ಹಾಸನ

ದಲಿತರ ಬೆಂಬಲ ಬಿಜೆಪಿಗೆ

Published On :

ಬೇಲೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು  ಎಲ್ಲಾ ಜನಾಂಗದವರು  ಮತ್ತು ದಲಿತರು ಬೆಂಬಲಿಸಲಿದ್ದು, ಅತಿ ಹೆಚ್ಚಿನ ಬಹುಮತದೊಂದಿಗೆ  ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜಿಲ್ಲಾಧ್ಯಕ್ಷ ಪರ್ವತಯ್ಯ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 50 ವರ್ಷಗಳ ಅಡಳಿತ ನಡೆಸಿರುವ ಕಾಂಗ್ರೆಸ್, ದಲಿತರ ಮತ ಪಡೆದು ಅಧಿಕಾರ ಅನುಭವಿಸಿತು. ಆದರೆ, ದಲಿತರ ಏಳಿಗೆಗೆ ಬಗ್ಗೆ ಚಿಂತಿಸಿಲ್ಲ. ಒಂದು ವೇಳೆ ದಲಿತರು ಹೆಚ್ಚಿನ ಸವಲತ್ತು ಪಡೆದರೆ ತಮಗಿಂತ ಬುದ್ಧಿವಂತರಾಗುತ್ತಾರೆ ಎಂಬ ದುರಾಲೋಚನೆಯಿಂದ ದಲಿತರ ಏಳಿಗೆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ, ದಲಿತರ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದ್ದು ದಲಿತ ಕಾಲೋನಿಗಳಲ್ಲಿ ರಸ್ತೆ, ಕುಡಿಯುವ ನೀರು, ನಿರುದ್ಯೋಗಿ ಯುವಕರಿಗೆ ಪ್ರವಾಸೋದ್ಯಮ ಇಲಾಖೆಯಿಂದ ವಾಹನ,  ಭೂಚೇತನ ಯೋಜನೆಯಡಿ ಅಬಿವೃದ್ಧಿ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಲವಾರು ಯೋಜನೆಗಳನ್ನುರೂಪಿಸುವ ಮೂಲಕ ದಲಿತರ ಏಳಿಗೆಗೆ ಅವರ ಕನಸಾಗಿತ್ತು ಎಂದರು.
ಅಸಮಾಧಾನವಿಲ್ಲ: ಬೇಲೂರು ತಾಲೂಕಿನ ಗಂಗೂರು ಗ್ರಾಮದಲ್ಲಿ ದಲಿತರ ಸವರ್ಣೀಯರ ನಡುವೆ ಕಂದಕ ನಿರ್ಮಾಣವಾಗುತ್ತಿದ್ದರೂ ಆಡಳಿತ ನಡೆಸುತ್ತಿರುವ ಜನಪ್ರತಿನಿಧಿಗಳು ಸೌಜನ್ಯಕ್ಕಾದರು ಗ್ರಾಮಕ್ಕೆ ಬೇಟಿ ನೀಡಿಲ್ಲ ಎಂದರು. ತಾಲೂಕು ಬಿಜೆಪಿಯಲ್ಲಿ ಭಿನ್ನಮತವಿದೆಯೇ ಎಂಬ ಪ್ರಶ್ನೆಗೆ ಯಾವುದೇ ಕಾರಣಕ್ಕೂ ಬಿಜೆಪಿಯಲ್ಲಿ ಅಸಮಾಧಾನವಿಲ್ಲ. ಅಲ್ಲದೇ, ಕೆಜೆಪಿ ಬಿಜೆಪಿ ನಾವು ಒಗ್ಗಟ್ಟಾಗಿ ಕೆಲಸ ಮಾಡುತ್ತಿವೆ. ಭಿನ್ನಮತ ಎಂಬುದು ಉಹಾಪೋಹ ಎಂದು ಸ್ಪಷ್ಟನೆ ನೀಡಿದರು.
ಮನವಿ: ಏ. 8ರಂದು ಹಾಸನದಲ್ಲಿ ಪರಿಶಿಷ್ಟ ಜಾತಿ ವರ್ಗಗಳ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಈ ಸಮಾವೇಶದಲ್ಲಿ ಅಭ್ಯರ್ಥಿ ವಿಜಯಶಂಕರ್, ಬಿಜೆಪಿ ಮುಖಂಡರು ಭಾಗವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ಮಲ್ಲಿಕಾರ್ಜುನ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.