ಅಕ್ರಮ ಮದ್ಯ ತಡೆಗೆ ಒತ್ತಾಯಿಸಿ ಮೌನ ಪ್ರತಿಭಟನೆ
ಸಕಲೇಶಪುರ: ಅಕ್ರಮ ಮದ್ಯ ಮರಾಟದಿಂದ ಗ್ರಾಮದಲ್ಲಿ ಅಶಾಂತಿ ನಿರ್ಮಾಣವಾಗಿದೆ ಎಂದು ಕೌಡಳ್ಳಿ ಗ್ರಾಮಸ್ಥರು ಉಪವಿಭಾಗಧಿಕಾರಿ ಕಚೇರಿ ಎದುರು ಗುರುವಾರ ಮೌನ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿರುವ ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿರುವ ಪರಿಣಾಮ ಹಿರಿಯ, ಕಿರಿಯರೆನ್ನದೇ ಮದ್ಯ ವ್ಯಸನಿಗಳಾಗಿದ್ದು, ಮದ್ಯ ಕುಡಿದದಿಂದ ಗ್ರಾಮದಲ್ಲಿ ಗಲಭೆಗಳಾಗುತ್ತಿವೆ ಎಂದು ಪ್ರತಿಭಟನಾಕಾರರು ಅಲವತ್ತುಕೊಂಡರು.
ಪುಕ್ಕಟೆ ಸಲಹೆ: ಕುಡಿತದಿಂದಾಗಿ ಕುಟಂಬ ಕಲಹಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಹಲವು ಬಾರಿ ಪಟ್ಟಣ ಠಾಣೆ ಪೊಲೀಸರಿಗೆ ಹಾಗೂ ಅಬಕಾರಿ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬದಲಾಗಿ ಅಕ್ರಮ ಮದ್ಯ ಮಾರಾಟಗಾರರ ಮನೆಯ ಮುಂದೆ ಗ್ರಾಮಸ್ಥರೇ ಪ್ರತಿಭಟಿಸುವಂತೆ ಪುಕ್ಕಟೆ ಸಲಹೆ ನೀಡುತ್ತಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಎರಡು ದಿನಗಳಲ್ಲಿ ಅಕ್ರಮ ಮದ್ಯ ಮಾರಾಟಗಾರರನ್ನು ಬಂಧಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂಬ ಮನವಿ ಉಪವಿಭಾಗಾಧಿಕಾರಿಗಳ ಕಚೇರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಶ್ರಿನಿವಾಸ್, ದೇವರಾಜ್, ಕುಮಾರ್, ಮೂರ್ತಿ, ಕಾವೇರಿ ಸ್ವಸಹಾಯ ಸಂಘ, ಕೆಂಚಾಂಬಿಕ ಮಹಿಳಾ ಸಾಕ್ಷರತಾ ಸಂಘ, ರಾಘವೇಂದ್ರ ಮಹಿಳಾ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

