ಹಾಸನ

ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ

Published On :

ಹಾಸನ: ಲೋಕಸಭಾ ಸಾರ್ವಜನಿಕ ಚುನಾವಣೆಯ ಮತದಾನದ  ದಿನಾಂಕ ಸಮೀಪಿಸುತ್ತಿದ್ದು ಮಾದರಿ ನೀತಿ ಸಂಹಿತೆ ಜಾರಿಯನ್ನು ಇನ್ನಷ್ಟು ಕಟ್ಟುನಿಟ್ಟುಗೊಳಿಸಿ ಅಕ್ರಮಗಳು ಮತ್ತು ನೀತಿ ಸಂಹಿತೆ ಪ್ರಕರಣಗಳು ನಡೆಯದಂತೆ ಕಣ್ಗಾವಲು ಇರಿಸುವಂತೆ ಹಾಸನ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ಮತದಾನದ ದಿನಾಂಕ ಸಮೀಪಿಸುತ್ತಿದ್ದು ಮಾದರಿ ನೀತಿ ಸಂಹಿತೆಯನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ತಪಾಸಣೆಯನ್ನು ತೀವ್ರಗೊಳಿಸಬೇಕು. ಪ್ರಕರಣ ದಾಖಲಿಸಿಕೊಂಡು  ಕ್ರಮ ಜರುಗಿಸಬೇಕು ಎಂದು ನಿರ್ದೇಶನ ನೀಡಿದರು.
ಕಿವಿಮಾತು: ಎಲ್ಲಾ ಮಾದರಿ ನೀತಿ ಸಂಹಿತೆ ಜಾರಿ ತಂಡ ತಪ್ಪಿತಸ್ಥರ ವಿರುದ್ಧ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಬೇಕು. ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಬೇಕು. ಆದರೆ ಈ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಮಾನವೀಯತೆಯಿಂದ ನಡೆದುಕೊಂಡು ವಿಶ್ವಾಸಪೂರ್ವಕವಾಗಿ ಮಾತನಾಡಿ ತಪಾಸಣೆಗೆ ಸಹಕರಿಸುವಂತೆ ಕೋರಿ ಕಾರ್ಯ ಮುಂದುವರಿಸಬೇಕು ಎಂದು ಕಿವಿಮಾತು ಹೇಳಿದರು.
ನಗರ ಮತ್ತು ಗ್ರಾಮಾಂತರ ಪ್ರೇಶಗಳಲ್ಲಿ ಮತದಾರರಿಗೆ ಆಮಿಷ ಒಡ್ಡುವ ಹಣ, ಹೆಂಡ ಹಂಚುವ ಪ್ರಯತ್ನಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದ ಅವರು, ಮತದಾರರು ಯಾವುದೇ ಆತಂಕ ಅಥವಾ ಬಾಹ್ಯ ಪ್ರೇರಣೆ ಇಲ್ಲದೆ ಸ್ವಯಂಪ್ರೇರಿತರಾಗಿ ಮತಗಟ್ಟೆಗೆ ಬಂದು ಮತ ಚಲಾಯಿಸುವ ವಾತಾವರಣ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.
ನಿರ್ದೇಶನ: ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ದಿನಗಳಂದು ಹಾಜರಿರುವ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಉತ್ತಮ ಊಟೋಪಚಾರದ ವ್ಯವಸ್ಥೆ ಮಾಡಿರಬೇಕು. ಮತದಾನದ ದಿನದಂದು ಸಹ  ಮತಗಟ್ಟೆ ಬಳಿಯೇ ಕನಿಷ್ಠ ವೆಚ್ಚದಲ್ಲಿ ಉತ್ತಮ ಆಹಾರ ಪೂರೈಕೆ ಮಾಡಬೇಕು. ಮತಗಟ್ಟೆಗಳಿಗೆ ತೆರಳುವ  ಅಧಿಕಾರಿ, ಸಿಬ್ಬಂದಿಗಳ ಅನುಕೂಲಕ್ಕಾಗಿ ಪ್ರತಿ ಮತಗಟ್ಟೆಗೆ 25 ಲೀ. ಸಾಮರ್ಥ್ಯದ ಕುಡಿಯುವ ನೀರಿನ ಕ್ಯಾನ್, ಮತ್ತು ಪ್ರಥಮ ಚಿಕಿತ್ಸಾ ಕಿಟ್ಟನ್ನು ಕಡ್ಡಾಯವಾಗಿ ಪೂರೈಸಬೇಕೆಂದು ಸಹಾಯಕ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರರಿಗೆ ಚುನಾವಣಾಧಿಕಾರಿ ನಿರ್ದೇಶನ ನೀಡಿದರು.
ಸೂಚನೆ: ಎಲ್ಲಾ ಮತಗಟ್ಟೆಗಳಲ್ಲೂ ಸೂಕ್ತ ಮೂಲಭೂತ ಸೌಕರ್ಯಗಳಿರಬೇಕು. ಶೌಚಾಲಯ, ನೀರು, ವಿದ್ಯುತ್ ಪೂರೈಕೆ ಸಮರ್ಪಕವಾಗಿರಬೇಕು. ಜೊತೆಗೆ ಪರ್ಯಾಯ ಬೆಳಕಿನ ವ್ಯವಸ್ಥೆ ಮಾಡಿರಬೇಕು. ತಮಗೆ ಚುನಾವಣಾ ಕರ್ತವ್ಯದಲ್ಲಿ ತೊಡಗುವ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳ ಯೋಗಕ್ಷೇವುವೂ ಸಹ ಚುನಾವಣೆಯನ್ನು ಶಾಂತಿ ಸುವ್ಯಸ್ಥಿತವಾಗಿ ಚುನಾವಣೆ ನಡೆಸುವಷ್ಟೇ ಅತಿ ಮುಖ್ಯವಾದದ್ದು. ಅವರ ಸಮಸ್ಯೆ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.
ಮತಕಟ್ಟೆಗಳಿಗೆ ನೇಮಿಸಲ್ಪಟ್ಟ ಮತಗಟ್ಟೆ ಅಧಿಕಾರಿಗಳು ಮತಯಂತ್ರಗಳ ಸುರಕ್ಷತೆಯ ಹೊಣೆಗಾರಿಕೆಯನ್ನು ಹೊರಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಮತಗಟ್ಟೆಗಳಲ್ಲಿ ಮತಯಂತ್ರಗಳನ್ನು ನಿಯಮ ಬಾಹಿರವಾಗಿ ಯಾವುದೇ ಕಾರಣಕ್ಕೂ ಬೇರೆಡೆಗೆ ಕೊಂಡೊಯ್ಯುವಂತಿಲ್ಲ. ಹಾಗೆ ಮಾಡಿದಲ್ಲಿ ಅದು ಚುನಾವಣಾ ಅಪರಾಧವಾಗಲಿದ್ದು ಪ್ರಕರಣ ದಾಖಲಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಸಲಹೆ ನೀಡಿದರು.
ಚರ್ಚೆ: ಇದೇ ವೇಳೆ, ಸೂಕ್ಷ್ಮ ಅತಿ ಸೂಕ್ಷ್ಮ ಮತಗಟ್ಟೆಗಳು, ಮತದಾನದ ದಿನದಂದು ಅವುಗಳ ವ್ಯವಸ್ಥಿತ ನಿರ್ವಹಣೆ ಮೈಕ್ರೋ ಅಬ್ಸರ್ವರ್ಗಳ ನೇಮಕ, ವಿಡಿಯೋ, ಸ್ಟಿಲ್ ಕ್ಯಾಮೆರಾಗಳ ನಿಯೋಜನೆ, ವೆಬ್ ಕ್ಯಾಸ್ಟಿಂಗ್ ಮತ್ತು ಸಿಸಿ ಟಿವಿ ಅಳವಡಿಕೆ ಪೊಲೀಸ್ ಸಿಬ್ಬಂದಿಗಳ ಬಳಕೆ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ. ಡಿ. ಚನ್ನಣ್ಣನವರ್ ಅವರು ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟಗಳ ಬಗ್ಗೆ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಅವರು ಮುಂದಿನ ಹಂತಗಳಲ್ಲಿ ನಡೆಸಬೇಕಿರುವ ತರಬೇತಿಗಳು, ಮಸ್ಟರಿಂಗ್ ಡಿ ಮಸ್ಟರಿಂಗ್ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡಿದರು.
ಉಪ ವಿಭಾಗಾಧಿಕಾರಿಯಾದ ಶರತ್ ಹಾಗೂ ಮಧುಕೇಶ್ವರ್ ಅವರು ವಾಹನಗಳ ತಪಾಸಣೆ ತರಬೇತಿ ಸಂದರ್ಭದಲ್ಲಿ ವಿಡಿಯೋ ಪ್ರದರ್ಶನಗಳ ಬಗ್ಗೆ ಚರ್ಚಿಸಿದರು.
ಸಹಾಯಕ ಚುನಾವಣಾಧಿಕಾರಿಗಳು ಹಗೂ ತಹಸೀಲ್ದಾರರು ಈ ಸಂದರ್ಭದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.