ಬಿಜೆಪಿ ಬೆಂಬಲಿಸಲು ವಿಜಯಶಂಕರ್ ಮನವಿ
ಹೊಳೆನರಸೀಪುರ: ಜಿಲ್ಲೆಯ ಆರ್ಥಿಕ ಶಕ್ತಿಯನ್ನು ಹೆಚ್ಚಿಸಿ, ಸಾಮಾನ್ಯ ಜನರ ಬದುಕನ್ನು ಹಸನು ಮಾಡಲು ಹಾಗೂ ನೆನೆಗುದಿಗೆ ಬಿದ್ದಿರುವ ಯೋಜನೆಗಳ ಅನುಷ್ಠಾನಕ್ಕಾಗಿ ಬಿಜೆಪಿ ಬೆಂಬಲಿಸುವಂತೆ ಹಾಸನ ಲೋಕಸಭಾ ಬಿಜೆಪಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಮನವಿ ಮಾಡಿದರು.
ಯುಗಾದಿ ಹಬ್ಬವನ್ನು ಪಟ್ಟಣದಲ್ಲಿರುವ ಅಂಬೇಡ್ಕರ್ ನಗರದಲ್ಲಿನ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಯಲ್ಲಿ ಬೇವು ಬೆಲ್ಲವನ್ನು ತಿನ್ನುವ ಮೂಲಕ ಆಚರಿಸಿದ ಅವರು, ನಂತರ ಮಾತನಾಡುತ್ತಾ ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅಭಿಪ್ರಾಯಪಟ್ಟರು.
ರೈತರ ಹಿತ ಕಾಯುವ, ಕೈಗಾರಿಕೆ ಉತ್ತೇಜಿಸುವ ಜೊತೆಗೆ ಯುವ ಸಮುದಾಯದ ಬೆಳವಣಿಗೆಗಾಗಿ ಬದಲಾವಣೆಯ ಗಾಳಿ ಬೀಸುತ್ತಿದ್ದು,ಈ ಬಾರಿ ಬಿಜೆಪಿ ಬೆಂಬಲಿಸುವಂತೆ ವಿಜಯಶಂಕರ್ ಮನವಿ ಮಾಡಿದರು. ಜಿಲ್ಲಾ ಬಿಜೆಪಿ ಮುಖಂಡ ನವಿಲೆ ಅಣ್ಣಪ್ಪ, ಜಿಲ್ಲಾ ಘಟಕ ಅಧ್ಯಕ್ಷ ರೇಣುಕುಮಾರ್, ತಾಲೂಕು ಅಧ್ಯಕ್ಷ ಎಂ.ಎನ್.ರಾಜು, ಜಿಲ್ಲಾ ಕಾರ್ಯದರ್ಶಿ ಮೈಲಾರಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚನ್ನಕೇಶವ, ಕಾರ್ಯದರ್ಶಿ ನಾಗೇಶ್, ತೀರ್ಥೇಶ್, ನಾಗರಾಜು ಹಾಗೂ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

