ಯೋಜನೆ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಫಲ
ಕ.ಪ್ರ.ವಾರ್ತೆ, ಹೊಳೆನರಸೀಪುರ, ಸೆ. 29
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ನಾಲ್ಕು ತಿಂಗಳು ಕಳೆದರೂ ಸರ್ಕಾರಿ ಇಲಾಖೆ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕಾಂಗ್ರೆಸ್ ಮುಖಂಡ ಎಸ್.ಪುಟ್ಟಸ್ವಾಮಿ ಆರೋಪಿಸಿದರು.
ಪಟ್ಟಣದ ಕನಕ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿದ್ದಂತೆ ಘೋಷಣೆ ಮಾಡಿದ ಅನ್ನಭಾಗ್ಯ ಮತ್ತು ಕ್ಷೀರಭಾಗ್ಯ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪದೆ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದರು.
ಎಂದು ಆರೋಪಿಸಿದರು.
ಇದಕ್ಕೆ ಜಿಲ್ಲಾಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ. ಆದ್ದರಿಂದ ಜಿಲ್ಲಾಧಿಕಾರಿ ವಿತರಣೆ ಮಾಡುವ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಅನ್ನಭಾಗ್ಯ ಯೋಜನೆ ಯಶಸ್ವಿಗೆ ಮುಂದಾಗಬೇಕೆಂದು ಆಗ್ರಹಪಡಿಸಿದರು.
ತಾಲೂಕಿನ ಹಳ್ಳಿಮೈಸೂರು ಜಿಲ್ಲೆಯಲ್ಲಿ ಹಿಂದುಳಿದ ಹೋಬಳಿಯಾಗಿದ್ದು, ಇಲ್ಲಿ ಶಾಶ್ವತ ನೀರಾವರಿ ಯೋಜನೆ ಇಲ್ಲದಿರುವುದರಿಂದ ಇಲ್ಲಿನ ಜನತೆ ಕುಡಿಯಲು ಮತ್ತು ಜಾನುವಾರುಗಳಿಗೆ ನೀರು ದೊರಕದಂತೆ ಆಗಿ ತೀವ್ರ ಸಂಕಷ್ಟದಲ್ಲಿದ್ದಾರೆ.
ಈ ಹೋಬಳಿಯಲಿ ಬರುವ 45 ಕೆರೆಗಳಿಗೆ ಗೊರೂರಿನ ಹೇಮಾವತಿ ಅಣೆಕಟ್ಟೆಯಿಂದ ನೀರು ತುಂಬಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳದೆ ಹೋದಲ್ಲಿ ಹಳ್ಳಿಮೈಸೂರು ಹೊಬಳಿಯಿಂದ ಸಾವಿರಾರು ರೈತರ ದಂಡನ್ನು ಅಣೆಕಟ್ಟೆಗೆ ಮುತ್ತಿಗೆ ಹಾಕುವ ಕೆಲಸವನ್ನು ಮಾಡಬೇಕಾದೀತೆಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾದಲ್ಲಿದೆ. ಆದರೆ ಸಮಸ್ಯೆಗಳನ್ನು ನಿಮ್ಮ ಮುಖಂಡರುಗಳಿಗೆ ತಿಳಿಸಿ ಪರಿಹಾರ ಕಂಡು ಕೊಳ್ಳಬಹುದಲ್ಲ, ಜೊತೆಗೆ ಪಕ್ಷದ ಮುಖಂಡರಾದ ನೀವು ಇಂತಹ ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ತರುವುದರಿಂದ ಪಕ್ಷ ಹಾಗು ಕಾಂಗ್ರೆಸ್ಸ್ರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿದಂತೆ ಆಗುವುದಿಲ್ಲವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಪುಟ್ಟಸ್ವಾಮಿ, ನಾವು ನಮ್ಮ ಪಕ್ಷದ ಮುಖಂಡರು ಹಾಗೂ ಜನಪ್ರತಿನಿಧಿಗಳಿಗೆ ಮಾಹಿತಿಯನ್ನು ಈಗಾಗಲೇ ನೀಡಿದ್ದೇವೆ. ಅದರೂ ನಮ್ಮ ಭಾಗದ ರೈತರ ಸಮಸ್ಯೆಗಳನ್ನು ನಿಮ್ಮ ಬಳಿ ಹೇಳಿಕೊಂಡಲ್ಲಿ ಸಮಸ್ಯೆಗಳಿಗೆ ಬೇಗನೆ ಪರಿಹಾರ ಅಧಿಕಾರಿಗಳಿಂದ ದೊರಕಬಹುದೆಂಬ ಆಶಯವಾಗಿದೆ ನಮ್ಮದಾಗಿದೆ ಎಂದರು.
ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಸವಲತ್ತುಗಳು ಸರಿಯಾಗಿ ತಲುಪುತ್ತಿಲ್ಲ, ಜತೆಗೆ ಅಲ್ಪಸಂಖ್ಯಾತರಿಗೆ ದೊರಕಬೇಕಾದ ಬ್ಯಾಂಕು ಸೌಲಭ್ಯಗಳು ದೊರಕದೆ ಅತಂತ್ರ ಸ್ಥಿತಿ ತಲುಪುವಂತಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಹಾಜರಿದ್ದ ಗೊಂದಿ ಮಲ್ಲೇನಹಳ್ಳಿ ಮಂಜೇಗೌಡ ಮಾತನಾಡಿ, ಅನ್ನ ಭಾಗ್ಯ ಯೋಜನೆ ಅಕ್ಕಿ ಇದೀಗ ಹಳ್ಳಿಮೈಸೂರು ಭಾಗದ ಜನರಿಗೆ ತಲುಪುವುದ ತಡವಾಗುತ್ತಿದೆ. ಅದ್ದರಿಂದ ಅನ್ನಭಾಗ್ಯ ಅಕ್ಕಿಯನ್ನು ಹಾಸನ ಗೋದಾಮಿನಿಂದ ನೇರ ಹಳ್ಳಿಮೈಸೂರಿಗೆ ತಲುಪುವುದರಿಂದ ಸರ್ಕಾರದ ಸಾಗಣೆಯ ವೆಚ್ಚ ಸಹ ಕಡಿಮೆ ಆಗಲಿದೆ ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ಹರೀಶ್, ಸಣ್ಣಜವರೇಗೌಡ, ಜವರೇಗೌಡ ಹಾಗು ಕುರುಬ ಸಮಾಜದ ಮುಖಂಡರು ಇದ್ದರು.
ತಾಲೂಕಿನ ಹಲವು ಕಡೆಗಳಲ್ಲಿ ಅನ್ನಭಾಗ್ಯಕ್ಕಾಗಿ ನೀಡಬೇಕಾದ ಅಕ್ಕಿಗೆ ಅಧಿಕ ಬೆಲೆ ವಸೂಲಾತಿ ಒಂದಡೆಯಾದರೆ ಮತ್ತೊಂದು ಕಡೆ ಫಲಾನುಭವಿಗಳಿಗೆ ನೀಡಬೇಕಾದ ಅಕ್ಕಿ ವಿತರಣೆ ಮಾಡುವ ಅಂಗಡಿ ಮಾಲೀಕ ಅರ್ಧ ನೀಡಿ ತನ್ನ ಜೇಬು ತುಂಬಿಸಿಕೊಳ್ಳುತ್ತಿದ್ದಾನೆ
ಟಿ ಎಸ್.ಪುಟ್ಟಸ್ವಾಮಿ,
ಕಾಂಗ್ರೆಸ್ ಮುಖಂಡ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

