'ಕಾನೂನು ಅರಿವು ಇದ್ದಲ್ಲಿ ದೌರ್ಜನ್ಯ ಇಳಿಮುಖ'
ಹಾಸನ: ದೇಶದ ಅಭಿವೃದ್ಧಿಯಲ್ಲಿ ಮಹಿಳೆ ಮತ್ತು ಮಕ್ಕಳ ಪಾತ್ರ ಬಹಳ ಮುಖ್ಯವಾಗಿದೆ. ಸಮಾಜದ ಉನ್ನತ ಶ್ರೇಣಿಗೆ ಬರುವ ಸಲುವಾಗಿ ಅನೇಕ ಕಾನೂನು ಕಾಯಿದೆಗಳು ಬಂದಿದೆ. ಆದರೆ, ಅದರ ಸರಿಯಾದ ಉಪಯೋಗವಾಗದೆ ಇರುವ ಕಾರಣದಿಂದ ಇವತ್ತು ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಸಿ. ಚಿದಾನಂದ್ ವಿಷಾದ ವ್ಯಕ್ತಪಡಿಸಿದರು.
ಇಲ್ಲಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ಮಹಿಳೆ ಮತ್ತು ಮಕ್ಕಳ ಕುರಿತಾದ ಕಾನೂನುಗಳು ವಿಷಯ ಕುರಿತು ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಕಾಯಿದೆಗಳ ಸಮರ್ಪಕ ಜಾರಿಗಾಗಿ ಗಮನ ಹರಿಸುವಂತಾಗಬೇಕೆಂದು ಕಿವಿಮಾತು ಹೇಳಿದರು. ಸಂಶೋಧನಾ ಮುಖ್ಯಸ್ಥ ಪ್ರೊ. ಕೆ.ಎಸ್. ಬಗಾಲೆ ಮಾತನಾಡಿ, ದೇಶದಲ್ಲಿ ಅನೇಕ ಕಾನೂನುಗಳು ಜಾರಿಯಾಗುತ್ತಿವೆ. ಇದರ ಸಮರ್ಪಕ ಜಾರಿಗಾಗಿ ಸಂಸ್ಥೆಯು ನಿರಂತರ ತನ್ನ ಚಟುವಟಿಕೆ ಮಾಡುತ್ತಿರುತ್ತದೆ. ಜೊತೆಗೆ ಕಾನೂನುಗಳ ರಚನೆಯಲ್ಲಿ ಸೂಕ್ತ ಮಾರ್ಪಾಡು ಮಾಡುವಲ್ಲಿ ಮಾರ್ಗದರ್ಶನ ನೀಡುತ್ತಿದೆ. ಮತ್ತು ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆವ ಹಿನ್ನೆಲೆಯಲ್ಲಿ ಅನೇಕ ವಿಚಾರ ಸಂಕಿರಣ ನಡೆಸುತ್ತದೆ ಇದನ್ನು ಸದುಪಯೋಗಪಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಕಿವಿಮಾತು ಹೇಳಿದರು.
ವಿಚಾರ ಸಂಕಿರಣದ 2 ಅಧಿವೇಶನದಲ್ಲಿ 4 ವಿಷಯ ಕುರಿತು ಪ್ರಬಂಧ ಮಂಡಿಸಲಾಯಿತು. ಮಹಿಳೆ ಮತ್ತು ಮಕ್ಕಳ ಕುರಿತಾದ ಸಂವಿಧಾನಾತ್ಮಕ ಉಪಬಂಧಗಳು ಎಂಬ ವಿಚಾರವಾಗಿ ಪ್ರಾಧ್ಯಾಪಕ ಜಿ.ಬಿ. ಪಾಟೀಲ್, ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ಹಲ್ಲೆಗಳು ಎಂಬ ವಿಚಾರವಾಗಿ ಮನೋವೈದ್ಯ ಡಾ. ಕಿರಣ್, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾನೂನುಗಳು ಎಂಬ ವಿಚಾರವಾಗಿ ವಕೀಲರಾದ ಸುಮಿತ್ರ ಆಚಾರ್ಯ ಮತ್ತು ಜಾಹ್ನವಿ ಉಪನ್ಯಾಸ ನೀಡಿದರು.
ಪ್ರಾಂಶುಪಾಲ ಮಡಿವಾಳಪ್ಪ ಮಾಟೊಳ್ಳಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಅನೇಕ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಪ್ರತಿನಿಧಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

