ಹಾಸನ

'ಗ್ರಾಮೀಣ ಸಂಸ್ಕೃತಿ ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಯುವಜನತೆ ಮೇಲಿದೆ'

Published On :

ಹಾಸನ: ಎನ್‌ಎಸ್‌ಎಸ್ ವಿದ್ಯಾರ್ಥಿಗಳು ರಾಷ್ಟ್ರ ಸೇವೆಯ ಜೊತೆಗೆ ದೇಶದ ಅಭಿವೃದ್ಧಿ ಬಗ್ಗೆ ಚಿಂತಿಸುವ ಗುಣ ಮೈಗೂಡಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಸಂಯೋಜಕ ಪ್ರೊ. ಎಂ. ರುದ್ರಯ್ಯ ಹೇಳಿದರು.
 ಹೊಳೆನರಸೀಪುರ ತಾಲೂಕಿನ ತೆರಣ್ಯ ಗ್ರಾಮದಲ್ಲಿ ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಎನ್‌ಎಸ್‌ಎಸ್ ಶಿಬಿರದ ಸಮಾರೋಪದಲ್ಲಿ ಮಾತನಾಡಿದ ಅವರು,  ಗಾಂಧಿಜಿ ಅವರ ಸರಳ ಮತ್ತು ಆದರ್ಶ ಗುಣಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಬೇಕು. ಯುವಪೀಳಿಗೆ ನಮ್ಮ ಗ್ರಾಮೀಣ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾದ ಅವಶ್ಯಕತೆಯಿದೆ ಎಂದು ತಿಳಿಸಿದರು.
 ನಿವೃತ್ತ ಉಪನ್ಯಾಸಕ ಶಿವರಾಜು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು. ಉತ್ತಮ ಸೇವೆ ಸಲ್ಲಿಸಿದ ಶಿಬಿರಾರ್ಥಿಗಳಿಗೆ ಪರ್ಯಾಯ ಪಾರಿತೋಷಕ ನೀಡಲಾಯಿತು. ಮೊದಲ ಸ್ಥಾನವನ್ನು ಹಾಸನ ಎನ್.ಡಿ.ಆರ್.ಕೆ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡರು ಹಾಗೂ ದ್ವಿತೀಯ ಸ್ಥಾನವನ್ನು ಚನ್ನರಾಯಪಟ್ಟಣ ತಾ. ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡರು. ಪ್ರಾಂಶುಪಾಲ ಪ್ರೊ. ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಎಸ್ ಅಧಿಕಾರಿ ಪ್ರೊ. ಸಿ.ಎಲ್. ಶಿವಕುಮಾರ್, ಪ್ರೊ. ಎಚ್.ಎಸ್. ನಿಂಗಪ್ಪ, ಪ್ರೊ. ಮಧುಸೂದನ್, ಸುರೇಶ್, ನಂಜುಂಡ, ಹಿರಿಯಣ್ಣ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.