ್ತು ಮಹಿಳೆಯರನ್ನು ಸಾಗಾಣಿಕೆ ಮಾಡಲಾಗುತ್ತಿದೆ. ಇದು ಕಾನೂನಿನ ಪ್ರಕಾರ ಶಿಕ್ಷಾರ್ಹವಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಇದರ ಸಂಖ್ಯೆ ಹೆಚ್ಚುತ್ತಿದೆ ಎಂದು ಅಭಿಪ್ರಾಯಪಟ್ಟರು.
ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಪ್ರೊ. ಡಿ.ಜಿ.ಕೃಷ್ಣೇಗೌಡ ಮಾತನಾಡಿ, ಹೆಣ್ಣು ಮಕ್ಕಳ ಮತ್ತು ಮಹಿಳಾ ಸಾಗಾಣಿಕೆ ಒಂದು ವಿಶ್ವವ್ಯಾಪಕ ಸಮಸ್ಯೆಯಾಗಿದ್ದು ಇದಕ್ಕೆ ಮೂಲಭೂತವಾಗಿ ಬಡತನ ಮತ್ತು ಭೌಗೋಳಿಕ ಅಂಶಗಳು ಕಾರಣವಾಗಿವೆ ಹಾಗೂ ಸಮಾಜದಲ್ಲಿ ಪ್ರತಿಯೊಬ್ಬರು ಪುರುಷಾರ್ಥಗಳನ್ನು ಸರಿಯಾದ ರೀತಿಯಲ್ಲಿ ಸಾಧಿಸಿದರೆ ಮಾತ್ರ ಈ ಸಮಸ್ಯೆ ನಿರ್ಮೂಲನೆಯಾಗುತ್ತದೆ ಎಂದರು. ಸರ್ಕಾರಿ ಕಲಾ ಕಾಲೇಜಿನ ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದ ಡಾ. ವಿ ಸುನಿತ ಮಾತನಾಡಿ, ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಂದ ಗೌರವಯುತವಾಗಿ ಬದುಕುವ ಹಕ್ಕನ್ನು ಕಿತ್ತುಕೊಂಡು ಬಲವಂತವಾಗಿ ಅವರನ್ನು ಈ ಸಾಗಾಣಿಕೆಯ ಮಾಯಾಜಾಲದಲ್ಲಿ ಸಿಲುಕಿಸಲಾಗುತ್ತಿದೆ ಎಂದು ಅಭಿಪ್ರಾಯ ಪಟ್ಟರು. ಪಡುವಲಹಿಪ್ಪೆಯ ಎಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಡಿ. ನಾರಾಯಣ ಮಾತನಾಡಿ, ಮೌಲ್ಯ ಮತ್ತು ಬೆಲೆಯಿಲ್ಲದ ವಸ್ತುಗಳಾಗಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತದೆ ಹಾಗೂ ಜಾಹಿರಾತು ಮತ್ತು ಚಲಚಿತ್ರಗಳು ಹೆಣ್ಣುಮಕ್ಕಳ ಮತ್ತು ಮಹಿಳೆಯರ ಬಗೆಗಿನ ಕ್ರೌರ್ಯಗಳನ್ನು ವರ್ಣರಂಜಿತವಾಗಿ ಚಿತ್ರಿಸುತ್ತಿರುವುದು ಮಹಿಳೆಯರ ಶೋಷಣೆ ಇನ್ನಷ್ಟು ಹೆಚ್ಚಾಗಲು ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು. 2 ಗಂಟೆಗಳ ಸಂವಾದದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಶಾಂತ್ ಎಸ್. ಭಟ್ ಮಾತನಾಡಿ, ಒತ್ತಾಯ ಪೂರ್ವಕವಾಗಿ ಮತ್ತು ಸ್ವ ಆಯ್ಕೆಯ ಮೇರೆಗೆ ಸಾಗಾಣಿಕೆಯಲ್ಲಿ ಭಾರತದ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಜಾಗೃತಿಯುಂಟಾದಾಗ ಮಾತ್ರ ಈ ಶೋಷಣೆ ತಪ್ಪಲು ಸಾಧ್ಯವೆಂದರು.
ಸಮಾಜಶಾಸ್ತ್ರ ಉಪನ್ಯಾಸಕಿ ಸಿ.ಎನ್. ಕಾವ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಶಾಸ್ತ್ರದ ವಿದ್ಯಾರ್ಥಿ ಚೇತನಕುಮಾರ್ ಪ್ರಾರ್ಥಿಸಿದರು. ಚಂದ್ರಶೇಖರ್ ವಂದಿಸಿದರು, ಅನಿತಾ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

