ಹಾಸನ

ಗ್ರಾಮ ಲೆಕ್ಕಿಗರ ಆಯ್ಕೆ ಪಟ್ಟಿ ಪ್ರಕಟ

Published On :

ಹಾಸನ: ಜಿಲ್ಲೆಯಲ್ಲಿ ಖಾಲಿ ಇರುವ 46 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ ಪಟ್ಟಿ ಪ್ರಕಟಿಸಲಾಗಿದೆ. ಹಾಜರಾದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಿ, ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿ ಆಧಾರದಲ್ಲಿ 46 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ ಪ್ರಕಟಿಸಲಾಗಿದೆ. ಇದಕ್ಕೆ ಪೂರಕವಾಗಿ ಶೇ.10 ರಷ್ಟು ತಾತ್ಕಾಲಿಕ ಕಾಯ್ದಿರಿಸಿರುವ ಪಟ್ಟಿಯನ್ನು (Provisional Waiting list) ಸಹ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ತಾತ್ಕಾಲಿಕ ಕಾಯ್ದಿರಿಸಲಾದ ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಈ ಪ್ರಕಟಣೆ ದಿನಾಂಕದಿಂದ ಹತ್ತು  ದಿನ ಅಂದರೆ ಅ.9 ದಿನದವರೆಗೆ ಕಾಲಾವಕಾಶ ನೀಡಲಾಗಿದೆ.
  ಈ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹಾಗೂ ತಾತ್ಕಾಲಿಕ ಕಾಯ್ದಿರಿಸಲಾದ ಅಭ್ಯರ್ಥಿಗಳ ಪಟ್ಟಿಯನ್ನು ಕಚೇರಿ ವೆಬ್‌ಸೈಟ್ httpzzzhassan.nic.in ರಲ್ಲಿ ನೋಡಬಹುದು ಎಂದು ಗ್ರಾಮ ಲೆಕ್ಕಿಗರ ನೇಮಕಾತಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.

'ಮಾತೃಭಾಷೆಯೊಂದಿಗೆ ರಾಷ್ಟ್ರಭಾಷೆ ಕಲಿತರೆ ಬೆಳವಣಿಗೆಗೆ ಸಹಕಾರಿ'
ಹಾಸನ:
ಮಾತೃ ಭಾಷೆ ಜೊತೆಗೆ ರಾಷ್ಟ್ರ ಭಾಷೆಯನ್ನು ಕಲಿಯುವುದರಿಂದ ನಮ್ಮ ಭಾಷೆಯ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಕೆ.ದಿನೇಶ್ ಹೇಳಿದರು.
 ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಅಂಚೆ ಇಲಾಖೆ, ಭಾರತಿಯ ಸ್ಟೇಟ್ ಬ್ಯಾಂಕ್ ಹಾಗೂ ಸರ್ಕಾರಿ ಬಾಲಕರ ಪ್ರೌಢಶಾಲೆ ಆಶ್ರಯದಲ್ಲಿ ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆ ಶತಮಾನೋತ್ಸವ ಭವನದಲ್ಲಿ ನಡೆದ ರಾಷ್ಟ್ರ ಭಾಷಾ ಹಿಂದಿ ಮಹತ್ವ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದಿ ನಮ್ಮ ರಾಷ್ಟ್ರಭಾಷೆಯಾಗಿದ್ದು, ಇದನ್ನು ಕಲಿಯುವುದರಿಂದ ಕೇಂದ್ರ ಸರ್ಕಾರದ ಹಾಗೂ ಅಧೀನ ಸಂಸ್ಥೆಗಳ ಕಾರ್ಯಾಲಯಗಳಲ್ಲಿ ವಿಪುಲ ಅವಕಾಶಗಳು ಇರುವುದರಿಂದ ಮಾತೃ ಭಾಷೆಯ ಜೊತೆಗೆ ಹಿಂದಿಯನ್ನು ಶಾಲಾ ಕಾಲೇಜುಗಳಲ್ಲಿ ಅಭ್ಯಾಸ ಮಾಡಿಕೊಂಡಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
 ಪ್ರಧಾನ ಅಂಚೆ ಕಚೇರಿಯ ಸಾರ್ವಜನಿಕ ಸಂಪರ್ಕ ನಿರೀಕ್ಷಕ ನಾಗೇಶ್ ಮಾತನಾಡಿ, ಶಾಲಾ ಕಾಲೇಜು ಅವಧಿಯಲ್ಲಿಯೇ ಹಿಂದಿಯ ಮಹತ್ವವನ್ನು ಅರಿತುಕೊಳ್ಳಲು ಪ್ರಯತ್ನಿಸಬೇಕು ಎಂದರು. ಬಾಲಕರ ಸರ್ಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ  ಟಿ.ಎಂ.ಪಾರ್ಥ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಡಿ.ವಿ.ರಂಗಸ್ವಾಮಿ, ಬಿ.ಎಸ್.ದೇಸಾಯಿ ಮಾತನಾಡಿದರು. ಡಿ.ಮಂಜುಳಾ ಸ್ವಾಗತಿಸಿದರು. ಬಿ.ವಿ ಸುಕನ್ಯಾ  ನಿರೂಪಿಸಿದರು. ಈ. ಮಂಜುಳಾ ವಂದಿಸಿದರು. ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.