'ಗಡಿಯಲ್ಲಿ ಅತಿಕ್ರಮಣ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲ: ಪರ್ವತಯ್ಯ
ಕ.ಪ್ರ. ವಾರ್ತೆ,ಬೇಲೂರು, ಸೆ. 29
ಅಲ್ಪಸಂಖ್ಯಾಯಿತರ ಓಟು ಪಡೆಯುವ ಹುನ್ನಾರದಿಂದ ಕಾಂಗ್ರೆಸ್ ಸರ್ಕಾರ ನಮ್ಮ ಗಡಿಯಲ್ಲಿ ಪಾಕ್ ಉಗ್ರರು ಅತಿಕ್ರಮಣ ಪ್ರವೇಶ ಮಾಡಿದರೂ ತೀರುಗೇಟು ನೀಡದೆ ಜಾಣ ಮೌನ ವಹಿಸಿದೆ ಎಂದು ಹಾಸನ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಪರ್ವತಯ್ಯ ಕಿಡಿಕಾರಿದರು.
ತಾಲೂಕಿನ ಹೆಬ್ಬಾಳು ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಶ್ಮೀರದಲ್ಲಿ ನಿತ್ಯವೂ ಪಾಕ್ ಕಿತಾಪತಿ ಮಾಡುತ್ತಾ ಬಂದರೂ, ಕೇಂದ್ರ ಕಾಂಗ್ರೆಸ್ ಸರ್ಕಾರ ಸೈನಿಕರ ಬೆಂಬಲಕ್ಕೆ ನಿಲ್ಲದೆ ಸುಮ್ಮನಿದೆ ಎಂದ ಅವರು ಕಳೆದ 60 ವರ್ಷದಿಂದ ದೇಶ ಆಳಿದ ಕಾಂಗ್ರೆಸ್ ದಲಿತರನ್ನು ತಮ್ಮ ಓಟು ಬ್ಯಾಂಕ್ ಮಾಡಿಕೊಂಡು ಶೋಷಣೆ ಮಾಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರೇಣುಕುಮಾರ್ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆ ರಾಷ್ಟ್ರೀಯತೆಯ ಚುನಾವಣೆ ಎಂದ ಅವರು ದೇಶದ ಯುವಕರು ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಹಂಬಲ
ಇಟ್ಟುಕೊಂಡಿದ್ದಾರೆ ಎಂದರು.
ಜಿಲ್ಲಾ ಕಾರ್ಯದರ್ಶಿ ಅಡಗೂರು ಬಸವರಾಜು ಮಾತನಾಡಿದರು. ತಾಲೂಕು ಬಿಜೆಪಿ ಅಧ್ಯಕ್ಷ ಆನಂದ್, ಕಾರ್ಯದರ್ಶಿ ಪೂರ್ಣೇಶ್, ಆಶೋಕ್, ಜಯಲಿಂಗಪ್ಪ, ನೇ.ಚಂದ್ರಣ್ಣ, ತಾಪಂ ಸದಸ್ಯ ಸೋಮಣ್ಣ, ಶೇಖರಯ್ಯ, ಕೋಟೆಶ್ರೀನಿವಾಸ್, ಗ್ರಾಪಂ ಸದಸ್ಯ ಗೋಪಾಲ್, ಬಸವೇಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

