ಹಾಸನ

ಕಲೆ ಹಾಗೂ ಸಂಸ್ಕೃತಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಕರೆ

Published On :

ಅರಸೀಕೆರೆ: ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅದರ ಪ್ರಯೋಜನ ಪಡೆದು ತಮ್ಮ ಭವಿಷ್ಯವನ್ನು ಉತ್ತಮಪಡಿಸಿಕೊಳ್ಳಬೇಕೆಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ ಕರೆ ನೀಡಿದರು.
 ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಫ್ಲೈಹೈ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪಠ್ಯ ಚಟುವಟಿಕೆಗಳೊಂದಿಗೆ ವಿಶೇಷ ಉಪನ್ಯಾಸ, ಕ್ರೀಡಾಚಟುವಟಿಕೆ, ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಡಬೇಕೆಂದು ಸಲಹೆ ನೀಡಿದರು.
 ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಸೈಯದ್‌ಪಾಷ ಮಾತನಾಡಿ, ಕಲಿಕೆಯ ಜೊತೆಗೆ ಉಳಿಕೆ, ಗಳಿಕೆಗೂ ಆದ್ಯತೆ ನೀಡಬೇಕು. ಆಗ ಮಾತ್ರ ವ್ಯವಹಾರಿಕ ಕಲೆಯನ್ನು ರೂಢಿಸಿಕೊಳ್ಳಲು ಸಾಧ್ಯ.
  ಇಂತಹ ವಿಶೇಷ ಉಪನ್ಯಾಸಗಳನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕೆಂದು ಹೇಳಿದರು.
 ಸಂಪನ್ಮೂಲ ವ್ಯಕ್ತಿ ಜೀವ ವಿಮಾ ನಿಗಮ ವ್ಯವಸ್ಥಾಪಕ ವಿ.ಎಸ್.ರವಿ  ಮಾತನಾಡಿದರು. ಅಭಿವೃದ್ಧಿ ಅಧಿಕಾರಿ ಡಿ.ಎಸ್.ರಾಮಸ್ವಾಮಿ, ಕೆ.ಎಸ್.ಲಿಂಗರಾಜು ಉಪಸ್ಥಿತರಿದ್ದರು.  ವಾಣಿಜ್ಯ ವಿಭಾಗದ ಮುಖ್ಯಸ್ಥ ಸುಬ್ರಮಣಿ ಎಸ್.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಚೈತ್ರ ಸ್ವಾಗತ, ಪೂರ್ಣಿಮಾ ನಿರೂಪಣೆ ಹಾಗೂ ಪೂಜಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.