ಸಾರ್ವಜನಿಕ ಸ್ಥಳದಲ್ಲಿ ಜೂಜಾಟ; ಒಬ್ಬ ಬಂಧನ
ಬೇಲೂರು:.ಪಟ್ಟಣದ ಪುರಿಬಟ್ಟಿ ಬೀದಿ ಸಾರ್ವಜನಿಕ ಸ್ಥಳದಲ್ಲಿ ಮೋಸದಿಂದ ಮಟ್ಕಾ ಆಡುತ್ತಿದ್ದ ಆರೋಪದ ಮೇಲೆ ಅಬ್ದುಲ್ಖಾನ್ (38) ಎಂಬಾತನನ್ನು ಪೊಲೀಸರು ಬಂಧಿಸಿ, ಆತನಿಂದ 600 ರು.ನಗದು ವಶಪಡಿಸಿಕೊಂಡು, ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಯುವಕ ನಾಪತ್ತೆ
ಚನ್ನರಾಯಪಟ್ಟಣ: ತಾ. ನುಗ್ಗೇಹಳ್ಳಿ ಹೋಬಳಿ, ಅಕ್ಕನಹಳ್ಳಿ ಕ್ರಾಸ್ ನಿವಾಸಿ ಕಾಂತರಾಜು ರವರ ಪುತ್ರ ಆಕರ್ಶ್ (18) ಮನೆಯಿಂದ ಕಾಲೇಜಿಗೆ ಹೋಗುವುದಾಗಿ ಹೋದವನು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾನೆ. ಈ ಬಗ್ಗೆ ತಂದೆ ಕಾಂತರಾಜು ನುಗ್ಗೇಹಳ್ಳಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಕಾಲೇಜು ಯುವತಿ ನಾಪತ್ತೆ
ಚನ್ನರಾಯಪಟ್ಟಣ: ತಾ. ಶ್ರವಣಬೆಳಗೊಳ ಹೋಬಳಿ, ಬರಾಳು ಗ್ರಾಮದ ರವಿ ರವರ ಪುತ್ರಿ ತುಂಗಾ(18) ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಹೋದವಳು ವಾಪಸ್ ಬಾರದೆ ಕಾಣೆಯಾಗಿದ್ದಾಳೆ. ತಂದೆ ರವಿ ಶ್ರವಣಬೆಳಗೊಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
30 ರಿಂದ ಕ್ರಿಕೆಟ್ ತರಬೇತಿ
ಹಾಸನ: ರಾಜ್ಯ ಕ್ರಿಕೆಟ್ ಸಂಸ್ಥೆ ಬೆಂಗಳೂರು ಹಾಗೂ ಹಾಸನ ರಾಯಲ್ ಚಾಲೆಂಜ್ ಕ್ರಿಕೆಟ್ ಅಕಾಡೆಮಿ ವತಿಯಿಂದ ಸೆ.30 ರಿಂದ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಮೈದಾನದಲ್ಲಿ 16 ವರ್ಷದೊಳಗಿನ ಮತ್ತು 19 ವರ್ಷದೊಳಗಿನ ಕ್ರಿಕೆಟ್ ಆಟಗಾರರಿಗೆ ತರಬೇತಿ ಶಿಬಿರ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಚಾಲಕ ಡಿ.ಅಶೋಕ್ಕುಮಾರ್ ತಿಳಿಸಿದ್ದಾರೆ. ಮಾಹಿತಿಗೆ ದೂ.9448653746 ಸಂಪರ್ಕಿಸಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

